ಸಂತ್ರಸ್ತ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಾಗಿ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ

ಉಡುಪಿ, ಜು.17: ಪೋಕ್ಸೋ ಕಾಯಿದೆಯಡಿ ಸಂತ್ರಸ್ತ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಿಗಾಗಿ ಸೇವೆ ಸಲ್ಲಿಸಲು ಮಕ್ಕಳೊಂದಿಗೆ ಕೆಲಸ ಮಾಡುವ ಮೂಲಕ ಮಕ್ಕಳ ಶಿಕ್ಷಣ, ಅಭಿವೃದ್ಧಿ ಅಥವಾ ರಕ್ಷಣಾ ವಿಷಯದಲ್ಲಿ ಕನಿಷ್ಟ 3 ವರ್ಷಗಳ ಅನುಭವದೊಂದಿಗೆ ಪದವಿ ಅಥವಾ ಸಮಾಜ ಕಾರ್ಯ/ಸೋಷಿಯಾಲಜಿ/ಸೈಕೋಲಾಜಿ/ಚೈಲ್ಡ್‌ಡೆವಲಪ್‌ಮೆಂಟ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಯನ್ನು ಹೊಂದಿರುವ ಅಥವಾ ಮಕ್ಕಳ ಆರೈಕೆ ಕೇಂದ್ರದಲ್ಲಿ ಮಕ್ಕಳೊಂದಿಗೆ ಕೆಲಸ ಮಾಡುವ ಅಧಿಕಾರಿಗಳು ಮತ್ತು ಮಕ್ಕಳ ಹಕ್ಕುಗಳ ಕ್ಷೇತ್ರದಲ್ಲಿ ಕೆಲಸ ಮಾಡುವ ಯಾವುದೇ ಸಂಸ್ಥೆ ಕೂಡ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರತಿ ಪ್ರಕರಣಕ್ಕೆ 3000 ರೂ. ಸಂಭಾವನೆ ನೀಡಲಾಗುವುದು. ಆಯ್ಕೆ ಯಾದ ಅಭ್ಯರ್ಥಿಗಳಿಗೆ ಕ್ಷೇತ್ರ ಕಾರ್ಯವನ್ನು ಮಾಡಲು ಮತ್ತು ಅಪರಾಧ ನ್ಯಾಯ ವ್ಯವಸ್ಥೆಯ ಮೂಲಕ ಮಕ್ಕಳು ಮತ್ತು ಅವರ ಕುಟುಂಬಗಳಿಗೆ ಸಹಾಯ ಮಾಡಲು ತರಬೇತಿ ನೀಡಲಾಗುವುದು.
ಅರ್ಜಿ ಸಲ್ಲಿಸಲು ಜುಲೈ 29 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬಿ ಬ್ಲಾಕ್, ಒಂದನೇ ಮಹಡಿ, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2574964 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







