ಅಕ್ರಮ ಮದ್ಯ ಮಾರಾಟ: ಸ್ಕೂಟರ್ ಸಹಿತ ಆರೋಪಿ ಬಂಧನ

ಬ್ರಹ್ಮಾವರ, ಜು.11: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬ್ರಹ್ಮಾವರ ಪೊಲೀಸರು ಜು.11ರಂದು ವಾರಂಬಳ್ಳಿ ಗ್ರಾಮದ ಕುಂಜಾಲ್ ಜಂಕ್ಷನ್ ಬಳಿ ಬಂಧಿಸಿದ್ದಾರೆ.
ಹಂದಾಡಿ ಗ್ರಾಮದ ಉಮೇಶ ಪೂಜಾರಿ(49) ಬಂಧಿತ ಆರೋಪಿ. ಈತನಿಂದ ಕೃತ್ಯಕ್ಕೆ ಬಳಸಿದ ಸ್ಕೂಟರ್ ಹಾಗೂ ಮದ್ಯವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಈತ ಬ್ರಹ್ಮಾವರದ ವೈನ್‌ಶಾಪ್‌ನಿಂದ ಖರೀದಿಸಿ ಯಾವುದೇ ಪರವಾನಿಗೆ ಇಲ್ಲದೇ ಹೆಚ್ಚಿನ ಬೆಲೆಗೆ ಸ್ಕೂಟರ್ ಮೇಲೆ ಮದ್ಯದ ಚೀಲವನ್ನು ಇಟ್ಟು ಮದ್ಯ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
Next Story





