ಕೋಡಿ ಸೀವಾಕ್‌ನಲ್ಲಿ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ

ಕುಂದಾಪುರ, ಜೂ.24: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಕೋಡಿಯ ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಕೃತಿಯ ಮಧ್ಯದಲ್ಲಿರುವ ಕುಂದಾಪುರದ ಕೋಡಿ ಸೀ ವಾಕ್‌ನಲ್ಲಿ ಬಿ.ಎಡ್ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ನಡೆಯಿತು.
ಕಾಲೇಜಿನ ಸಹ ಪ್ರಾಧ್ಯಾಪಕರು ಮತ್ತು ಯೋಗ ತರಬೇತದಾರರೂ ಆದ ಡಾ. ವೆಂಕಟೇಶ್ ಎಸ್. ಅವರ ಮಾರ್ಗದರ್ಶನದಲ್ಲಿ ಯೋಗ ಪ್ರದರ್ಶನ ನಡೆಯಿತು. ಯೋಗ ತರಬೇತಿಯನ್ನು ನೀಡಲಾಯಿತು. ಕಾಲೇಜಿನ ಬಿ.ಎಡ್ ವಿದ್ಯಾರ್ಥಿಗಳು, ಎಲ್ಲಾ ಬೋಧಕ ವರ್ಗದವರು ಸಕ್ರಿಯವಾಗಿ ಇದರಲ್ಲಿ ಪಾಲ್ಗೊಂಡರು.
Next Story