Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೊಲ್ಲೂರು: ಪರಿಸರ ರಕ್ಷಣೆ, ಮಾಲಿನ್ಯ...

ಕೊಲ್ಲೂರು: ಪರಿಸರ ರಕ್ಷಣೆ, ಮಾಲಿನ್ಯ ನಿಯಂತ್ರಣಕ್ಕೆ ಹಸಿರು ಪೀಠದ ನಿರ್ದೇಶನ

ನಾಲ್ಕು ವಾರದ ಒಳಗೆ ನಿರ್ದೇಶನ ಪಾಲಿಸಲು ಜಿಲ್ಲಾಡಳಿತಕ್ಕೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ12 July 2025 9:35 PM IST
share
ಕೊಲ್ಲೂರು: ಪರಿಸರ ರಕ್ಷಣೆ, ಮಾಲಿನ್ಯ ನಿಯಂತ್ರಣಕ್ಕೆ ಹಸಿರು ಪೀಠದ ನಿರ್ದೇಶನ

ಕುಂದಾಪುರ, ಜು.12: ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ, ಪರಿಸರ ನಾಶ ಹಾಗೂ ಭೂ ಅತಿಕ್ರಮಣಗಳ ವಿರುದ್ಧ ದಾಖಲಾಗಿರುವ ದೂರು ಅರ್ಜಿಯ ವಿಚಾರಣೆ ನಡೆಸುತ್ತಿರುವ ಚೆನೈಯಲ್ಲಿನ ಸರ್ವೋಚ್ಚ ನ್ಯಾಯಾಲಯದ ದಕ್ಷಿಣ ವಲಯದ ಹಸಿರು ಪೀಠ ಕೊಲ್ಲೂರು ಪರಿಸರದ ಮಾಲಿನ್ಯ ನಿಯಂತ್ರಣಕ್ಕಾಗಿ ಉಡುಪಿ ಜಿಲ್ಲಾಧಿಕಾರಿಗಳಿಗೆ ಮಹತ್ತರವಾದ ನಿರ್ದೇಶನ ನೀಡಿದೆ ಎಂದು ಅರ್ಜಿದಾರ ಹರೀಶ್ ತೋಳಾರ್ ಕೊಲ್ಲೂರು ತಿಳಿಸಿದ್ದಾರೆ.

ಅರ್ಜಿಯ ವಿಚಾರಣೆ ನಡೆಸುತ್ತಿರುವ ಹಸಿರು ಪೀಠದ ನ್ಯಾಯ ಮೂರ್ತಿಗಳಾದ ಪುಷ್ಪಾ ಸತ್ಯನಾರಾಯಣ ಜೆಎಂ ಹಾಗೂ ಡಾ.ಸತ್ಯ ಗೋಪಾಲ್ ಕೊರ್ಲಪತಿ ಇಎಂ ಜು.9ರಂದು ನೀಡಿರುವ ನಿರ್ದೇಶನದಲ್ಲಿ ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳು ನ್ಯಾಯಾಲಯಕ್ಕೆ ನೀಡಿರುವ ವರದಿಯಲ್ಲಿ ಹೆಸರಿಸ ಲಾದವರು ಮತ್ತು ನಂತರ ಕಂಡು ಬಂದ ಇತರರನ್ನು ಒಳಗೊಂಡಂತೆ ಎಲ್ಲಾ ನಿಯಮ ಉಲ್ಲಂಘಿಸುವವರ ವಿರುದ್ಧ ಕರ್ನಾಟಕ ಎಸ್ಪಿಸಿಬಿ( ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ) ಕಾನೂನು ಕ್ರಮ ಜರುಗಿಸಬೇಕು. ಎಸ್ಟಿಪಿಗಳನ್ನು ತಕ್ಷಣದ ಪುನಃ ಸ್ಥಾಪನೆಯಾಗಬೇಕು ಹಾಗೂ ಆದ್ಯತೆಯಲ್ಲಿ ಎಸ್ಟಿಪಿಗಳನ್ನು ಕಾರ್ಯಗತಗೊಳಿಸಬೇಕು.

ಜಿಲ್ಲಾಧಿಕಾರಿಗಳು, ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕರ್ನಾಟಕ ರಾಜ್ಯ ಗ್ರಾಮೀಣ ನೀರು ಸರಬರಾಜು ಮಂಡಳಿ ಹಾಗೂ ಎಲ್ಲಾ ವಾಣಿಜ್ಯ ಘಟಗಳೊಂದಿಗೆ ಸಮನ್ವಯ ಸಾಧಿಸಬೇಕು. ಗೃಹ ಮತ್ತು ವಾಣಿಜ್ಯ ಯುಜಿಡಿ ಸಂಪರ್ಕಗಳು ಪೂರ್ಣ ಗೊಂಡಿವೆ ಎಂಬು ದನ್ನು ಖಚಿತಪಡಿಸಿಕೊಳ್ಳಬೇಕು. ಹಸಿರು ಪೀಠ ನೀಡಿರುವ ನಿರ್ದೇಶನ ಹಾಗೂ ಸೂಚನೆಗಳನ್ನು ಪಾಲಿಸಲು 4 ವಾರಗಳ ಸಮಯವನ್ನು ನಿಗದಿ ಮಾಡಲಾಗಿದ್ದು, ನಿರ್ದೇಶನದ ಕಾರ್ಯಪಾಲನೆಗೆ ಜಿಲ್ಲಾಧಿಕಾರಿಗಳು ತಮ್ಮ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಬಹುದು ಎಂದು ನ್ಯಾಯಾಲಯ ತಿಳಿಸಿದೆ ಎಂದು ತೋಳಾರ್ ತಿಳಿಸಿದ್ದಾರೆ.

