ದಲಿತ ಸಾಹಿತ್ಯ-ಅರ್ಧ ಶತಮಾನ: ಅಧ್ಯಯನ ಶಿಬಿರ
ಉಡುಪಿ : ಕರ್ನಾಟಕ ಸಾಹಿತ್ಯ ಅಕಾಡೆಮಿಯ ವತಿಯಿಂದ ವಿಶೇಷ ಘಟಕ ಯೋಜನೆಯಡಿ ದಲಿತ ಸಾಹಿತ್ಯ- ಅರ್ಧ ಶತಮಾನ ಎಂಬ ಶೀರ್ಘಿಕೆಯಡಿ ಮೂರು ದಿನಗಳ ಅಧ್ಯಯನ ಶಿಬಿರವನ್ನು ಸೆಪ್ಟಂಬರ್ ತಿಂಗಳಲ್ಲಿ ನಡೆಸಲು ಉದ್ದೇಶಿಸಿದ್ದು, ರಾಜ್ಯದ ಆಸಕ್ತ 20 ರಿಂದ 50 ವರ್ಷದೊಳಗಿನ ಪರಿಶಿಷ್ಟ ಜಾತಿಗೆ ಸೇರಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ -https://sahithyaacademy.karnataka.gov.in- ಅಕಾಡೆಮಿ ವೆಬ್‌ಸೈಟ್‌ನ್ನು ಸಂಪರ್ಕಿಸಬಹುದು ಎಂದು ಅಕಾಡೆಮಿ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





