Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕರಾವಳಿ ಸಂಘಪರಿವಾರದ ಕೋಮು ಹಿಂಸೆಯ...

ಕರಾವಳಿ ಸಂಘಪರಿವಾರದ ಕೋಮು ಹಿಂಸೆಯ ಇಂಡಸ್ಟ್ರೀ: ಪ್ರೊ.ಫಣಿರಾಜ್

ಕುಂಜಾಲು- ನೀಲಾವರ ಸಾಮರಸ್ಯ ನಡಿಗೆ -ಸೌಹಾರ್ದ ಸಭೆ

ವಾರ್ತಾಭಾರತಿವಾರ್ತಾಭಾರತಿ6 July 2025 5:47 PM IST
share
ಕರಾವಳಿ ಸಂಘಪರಿವಾರದ ಕೋಮು ಹಿಂಸೆಯ ಇಂಡಸ್ಟ್ರೀ: ಪ್ರೊ.ಫಣಿರಾಜ್

ಬ್ರಹ್ಮಾವರ: ಸಂಘಪರಿವಾರ ಹಾಗೂ ಬಿಜೆಪಿಗೆ ಕರಾವಳಿ ಜಿಲ್ಲೆಗಳು ಹಿಂದುತ್ವದ ಪ್ರಯೋಗಾಲಯ ಗಳಾಗಿವೆ. ಕೋಮು ಹಿಂಸೆಯನ್ನು ನಿರಂತರವಾಗಿ ಚಾಲನೆಯಲ್ಲಿ ಇಟ್ಟುಕೊಳ್ಳುವ ಇಂಡಸ್ಟ್ರೀ ಆಗಿದೆ. ಇದಕ್ಕೆ ಹಣ ಹೂಡಿಕೆ ಮಾಡುತ್ತಾರೆ ಮತ್ತು ಅದರ ಲಾಭದ ನಿರೀಕ್ಷೆಯಲ್ಲೂ ಇರುತ್ತಾರೆ ಎಂದು ಹಿರಿಯ ಚಿಂತಕ ಪ್ರೊ.ಫಣಿರಾಜ್ ಹೇಳಿದ್ದಾರೆ.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ, ಸಹಬಾಳ್ವೆ ಮತ್ತು ಮಾನವ ಬಂಧುತ್ವ ಉಡುಪಿ ವಲಯ ಹಾಗೂ ಸಮಾನ ಮನಸ್ಕ ಸಂಘಟನೆಗಳ ಆಶ್ರಯದಲ್ಲಿ ರವಿವಾರ ನೀಲಾವರದಲ್ಲಿ ಹಮ್ಮಿಕೊಳ್ಳಲಾದ ಸಾಮರಸ್ಯ ನಡಿಗೆ -ಸೌಹಾರ್ದ ಸಭೆಯನ್ನುದ್ದೇಶಿಸಿ ಅವರು ಮಾತನಾಡುತಿದ್ದರು.

ಸಮಾಜದಲ್ಲಿ ಉದ್ರೇಕ ಎಬ್ಬಿಸಿ ಕೋಮು ಹಿಂಸೆಯನ್ನು ಜ್ವಲಂತವಾಗಿರಿಸುವ ಪ್ರಯತ್ನ ನಡೆಯುತ್ತಿದೆ. ಇದು 2000ರಿಂದ ಉಡುಪಿ ಜಿಲ್ಲೆಯಲ್ಲಿ ಮುಂದು ವರೆಯುತ್ತಿದೆ. ಇವರೇ ದಾಳಿ ಮಾಡಿ, ಇವರೇ ಬೀದಿಗೆ ಬಂದು ಪ್ರತಿಭಟನೆ ನಡೆಸುತ್ತಾರೆ ಎಂದ ಅವರು, ಕರಾವಳಿಯ ಹಿಂದುಳಿದ ಜಾತಿಯ ಯುವಕರನ್ನು ಸಂಘಪರಿವಾರ ಹಿಂಸೆಗೆ ಇಳಿಸುತ್ತದೆ ಮತ್ತು ಜೈಲುಪಾಲಾಗಿಸುತ್ತದೆ. ಮತ್ತೆ ಅವರಿಗೂ ಅವರ ಕುಟುಂಬಕ್ಕೂ ಹಣ ನೀಡುತ್ತದೆ. ಅವರ ಕೇಸ್ ನಡೆಸಲು ಕ್ರಿಮಿನಲ್ ವಕೀಲರನ್ನು ನಿಯೋಜಿಸಲಾಗುತ್ತದೆ. ಹೀಗೆ ಇದೊಂದು ಉದ್ಯಮ ವಾಗಿ ಬಿಟ್ಟಿದೆ ಎಂದರು.