ಹಸಿರು ಪೀಠಕ್ಕೆ ಅರ್ಜಿ: ಕೊಲ್ಲೂರಿನಲ್ಲಿ ಇತ್ತೀಚಿನ ವರ್ಷಗಳಲ್ಲಿ ತಲೆ ಎತ್ತುತ್ತಿರುವ ವಸತಿ ಗೃಹಗಳು ಹಾಗೂ ವಾಣಿಜ್ಯ ಕಟ್ಟಡಗಳಿಂದ ಆಗುತ್ತಿರುವ ಜಲ ಹಾಗೂ ಪರಿಸರದ ಮಾಲಿನ್ಯದಿಂದಾಗಿ ಪುಣ್ಯ ಕ್ಷೇತ್ರಕ್ಕೆ ಬರುವ ಕೋಟ್ಯಾಂತರ ಭಕ್ತರಿಗೆ, ಜಲಚರಗಳು, ಪ್ರಾಣಿ ಸಂಕುಲನಗಳ ಭವಿಷ್ಯದ ರಕ್ಷಣೆ, ಗ್ರಾಮಗಳ ಆರೋಗ್ಯ ರಕ್ಷಣೆ ಮತ್ತು ಸರಕಾರಿ ಹಾಗೂ ದೇವಸ್ಥಾನದ ಭೂಮಿಗಳ ಅತಿಕ್ರಮಣಗಳನ್ನು ತಡೆಯುವ ಉದ್ದೇಶಗಳನ್ನು ಇರಿಸಿಕೊಂಡು ಹರೀಶ್ ತೋಳಾರ್ ಕೊಲ್ಲೂರು, ಮಂಗಳೂರಿನ ಎನ್‌ಇಸಿಎಫ್ ಹಾಗೂ ಅರಣ್ಯ ಪರಿಸರ ಮತ್ತು ಹವಾಮಾನ ಬದಲಾವಣೆ ಸೊಸೈಟಿ ಮಂಗಳೂರು ಇವರುಗಳು 2022ರಲ್ಲಿ ಹಸಿರು ಪೀಠಕ್ಕೆ ಅರ್ಜಿ ಸಲ್ಲಿಸಿದ್ದು, 2024 ರಲ್ಲಿ ಅರ್ಜಿ ವಿಚಾರಣೆಗೆ ಅಂಗೀಕಾರ ನೀಡಿದ್ದ ಹಸಿರು ಪೀಠ ವಿಚಾರಣೆ ನಡೆಸುತ್ತಿದೆ.

‘ವಿಚಾರಣೆಯ ಹಂತದಲ್ಲಿ ಪುಣ್ಯನದಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ, ಪರಿಸರ ನಾಶ, ನದಿ ಮುಖಜ ಭೂಮಿಗಳ ಆಕ್ರಮ ಒತ್ತುವರಿ, ಸರ್ಕಾರಿ, ದೇವಸ್ಥಾನ ಹಾಗೂ ಸಾರ್ವಜನಿಕ ಭೂಮಿಗಳ ಅನಧಿಕೃತ ಅತಿಕ್ರಮಣ ಹಾಗೂ ಪರಭಾರೆ, ನಿಯಮ ಬಾಹಿರ ಕಟ್ಟಡ ನಿರ್ಮಾಣ ಹಾಗೂ ಭಕ್ತರ ಪವಿತ್ರ ಭಾವನೆಗಳಿಗೆ ನಿರಂತರವಾಗಿ ಆಗುತ್ತಿರುವ ಘಾಸಿಗಳು ಸೇರಿದಂತೆ ಕ್ಷೇತ್ರದ ಪಾವಿತ್ರ್ಯ ನಾಶ, ಅತಿಕ್ರಮಣ, ಪರಿಸರ ನಾಶ ಹಾಗೂ ಕಾನೂನು ಉಲ್ಲಂಘನೆಗಳ ಕುರಿತು ಘನ ನ್ಯಾಯಾಲಯಕ್ಕೆ ದಾಖಲೆಗಳ ಸಹಿತ ಮನವರಿಕೆ ಮಾಡುವ ಪ್ರಯತ್ನ ಮಾಡಲಾಗುವುದು ಎಂದು ಹರೀಶ್ ತೋಳಾರ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X