Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೊಲ್ಲೂರು ದೇವಸ್ಥಾನದ ಹಣ ಸರಕಾರಕ್ಕೆ...

ಕೊಲ್ಲೂರು ದೇವಸ್ಥಾನದ ಹಣ ಸರಕಾರಕ್ಕೆ ಹೋಗಿಲ್ಲ: ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆ.ಬಾಬು ಶೆಟ್ಟಿ ಸ್ವಷ್ಟನೆ

ವಾರ್ತಾಭಾರತಿವಾರ್ತಾಭಾರತಿ17 July 2025 7:38 PM IST
share
ಕೊಲ್ಲೂರು ದೇವಸ್ಥಾನದ ಹಣ ಸರಕಾರಕ್ಕೆ ಹೋಗಿಲ್ಲ: ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆ.ಬಾಬು ಶೆಟ್ಟಿ ಸ್ವಷ್ಟನೆ

ಕುಂದಾಪುರ, ಜು.17: ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಆದಾಯ ರಾಜ್ಯ ಸರಕಾರದ ಬೊಕ್ಕಸಕ್ಕೆ ಹೋಗಿದೆ ಮತ್ತು ಕೊಲ್ಲೂರು ದೇವಸ್ಥಾನದ ಆವರಣದಲ್ಲಿ ರಸ್ತೆ ಗುಂಡಿ ಮುಚ್ಚಲು ಯೋಗ್ಯತೆ ಯಿಲ್ಲದ ನಿಮ್ಮ ಸರಕಾರಕ್ಕೆ, ದೇವಸ್ಥಾನದ ಹುಂಡಿ ಹಣ ಯಾಕೆ ಬೇಕು ಎಂದು ಕರಾವಳಿ ಬಿಜೆಪಿ ಕಾರ್ಯ ಕರ್ತರ ಬಹಿರಂಗ ಸವಾಲು ಎಂಬ ಬಗ್ಗೆ, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೆ.ಬಾಬು ಶೆಟ್ಟಿ ಪತ್ರಿಕಾ ಹೇಳಿಕೆಯಲ್ಲಿ ಸ್ವಷ್ಟನೆ ನೀಡಿದ್ದಾರೆ.

ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನ ‘ಎ’ ವರ್ಗದ ದೇವಸ್ಥಾನ ವಾಗಿದ್ದು, ರಾಜ್ಯದಲ್ಲಿ 2ನೇ ಶ್ರೀಮಂತ ದೇವಸ್ಥಾನ ಎನಿಸಿಕೊಂಡಿದೆ. 2023-24ರಲ್ಲಿ ದೇವಸ್ಥಾನದ ಆದಾಯ ರೂ. 68,23,06,285.09 ಆಗಿದ್ದು, ವೆಚ್ಚ ರೂ. 41,63,93,569.28. ಹಾಗೂ ಉಳಿತಾಯ ರೂ. 26,59,12,715.81 ಆಗಿದೆ ಎಂದು ಬಾಬು ಶೆಟ್ಟಿ ತಿಳಿಸಿದ್ದಾರೆ.

2024-25ರಲ್ಲಿ ಆದಾಯ ರೂ.71,93,37,864.66 ಆಗಿದ್ದರೆ, ವೆಚ್ಚ 40,58,19,652.63 ರೂ. ಉಳಿತಾಯ 31,35,18,212.03 ರೂ. ಇದೆ. ಕಳೆದ ಎರಡು ವರ್ಷಗಳಲ್ಲಿ ದೇವಳದ ಒಟ್ಟು ವಾರ್ಷಿಕ ಉಳಿತಾಯ ರೂ. 57,94,30,927.84 ಆಗಿದ್ದು, ಈ ಹಣವನ್ನು ದೇವಸ್ಥಾನದ ಹೆಸರಿನಲ್ಲಿ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ನಿರಖು ಠೇವಣಿಯಲ್ಲಿ ತೊಡಗಿಸಲಾಗಿದೆ. ಪ್ರಸ್ತುತ ದೇವಸ್ಥಾನದ ಹೆಸರಿನಲ್ಲಿರುವ ನಿರಖು ಠೇವಣಿಯಲ್ಲಿ ತೊಡಗಿಸಿದ ಮೊತ್ತ 212 ಕೋಟಿ ರೂ. ಆಗಿದೆ ಎಂದವರು ವಿವರಿಸಿದ್ದಾರೆ.

ದೇವಸ್ಥಾನದ ಆದಾಯದಿಂದ ದೇವಳದ ದೈನಂದಿನ ಖರ್ಚು, ವಾರ್ಷಿಕ ಜಾತ್ರೆ, ಅಭಿವೃದ್ಧಿ ಕೆಲಸ, ಸಿಬ್ಬಂದಿ ವೆಚ್ಚ, ಭಕ್ತಾದಿಗಳಿಗೆ ಉಚಿತ ಅನ್ನಸಂತರ್ಪಣೆ, ಭಕ್ತಾದಿಗಳ ಮೂಲಭೂತ ಸೌಕರ್ಯದ ಬಗ್ಗೆ, ಗೋಶಾಲೆ ನಿರ್ವಹಣೆ, ದೇವಸ್ಥಾನಕ್ಕೆ ಸೇರಿದ 5 ಪ್ರೌಢಶಾಲೆ ಮತ್ತು 1 ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳ ಉಚಿತ ಬಿಸಿಯೂಟ, ಪಠ್ಯ ಪುಸ್ತಕ, ಸಮವಸ್ತ್ರ ಇತ್ಯಾದಿಗಳಿಗೆ ವೆಚ್ಚಗಳನ್ನು ಭರಿಸಲಾಗುತ್ತಿದೆ.

ದೇವಸ್ಥಾನದ ಭಂಡಾರದಿಂದ ಸರಕಾರಕ್ಕೆ ಯಾವುದೇ ಹಣವನ್ನು ಸಂದಾಯ ಮಾಡಿರುವುದಿಲ್ಲ ಮತ್ತು ದೇವಸ್ಥಾನದ ಆವರಣದ ಮುಂಭಾಗದಲ್ಲಿ ಹಾದು ಹೋಗುವ ರಸ್ತೆ ರಾಷ್ಟ್ರೀಯ ಹೆದ್ದಾರಿ ಆಗಿದ್ದು, ಇದರ ನಿರ್ವಹಣೆ ಜವಾಬ್ದಾರಿ ಯೂ ದೇವಸ್ಥಾನದ್ದಾಗಿರುವುದಿಲ್ಲ ಎಂದು ದೇವಸ್ಥಾನದ ಆಡಳಿತ ಸಮಿತಿ ಹಾಗೂ ದೇವಸ್ಥಾನದ ಪರವಾಗಿ ಸ್ಪಷ್ಟನೆ ನೀಡುತ್ತಿದ್ದೇನೆ ಎಂದಿದ್ದಾರೆ.

ಇದೇ ರೀತಿ ಅನಗತ್ಯವಾಗಿ ಕ್ಷೇತ್ರದ ವಿರುದ್ಧ ಆಧಾರವಿಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು, ಕಾನೂನು ತಜ್ಞರ ಅಭಿಪ್ರಾಯ ಪಡೆಯುತ್ತಿರುವುದಾಗಿ ಕೆ.ಬಾಬು ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X