ನಾವು ಇಂತಹ ಘಟನೆ ನಡೆದಾಗ ಕೇವಲ ಸೌಹಾರ್ದ ಮಾತನಾಡಿದರೆ ಸಾಕಾಗುವುದಿಲ್ಲ. ತಳ ಸಮು ದಾಯದ ಯುವಕರು ಆ ಕಡೆ ಹೋಗದಂತೆ ತಡೆಯಬೇಕು. ಅವರೆಲ್ಲ ಜೀವನ ಹಾಗೂ ವಿದ್ಯೆ ಇಲ್ಲದ ಕಾರಣಕ್ಕೆ ಹರಣಕ್ಕಾಗಿ ಅತ್ತ ಹೋಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅವರ ಕೇರಿಗಳಿಗೆ ಭೇಟಿ ನೀಡಿ ಅವರ ಸ್ಥಿತಿ ಗತಿಗಳನ್ನು ಅರ್ಥ ಮಾಡಿಕೊಳ್ಳಬೇಕು. ಆಗ ಮಾತ್ರ ಸಂಘ ಪರಿವಾರದ ಕೋಮು ಹಿಂಸೆಯ ಇಂಡಸ್ಟ್ರೀಯನ್ನು ತಡೆಯಲು ಸಾಧ್ಯ ಎಂದು ಅವರು ಅಭಿಪ್ರಾಯ ಪಟ್ಟರು.

ಸೌಹಾರ್ದ ಎಂಬುದು ಸಾಮಾಜಿಕ ರಾಜಕೀಯವಾಗಿದೆ. ಅದನ್ನು ಕಾಂಗ್ರೆಸ್ ಹಿಂದಿನಿಂದಲೂ ಮಾಡಿ ಕೊಂಡು ಬಂದಿದೆ. ಅದನ್ನು ಮರೆತರೆ ಆ ಸೌಹಾರ್ದವನ್ನು ಸಂಘಪರಿವಾರ ಸಾರ್ವಕರ್ ಹಾಗೂ ಗೊಲ್ವಕರ್ ರಾಜಕೀಯವನ್ನು ಬಳಸಿಕೊಂಡು ನಿಮ್ಮ ಕಣ್ಣೇದುರೇ ನಾಶ ಮಾಡುತ್ತದೆ. ಅದನ್ನು ಎದುರಿ ಸಲು ಸಿದ್ಧರಾಗಬೇಕು. ಸುಧಾರಣವಾದಿಯಿಂದ ಸಮಾಜವನ್ನು ತಲುಪುವ ಕಾರ್ಯ ಮಾಡಬೇಕೆ ಹೊರತು ಕೇವಲ ಭಾಷಣದಿಂದ ಅದನ್ನು ತಡೆಯಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದರು.

ಚಿಂತಕ ಎಂ.ಜಿ.ಹೆಗ್ಡೆ ಮಾತನಾಡಿ, ಶಾಲಾ ವಾರ್ಷಿಕೋತ್ಸವ, ಸಾಹಿತ್ಯ, ದೇವಸ್ಥಾನದ ಕಾರ್ಯಕ್ರಮ ಗಳಲ್ಲಿಯೂ ಧ್ವೇಷ ಭಾಷಣ ಮಾಡುವುದು ಸಾಮಾನ್ಯವಾಗಿದೆ ಮತ್ತು ಭಾಷಣದ ವ್ಯಾಖ್ಯಾನ ಕೂಡ ಆಗಿದೆ. ಧರ್ಮವನ್ನು ನಿಜವಾಗಿ ಅರ್ಥಮಾಡಿಕೊಂಡು ಪಾಲನೆ ಮಾಡುವವರಿಗೆ ಬೇರೆ ಧರ್ಮ ದವರನ್ನು ನೋಡಿದಾಗ ಅಸಹನೆ ಹುಟ್ಟಲು ಸಾಧ್ಯವೇ ಇಲ್ಲ ಎಂದು ಹೇಳಿದರು.

