Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವಚನ ಸಾಹಿತ್ಯ ಪ್ರಚಾರಕ್ಕೆ ಬದುಕನ್ನೇ...

ವಚನ ಸಾಹಿತ್ಯ ಪ್ರಚಾರಕ್ಕೆ ಬದುಕನ್ನೇ ಮುಡಿಪಿಟ್ಟ ಡಾ.ಫ.ಗು.ಹಳಕಟ್ಟಿ: ಎಡಿಸಿ ಅಬೀದ್ ಗದ್ಯಾಳ್

ವಾರ್ತಾಭಾರತಿವಾರ್ತಾಭಾರತಿ2 July 2025 9:11 PM IST
share
ವಚನ ಸಾಹಿತ್ಯ ಪ್ರಚಾರಕ್ಕೆ ಬದುಕನ್ನೇ ಮುಡಿಪಿಟ್ಟ ಡಾ.ಫ.ಗು.ಹಳಕಟ್ಟಿ: ಎಡಿಸಿ ಅಬೀದ್ ಗದ್ಯಾಳ್

ಉಡುಪಿ: ತತ್ವಸಿದ್ಧಾಂತಗಳನ್ನು ಅತ್ಯಂತ ಸರಳವಾಗಿ ಜನಸಾಮಾನ್ಯ ರಿಗೆ ಮನದಟ್ಟು ಮಾಡುವಲ್ಲಿ ವಚನ ಸಾಹಿತ್ಯ ಕನ್ನಡ ಸಾಹಿತ್ಯದ ಪ್ರಮುಖ ಅಂಗವಾಗಿದೆ. ಕನ್ನಡದ ಶರಣರ ಇಂಥ ವಚನಗಳನ್ನು ಸಂಗ್ರಹಿಸಿ, ಪ್ರಚಾರ ಮಾಡಲು ಡಾ.ಫ.ಗು.ಹಳಕಟ್ಟಿ ಅವರು ತಮ್ಮ ಬದುಕನ್ನೇ ಮುಡಿಪಾಗಿಟ್ಟಿದ್ದರು ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಹೇಳಿದ್ದಾರೆ.

ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಎವಿ ಸಭಾಂಗಣದಲ್ಲಿ ಬುಧವಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಡಾ.ಫ.ಗು.ಹಳಕಟ್ಟಿ ಅವರ ಜನ್ಮದಿನ ಹಾಗೂ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯನ್ನು ಉದ್ಘಾಟಿಸಿ, ಡಾ.ಫ.ಗು.ಹಳಕಟ್ಟಿ ಭಾವಚಿತ್ರಕ್ಕೆ ಪುಷ್ಫಾರ್ಚನೆ ಸಲ್ಲಿಸಿ ಅವರು ಮಾತನಾಡುತ್ತಿದ್ದರು.

ವಚನ ಸಾಹಿತ್ಯಗಳು ಸಮಾಜದಲ್ಲಿ ಅನೇಕ ರೀತಿಯ ಸುಧಾರಣೆಯನ್ನು ತಂದಿದ್ದು, ಇಂತಹ ವಚನ ಗಳನ್ನು ಸಂಶೋಧಿಸಿ ಅವುಗಳ ಕುರಿತು ಸಮಾಜ ದಲ್ಲಿ ಜಾಗೃತಿ ಮೂಡಿಸುವ ಅದ್ಭುತ ಕೆಲಸವನ್ನು ಮಾಡಿದ ಡಾ.ಫ.ಗು. ಹಳಕಟ್ಟಿ ಅವರನ್ನು ನೆನೆಯುವ ಉದ್ದೇಶದಿಂದ ಅವರ ಜನ್ಮ ದಿನವನ್ನು ವಚನ ಸಾಹಿತ್ಯ ಸಂರಕ್ಷಣಾ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದರು.

