ದೋಣಿ ದುರಂತ: ಹೆಲಿಕಾಪ್ಟರ್ ಕಾರ್ಯಾಚರಣೆಗೆ ಸಂಸದ ರಾಘವೇಂದ್ರ ಮನವಿ

ಗಂಗೊಳ್ಳಿ, ಜು.15: ಗಂಗೊಳ್ಳಿಯ ದೋಣಿ ದುರಂತ ಪ್ರದೇಶಕ್ಕೆ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಮಂಗಳವಾರ ಸಂಜೆ ಭೇಟಿ ನೀಡಿದರು.
ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ದೂರವಾಣಿ ಮೂಲಕ ಸಂಪರ್ಕ ಮಾಡಿದ ಸಂಸದ ಬಿ.ವೈ.ರಾಘವೇಂದ್ರ, ಕಡಲು ಪ್ರಕ್ಷುಬ್ಧವಾಗಿರುವುದರಿಂದ ನಾಪತ್ತೆಯಾಗಿರುವ ಮೀನುಗಾರರು ಪತ್ತೆ ಕಾರ್ಯಾ ಚರಣೆಗೆ ತೊಡಕಾಗಿರುವುದರಿಂದ, ಕ್ಷಿಪ್ರ ಕಾರ್ಯಾಚರಣೆಗೆ ಅನುಕೂಲ ವಾಗಲು ಬುಧವಾರ ಬೆಳಗ್ಗೆಯಿಂದಲೇ ಹೆಲಿಕಾಪ್ಟರ್ ಮೂಲಕ ಕಾರ್ಯಾ ಚರಣೆ ನಡೆಸಲು ರಾಜ್ಯ ಸರಕಾರ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಉಡುಪಿ ಜಿಲ್ಲಾ ಎಸ್ಪಿ ಹರಿರಾಂ ಶಂಕರ್, ಕರಾವಳಿ ಕಾವಲು ಪಡೆ ಎಸ್ಪಿ ಮಿಥುನ್ ಅವರಿಂದ ಮಾಹಿತಿ ಪಡೆದರು. ಈ ವೇಳೆ ಮುಳುಗುತಜ್ಞ ಈಶ್ವರ್ ಮಲ್ಪೆ ಹಾಜರಿದ್ದರು. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಮೊದ ಲಾದವರು ಉಪಸ್ಥಿತರಿದ್ದರು.
Next Story