ಧರ್ಮದ ಅರ್ಥ ಗೊತ್ತಿಲ್ಲದ ಹಿಂದು ಚಳವಳಿಗಳು ಹುಟ್ಟಿರುವುದೇ ಇದಕ್ಕೆಲ್ಲ ಕಾರಣವಾಗಿದೆ. ಧರ್ಮಗಳಲ್ಲಿ ವೇದಾಂತ ಯಾರಿಗೂ ಬೇಡವಾಗಿದೆ. ಅದರಲ್ಲಿ ಅಸಮಾನತೆ, ಹಿಂಸೆ ಅಸ್ಪಸೃಶ್ಯ ಅಸಹನೆ ಯಾವುದು ಇಲ್ಲ. ಆದರೆ ನಾವು ಆ ವೇದಾಂತವನ್ನು ಬಿಟ್ಟು ಜಗಳ ಕಾರಣವಾಗುವ ಆಚರಣೆಗಳನ್ನೇ ಧರ್ಮ ಎಂಂದು ನಂಬಿಕೊಂಡಿದ್ದೇವೆ. ಆಚರಣೆಗಳು ಮತಗಳ ಒಂದು ಭಾಗವಾಗಿವೇ ಹೊರತು ಅದುವೇ ಧರ್ಮ ಅಲ್ಲ ಎಂದರು.

ಅಧ್ಯಕ್ಷತೆಯನ್ನು ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ವಹಿಸಿದ್ದರು. ವೇದಿಕೆಯಲ್ಲಿ ದಸಂಸ ಮುಖಂಡರಾದ ಶ್ಯಾಮ್‌ರಾಜ್ ಬಿರ್ತಿ, ಸುಂದರ್ ಮಾಸ್ತರ್, ಸ್ಟಿವನ್ ವಿಕ್ಟರ್ ಲೂವೀಸ್, ಧರ್ಮಗುರು ಮುಹಮ್ಮದ್ ರಶೀದ್ ಕಣ್ಣಂಗಾರ್, ಕಾಂಗ್ರೆಸ್ ಮುಖಂಡರಾದ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್, ಎಂ.ಎ.ಗಫೂರ್, ಅಶೋಕ್ ಕುಮಾರ್ ಕೊಡವೂರು, ಪ್ರಸಾದ್‌ರಾಜ್ ಕಾಂಚನ್, ರಾಘವೇಂದ್ರ ಶೆಟ್ಟಿ ಕರ್ಜೆ, ಜ್ಯೋತಿ ಹೆಬ್ಬಾರ್, ಶರ್ಫುದ್ದೀನ್ ಶೇಖ್ ಭಾಗವಹಿಸಿದ್ದರು.

ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ವಂದಿಸಿದರು. ಸತೀಶ್ ಕೊಡವೂರು ಕಾರ್ಯ ಕ್ರಮ ನಿರೂಪಿಸಿದರು. ಇದಕ್ಕೂ ಮೊದಲು ಬ್ರಹ್ಮವಾರದ ಕುಂಜಾಲು ಕೇಳಪೇಟೆಯಿಂದ ನೀಲಾವರ ಕ್ರಾಸ್‌ವರೆಗೆ ಸಾಮರಸ್ಯ ನಡಿಗೆ ಜರಗಿತು.

‘ಅವಿಭಜಿತ ದ.ಕ. ಜಿಲ್ಲೆಯಲ್ಲಿ ಗೊಡ್ಡದ ಹಸುವನ್ನು ರೈತರು ಮಾರಾಟ ಮಾಡುತ್ತಾರೆ. ಅದು ಮಾಂಸಕ್ಕೆ ಹೋಗುತ್ತದೆ ಎಂಬುದು ಕೂಡ ಅವರಿಗೆ ತಿಳಿದು ಇರುತ್ತದೆ. ಆದರೆ ಇಂತಹ ವಿಚಾರಗಳನ್ನು ಇಟ್ಟು ಕೊಂಡು ಯಶ್‌ಪಾಲ್ ಸುವರ್ಣಗೆ ಬೆಂಕಿ ಹಚ್ಚಲು ಐದು ನಿಮಿಷ ಸಾಕಾಗುತ್ತದೆ, ಆದರೆ ಆ ಬೆಂಕಿಯನ್ನು ಆರಿಸಲು 10 ದಿನ ಬೇಕಾಗುತ್ತದೆ’

-ಪ್ರೊ.ಫಣಿರಾಜ್, ಹಿರಿಯ ಚಿಂತಕರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X