ಪಡುಬಿದ್ರಿ ಸೊಸೈಟಿಯಲ್ಲಿ ಅವ್ಯವಹಾರ ಆರೋಪ: ತನಿಖೆಗೆ ಆಗ್ರಹ
ಉಡುಪಿ, ಜು.11: ಉಡುಪಿ ಜಿಲ್ಲಾ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯಲ್ಲಿ ನಡೆಯುತ್ತಿರುವ ಅವ್ಯವಹಾರ, ಅಧಿಕಾರ ದುರುಪಯೋಗ, ಭ್ರಷ್ಟಚಾರದ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ ಎಂದು ಸೊಸೈಟಿ ಸದಸ್ಯ ಹಾಗೂ ಸಾಮಾಜಿಕ ಕಾರ್ಯಕರ್ತ ಶೇಖರ್ ಹೆಜ್ಮಾಡಿ ತಿಳಿಸಿದ್ದಾರೆ.
ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉದ್ಯೋಗ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮೀಸ ಲಾತಿ ನೀಡದೆ ವಂಚಿಸಲಾಗಿದೆ. ಲಕ್ಷಾಂತರ ರೂ. ಹಣ ಪಡೆದು ನೇರ ನೇಮ ಕಾತಿ ಮಾಡಿಕೊಳ್ಳಲಾಗಿದೆ. ಅಧ್ಯಯನದ ಹೆಸರಿನಲ್ಲಿ ಪ್ರವಾಸಿ ತಾಣಗಳಿಗೆ ಪ್ರವಾಸ ಕೈಗೊಳ್ಳಲಾಗಿದೆ. ಈ ಕುರಿತು ರಾಜ್ಯಪಾಲರಿಗೂ, ಎಸ್ಪಿಯವರಿಗೂ ದೂರು ನೀಡಲಾಗಿದೆ ಎಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಸೊಸೈಟಿ ಸದಸ್ಯರಾದ ರತ್ನಾಕರ್ ಕೋಟ್ಯಾನ್, ಉಮಾ ನಾಥ್ ಪಡುಬಿದ್ರಿ, ಲೀಲಾಧರ ಪಿ. ಉಪಸ್ಥಿತರಿದ್ದರು.
Next Story





