ಕಾರ್ಕಳ: ಎಸ್ ವಿ.ಟಿ.ಯಲ್ಲಿ ಯಕ್ಷಗಾನ ಕೇಂದ್ರದ ಉದ್ಘಾಟನೆ

ಕಾರ್ಕಳ: ಇಲ್ಲಿನ ಎಸ್.ವಿ.ಟಿ. ವಿದ್ಯಾಸಂಸ್ಥೆಯಲ್ಲಿ ಯಕ್ಷಗಾನ ಕೇಂದ್ರದ ಪ್ರಸಕ್ತ ಶೈಕ್ಷಣಿಕ ವರ್ಷದ ಉದ್ಘಾಟನಾ ಕಾರ್ಯಕ್ರಮ ಅಂಡಾರು ವಿಠಲ ರುಕ್ಮಿಣಿ ಕಿಣಿ ಸಾಂಸ್ಕೃತಿಕ ಸಭಾಭವನದಲ್ಲಿ ನಡೆಯಿತು.
ಯಕ್ಷಗಾನ ಕೇಂದ್ರದ ನಿರ್ದೇಶಕ, ನಿವೃತ್ತ ಉಪನ್ಯಾಸಕ ಎಸ್. ರಾಮ ಭಟ್ ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ವಿ.ಟಿ. ವನಿತಾ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ನೇಮಿರಾಜ ಶೆಟ್ಟಿ ಕೆ. ವಹಿಸಿದ್ದರು.
ಕಾರ್ಯಕ್ರಮದಲ್ಲಿ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಯೋಗೇಂದ್ರ ನಾಯಕ್, ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಮಾಲಿನಿ ಕೆ., ಎಸ್.ವಿ.ಟಿ. ಮಹಿಳಾ ಕಾಲೇಜಿನ ಪ್ರಾಚಾರ್ಯೆ ಗೀತಾ ಜಿ. ಉಪಸ್ಥಿತರಿದ್ದರು.
ಅಧ್ಯಾಪಕ ದೇವದಾಸ್ ಕೆರೆಮನೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಯಕ್ಷಗಾನ ಕೇಂದ್ರದ ಪ್ರಧಾನ ಗುರು ಅಜಿತ್ ಕುಮಾರ್ ಜೈನ್ ವಂದಿಸಿದರು.
Next Story







