ಕೂಲಿ ಕಾರ್ಮಿಕ ನಾಪತ್ತೆ

ಉಡುಪಿ, ಜು.4: ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರಭಾಕರ ದೇವಾಡಿಗ (46) ಎಂಬ ಕೂಲಿ ಕಾರ್ಮಿಕ ಕೆಲಸಕ್ಕೆಂದು ಹೋದವರು ಮರಳಿ ಮನೆಗೆ ಬಾರದೇ ನಾಪತ್ತೆಯಾಗಿದ್ದಾರೆ.
ಮಧ್ಯಪಾನದ ಚಟ ಹೊಂದಿರುವ ಇವರು ಹಿಂದೆ ಅನೇಕ ಸಲ ಕೆಲಸಕ್ಕೆಂದು ಹೋಗಿ 2-3 ತಿಂಗಳು ಮನೆಗೆ ಬರುತ್ತಿರಲಿಲ್ಲ. ಆದರೆ 2023ರ ಡಿಸೆಂಬರ್ ತಿಂಗಳಲ್ಲಿ ಹೀಗೆ ಮನೆಯಿಂದ ಹೋದವರು ಈವರೆಗೂ ಮನೆಗೆ ಮರಳದೇ, ಸಂಬಂಧಿಕರ ಮನೆಗೂ ಹೋಗದೇ ನಾಪತ್ತೆಯಾಗಿದ್ದಾರೆ.
5 ಅಡಿ 5 ಇಂಚು ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ತುಳು, ಹಿಂದಿ ಹಾಗೂ ಮರಾಠಿ ಭಾಷೆ ಮಾತನಾಡು ತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹೆಬ್ರಿ ಪೊಲೀಸ್ ಠಾಣೆ ದೂ.ಸಂಖ್ಯೆ: 08253-251116, ಪಿ.ಎಸ್.ಐ ಮೊ.ನಂ: 9480805463, ಕಾರ್ಕಳ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08258-231083 ಹಾಗೂ ಮೊ.ನಂ: 9480805435ನ್ನು ಸಂಪರ್ಕಿಸಬಹುದು ಎಂದು ಹೆಬ್ರಿ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Next Story





