ಹವಾಮಾನ ಆಧಾರಿತ ಬೆಳೆ ವಿಮೆ ಅವಧಿ ವಿಸ್ತರಣೆಗೆ ಸಂಸದ ಕೋಟ ಮನವಿ

ಉಡುಪಿ, ಜೂ.30: ಉಡುಪಿ ಜಿಲ್ಲೆಯಲ್ಲಿ 2025-26ನೇ ಸಾಲಿಗೆ ಅಡಿಕೆ ಮತ್ತು ಕಾಳು ಮೆಣಸು ಬೆಳೆ ಗಳನ್ನು ವಿಮೆಗೆ ಒಳಪಡಿಸಲು ಜೂನ್ 1ರಿಂದ 30ರವರೆಗೆ ಬೆಳೆ ವಿಮೆ ಅರ್ಜಿಯನ್ನು ಸಲ್ಲಿಸಲು ಕಾಲಾವ ಕಾಶ ನೀಡಲಾಗಿದೆ.
ಈ ಸಮಯವನ್ನು ವಿಸ್ತರಣೆ ಮಾಡಲು ಉಡುಪಿ ಜಿಲ್ಲೆಯ ಕೃಷಿಕರು ಮನವಿ ಮಾಡಿದ ಹಿನ್ನೆಲೆಯಲ್ಲಿ ಈ ಬಗ್ಗೆ ರಾಜ್ಯ ಸರ್ಕಾರದ ತೋಟಗಾರಿಕಾ ಇಲಾಖೆಯ ಸಚಿವರು ಮತ್ತು ಕೇಂದ್ರದ ಅಧಿಕಾರಿಗಳ ಜೊತೆ ದೂರ ವಾಣಿ ಸಂಪರ್ಕದೊಂದಿಗೆ ಮಾತುಕತೆ ನಡೆಸಿರುವ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಅವಧಿ ವಿಸ್ತರಿಸಲು ಸಚಿವರಿಗೆ ಪತ್ರವನ್ನೂ ಬರೆದಿದ್ದಾರೆ.
ರಾಜ್ಯ ತೋಟಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿ, 2025-26ನೇ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಿ ಸಮಗ್ರ ವರದಿಯನ್ನು ಕೇಂದ್ರಕ್ಕೆ ಸಲ್ಲಿಸಲು ಸಂಸದ ಕೋಟ ಶ್ರೀನಿವಾಸ ಪೂಜಾರಿ ಪತ್ರದಲ್ಲಿ ಸೂಚಿಸಿದ್ದಾರೆ.
Next Story





