Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ರಾಜಕೀಯ ಸ್ವಾರ್ಥಕ್ಕಾಗಿ ಕೋಮು...

ರಾಜಕೀಯ ಸ್ವಾರ್ಥಕ್ಕಾಗಿ ಕೋಮು ಸಾಮರಸ್ಯಕ್ಕೆ ಧಕ್ಕೆ: ಸೌಮ್ಯ ರೆಡ್ಡಿ

ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ

ವಾರ್ತಾಭಾರತಿವಾರ್ತಾಭಾರತಿ4 July 2025 8:25 PM IST
share
ರಾಜಕೀಯ ಸ್ವಾರ್ಥಕ್ಕಾಗಿ ಕೋಮು ಸಾಮರಸ್ಯಕ್ಕೆ ಧಕ್ಕೆ: ಸೌಮ್ಯ ರೆಡ್ಡಿ

ಉಡುಪಿ: ರಾಜಕೀಯ ಲಾಭಕ್ಕಾಗಿ ಕೋಮು ಸಂಘರ್ಷ ಹಾಗೂ ಧ್ವೇಷ ಭಾಷಣದ ಮೂಲಕ ಕರಾವಳಿ ಯಲ್ಲಿ ಕೋಮು ಸಾಮರಸ್ಯ ಹಾಳುವ ಮಾಡುವ ಕಾರ್ಯ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಧ್ವೇಷದ ವಾತಾವರಣ ಬೇಕೆ ಅಥವಾ ಅಭಿವೃದ್ಧಿ ಬೇಕೆ ಎಂಬುದರ ಬಗ್ಗೆ ಚರ್ಚೆ ಮಾಡಬೇಕು. ಆ ಮೂಲಕ ಜಿಲ್ಲೆಯಲ್ಲಿ ಸಾಮರಸ್ಯದ ವಾತಾವರಣ ನಿರ್ಮಿಸುವ ಕಾರ್ಯ ಮಾಡಬೇಕು ಎಂದು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಹೇಳಿದ್ದಾರೆ.

ಬನ್ನಂಜೆ ಶ್ರೀನಾರಾಯಣ ಗುರು ಸಭಾಭವನದಲ್ಲಿ ಶುಕ್ರವಾರ ನಡೆದ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷರ ಹಾಗೂ ಸಮಿತಿಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.

ಸಂಕಲ್ಪ, ಸರ್ಮಪಣೆ ಮೂಲಕ ಸಂಘರ್ಷವನ್ನು ಬದಿಗೊತ್ತಿ ತಳಮಟ್ಟದಿಂದಲೇ ಪಕ್ಷವನ್ನು ಕಟ್ಟಬೇಕು ಮತ್ತು ಮಹಿಳಾ ಮತದಾರರನ್ನು ಸಂಘಟಿಸಬೇಕು. ಜಾತಿ ಧರ್ಮದ ತಾರತಮ್ಯ ಇಲ್ಲದೇ ಎಲ್ಲರನ್ನು ಒಗ್ಗೂಡಿಸಿ ಕೊಂಡು ಕರೆದೊಯ್ಯುವ ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಜನರಿಗೆ ತಿಳಿಸುವ ಕಾರ್ಯ ಮಾಡಬೇಕು ಎಂದರು.

ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಆ ಹಣದಿಂದ ಹೊಸಹೊಸ ವ್ಯವಹಾರ ಆರಂಭಿಸಿದ್ದಾರೆ, ಕೆಲವರು ಮಕ್ಕಳ ಶಿಕ್ಷಣ, ಆರೋಗ್ಯಕ್ಕೆ ಬಳಸಿ ಕೊಂಡಿದ್ದಾರೆ. ಉಚಿತ ಬಸ್ ಪ್ರಯಾಣದಿಂದ ಗ್ರಾಮೀಣ ಪ್ರದೇಶದ ಮಹಿಳೆಯರು ಸ್ವಾಭಿಮಾನದಿಂದ ಎಲ್ಲ ಕಡೆ ತಿರುಗಾಡುತ್ತಿದ್ದಾರೆ. ಮುಂದಿನ ಪೀಳಿಗೆಯನ್ನು ಗಮನದಲ್ಲಿರಿಸಿಕೊಂಡು ಮಹಿಳೆಯರ ಕೈ ಬಲಪಡಿಸಲು ಸರಕಾರ ಈ ಎಲ್ಲ ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗ್ಯಾರಂಟಿ ಫಲಾನುಭವಿಗಳ ಸಭೆ ನಡೆಸಿ ಅದರ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಅವರು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಮಾತನಾಡಿ, ಯಾವುದೇ ಸರಕಾರ ಇಂದು ಅಧಿಕಾರಕ್ಕೇರಲು ಮಹಿಳಾ ಮತದಾರರು ಮುಖ್ಯ. ಅವರ ಸಂಖ್ಯೆಯೇ ಹೆಚ್ಚಾಗಿರುವುದರಿಂದ ಅವರೇ ನಿರ್ಣಯಕರು ಆಗಿದ್ದಾರೆ. ಅದನ್ನು ಅರ್ಥ ಮಾಡಿಕೊಂಡು ಅವರಿಗೆ ಸ್ಥಾನಮಾನ ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಸರಕಾರದ ಬಗ್ಗೆ ಬಿಜೆಪಿಯವರು ನಡೆಸುತ್ತಿರುವ ಅಪಪ್ರಚಾರದ ವಿರುದ್ಧ ನಮ್ಮ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕು ಎಂದು ತಿಳಿಸಿದರು.

ನಿಗರ್ಮನ ಅಧ್ಯಕ್ಷೆ ಗೀತಾ ವಾಗ್ಳೆ ನೂತನ ಅಧ್ಯಕ್ಷೆ ಜ್ಯೋತಿ ಕೃಷ್ಮ ಹೆಬ್ಬಾರ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಮಾಜಿ ಸಚಿವರಾದ ಜಯಪ್ರಕಾಶ್ ಹೆಗ್ಡೆ, ವಿನಯ ಕುಮಾರ್ ಸೊರಕೆ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿದರು.

ವೇದಿಕೆಯಲ್ಲಿ ಕಾಂಗ್ರೆಸ್ ಮುಖಂಡರಾದ ಎಂ.ಎ.ಗಫೂರ್, ಪ್ರಸಾದ್‌ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ, ಮುನಿಯಾಲು ಉದಯ ಶೆಟ್ಟಿ, ಮಮತಾ ಗಟ್ಟಿ, ಲಾವಣ್ಯ ಬಲ್ಲಾಳ್, ವರೋನಿಕಾ ಕರ್ನೆಲಿಯೋ, ಸರಳ ಕಾಂಚನ್, ದಿನಕರ ಹೆರೂರು, ಸರಸು ಡಿ.ಬಂಗೇರ, ಹರೀಶ್ ಕಿಣಿ, ರಾಜು ಪೂಜಾರಿ, ಕೃಷ್ಣ ಶೆಟ್ಟಿ ಬಜಗೋಳಿ ಉಪಸ್ಥಿತರಿದ್ದರು. ಸತೀಶ್ ಕೊಡವೂರು ಕಾರ್ಯಕ್ರಮ ನಿರೂಪಿಸಿದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X