ಬ್ರಹ್ಮಾವರ | ದನದ ತಲೆ ಬುರುಡೆ ಪತ್ತೆ ಪ್ರಕರಣ: ಪೊಲೀಸ್ ಇಲಾಖೆಗೆ ಶಾಸಕ ಯಶ್ಪಾಲ್ ಅಭಿನಂದನೆ

ಉಡುಪಿ, ಜೂ.30: ಕುಂಜಾಲು ಮುಖ್ಯ ರಸ್ತೆಯಲ್ಲಿ ಗೋವಿನ ರುಂಡ ಹಾಗೂ ದೇಹದ ಭಾಗಗಳನ್ನು ಎಸೆದಿದ್ದ ಪ್ರಕರಣದ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಿದ ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅಭಿನಂದನೆ ಸಲ್ಲಿಸಿದ್ದಾರೆ.
ಹಿಂದೂಗಳು ಪೂಜಿಸುವ ದನವನ್ನು ಹತ್ಯೆ ಮಾಡಿ ಕುಂಜಾಲು ರಾಮ ಮಂದಿರದ ಸಮೀಪದಲ್ಲಿ ಎಸೆದು ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳನ್ನು ತಕ್ಷಣ ಪತ್ತೆ ಹಚ್ಚಿ ಪೋಲಿಸ್ ಇಲಾಖೆ ಬಂಧಿಸಿರುವುದು ಶ್ಲಾಘನೀಯ ಎಂದು ಹೇಳಿಕೆಯಲ್ಲಿ ತಿಳಿಸಿರುವ ಅವರು, ಕಳೆದ ಡಿಸೆಂಬರ್ ತಿಂಗಳಿನಲ್ಲಿ ಹಾರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ರಸ್ತೆ ಬದಿಯಲ್ಲಿ ಸಿಕ್ಕಿದ ಗೋವಿನ ಕಳೇಬರದ ಬಗ್ಗೆಯೂ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಪ್ರಕರಣದ ಆರೋಪಿಗಳ ಬಂಧನಕ್ಕೂ ಪೊಲೀಸ್ ಇಲಾಖೆ ಮುಂದಾಗಬೇಕು ಎಂದವರು ಆಗ್ರಹಿಸಿದ್ದಾರೆ.
Next Story





