ಡಾ.ಗಣನಾಥ ಎಕ್ಕಾರಿಗೆ ಜೀಶಂಪ ರಾಜ್ಯ ಪ್ರಶಸ್ತಿ

ಡಾ. ಗಣನಾಥ ಎಕ್ಕಾರು
ಉಡುಪಿ: ನಾಡಿನ ಹಿರಿಯ ಜಾನಪದ ವಿದ್ವಾಂಸ, ನಿವೃತ್ತ ಪ್ರಾಂಶುಪಾಲ, ಜಿಲ್ಲಾ ರೆಡ್ ಕ್ರಾಸ್ ಕಾರ್ಯ ದರ್ಶಿ ಹಾಗೂ ಡಾ. ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ. ಗಣನಾಥ ಎಕ್ಕಾರು ಅವರಿಗೆ ಕನ್ನಡ ಜಾನಪದ ಪರಿಷತ್ತು ಬೆಂಗಳೂರು ದಶಮನೋತ್ಸವದ ಅಂಗವಾಗಿ ಜೀಶಂಪ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಿದೆ.
ಜೂನ್ 25ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ರಾಜ್ಯ ಪ್ರಥಮ ಜಾನಪದ ಸಮ್ಮೇಳನದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಲಿದೆ. ಜಾನಪದ ಸಂಸ್ಕೃತಿಗೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನ್ನು ನೀಡಲಾಗುತ್ತಿದೆ.
ಇದೇ ಸಂದರ್ಭದಲ್ಲಿ ನ್ಯಾಯಮೂರ್ತಿ ಅರಳಿ ನಾಗರಾಜ್, ಹಿರಿಯ ಜಾನಪದ ವಿದ್ವಾಂಸರಾದ ಡಾ.ಮೀರಾ ಸಾಬಿಹಳ್ಳಿ ಶಿವಣ್ಣ, ಡಾ.ಅಪ್ಪಗೆರೆ ತಿಮ್ಮರಾಜು, ಡಾ.ಬಾನಂದೂರು ಕೆಂಪಯ್ಯ ಅವರಿಗೂ ಜೀಶಂಸ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಕನ್ನಡ ಜಾನಪದ ಪರಿಷತ್ ಪ್ರಕಟಣೆಯಲ್ಲಿ ತಿಳಿಸಿದೆ.
ನಾಡಿನ ಶ್ರೇಷ್ಠ ರಂಗವಲ್ಲಿ ಕಲಾವಿದೆ ಕುಂದಾಪುರದ ಡಾ.ಭಾರತಿ ಮರವಂತೆ ಅವರಿಗೆ ಕವಿ ಮಧುರ ಚೆನ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದೂ ಪ್ರಕಟಣೆ ತಿಳಿಸಿದೆ.