ವಚನ ಸಾಹಿತ್ಯವು ಪ್ರಜಾಪ್ರಭುತ್ವವಾದಿ ನಿಲುವಿನ ಸಾಹಿತ್ಯ. ಇದು ಸಮಾಜದ ಎಲ್ಲಾ ವರ್ಗಗಳನ್ನು ಒಳಗೊಂಡ ಸಾಹಿತ್ಯವಾಗಿದೆ. ಬಸವಾದಿ ಶಿವಶರಣೆಯರ ವಚನಗಳನ್ನು ವಿದ್ಯಾರ್ಥಿಗಳು ಓದಿ ಅವುಗಳ ಸಾರವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ತಿಳಿಸಿದರು.

ಡಾ.ಫ.ಗು.ಹಳಕಟ್ಟಿ ಅವರ ಕುರಿತು ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ಡಾ.ಟಿ.ಎಂ.ಎ.ಪೈ ಶಿಕ್ಷಣ ಮಹಾವಿದ್ಯಾಲಯದ ಡಾ. ಮಹಾಬಲೇಶ್ವರ ರಾವ್, ಅತ್ಯಂತ ಸರಳ ಜೀವನ ಸಾಗಿಸಿದ ಹಳಕಟ್ಟಿಯವರು ವಚನ ಸಾಹಿತ್ಯವನ್ನು ಸಂಗ್ರಹಿಸಿ, ತಮ್ಮ ಸ್ವಂತ ಹಣದಿಂದ ಮುದ್ರಣ ಮಾಡುವುದರೊಂದಿಗೆ, ವಚನ ಗಳಿಗೆ ಬಿಡುಗಡೆ ಭಾಗ್ಯ ಒದಗಿಸಿದರು. ಕನ್ನಡ ಸಾಹಿತ್ಯದ ಏಳಿಗೆಗಾಗಿ ಶ್ರಮಿಸುವ ಜೊತೆಗೆ ಕರ್ನಾಟಕದ ಏಕೀಕರಣಕ್ಕಾಗಿ ತಮ್ಮದೇ ರೀತಿಯಲ್ಲಿ ಹೋರಾಟ ನಡೆಸಿ, ಕನ್ನಡಿಗರಲ್ಲಿ ಕವಿದಿದ್ದ ವಿಸ್ಮತಿ ಪೊರೆಯನ್ನು ಕಳಚಿ, ಕನ್ನಡ ಸಾಹಿತ್ಯದ ಮಹತ್ವದ ಕುರಿತು ಅರಿವು ಮೂಡಿಸಿದರು ಎಂದರು.

ವಚನಗಳು ಅಧ್ಯಾತ್ಮಿಕ ಸಾಹಿತ್ಯ. ಯುವ ಪೀಳಿಗೆ ವಚನಗಳನ್ನು ಓದಿ ಜೀವನ ಪಾಠಗಳನ್ನು ಅಳವಡಿ ಸುವ ಮೂಲಕ ವಚನ ಸಾಹಿತ್ಯವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ. ಇಂದಿನ ಪೀಳಿಗೆ ಅವರು ತೋರಿದ ಬದುಕಿನ ಆದರ್ಶಗಳ ದಾರಿಯಲ್ಲಿ ಮುನ್ನಡೆಯಬೇಕು ಎಂದರು.

ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ನಿತ್ಯಾನಂದ ವಿ.ಗಾಂವ್ಕರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ಡಾ.ನಿರಂಜನ್, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಅಧ್ಯಕ್ಷ ಸಿದ್ಧಬಸಯ್ಯ ಸ್ವಾಮಿ ಚಿಕ್ಕಮಠ ಹಾಗೂ ಇತರರು ಉಪಸ್ಥಿತ ರಿದ್ದರು.

ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರೆ, ರಾಮಾಂಜಿ ಕಾರ್ಯಕ್ರಮ ನಿರೂಪಿಸಿದರು. ತೆಂಕನಿಡಿಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ ಕರಬ ವಂದಿಸಿದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X