ಮುಖ್ಯಮಂತ್ರಿ ಆರೋಗ್ಯ ವಿಮಾ ಕಾರ್ಡ್ ನವೀಕರಣ

ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಪರಿಶಿಷ್ಟ ಜಾತಿ/ ಪ.ಪಂಗಡದ ಕುಟುಂಬದ ಸದಸ್ಯರಿಗೆ ವಿತರಿಸಲಾದ ಮುಖ್ಯಮಂತ್ರಿ ಆರೋಗ್ಯ ವಿಮಾ ಕಾರ್ಡ್‌ನ್ನು ಪ್ರಸಕ್ತ ಸಾಲಿನಲ್ಲಿ ನವೀಕರಿಸಲಾಗುತ್ತಿದೆ.
ಕಾರ್ಡ್ ಹೊಂದಿರುವ ಕುಟುಂಬದ ಯಾವುದಾದರೂ ಒಬ್ಬ ಸದಸ್ಯರು ತಮ್ಮ ಕುಟುಂಬದ ಎಲ್ಲಾ ಸದಸ್ಯರ ಬಗ್ಗೆ ಮುಚ್ಚಳಿಕೆ ಪತ್ರ ಹಾಗೂ ಹಳೆ ಆರೋಗ್ಯ ಕಾರ್ಡ್ ಪ್ರತಿಯೊಂದಿಗೆ ಜುಲೈ 21ರ ಒಳಗೆ ನಗರಸಭಾ ಕಚೇರಿಗೆ ಹಾಜರಾಗಿ ದಾಖಲೆಗಳನ್ನು ಸಲ್ಲಿಸುವಂತೆ ತಿಳಿಸಲಾಗಿದೆ. ದಾಖಲೆ ಸಲ್ಲಿಸಿದವರ ಕಾರ್ಡ್‌ಗಳನ್ನು ಮಾತ್ರ ನವೀಕರಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
Next Story





