ಜನರ ಮನೆ ಬಾಗಿಲಿಗೆ ಅರೋಗ್ಯ ಸೇವೆ: ಎಡಿಸಿ ಅಬೀದ್ ಗದ್ಯಾಳ್
ಉಡುಪಿ ಜಿಲ್ಲೆಯಲ್ಲಿ ಗೃಹ ಆರೋಗ್ಯ ಯೋಜನೆ ಜಾರಿ

ಉಡುಪಿ, ಜು.21: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಗೃಹ ಅರೋಗ್ಯ ಯೋಜನೆ’ ಮೂಲಕ ಜನಸಾಮಾನ್ಯರ ಮನೆ ಬಾಗಿಲಿಗೆ ಅರೋಗ್ಯ ಸೇವೆಯನ್ನು ತಲುಪಿಸಿ, ಅಸಾಂಕ್ರಾಮಿಕ ರೋಗ ಗಳಿಂದ ಉಂಟಾಗ ಬಹುದಾದ ಮರಣ ಪ್ರಮಾಣವನ್ನು ಕಡಿಮೆ ಮಾಡುವ ಗುರಿಯನ್ನು ಹಾಕಿಕೊಳ್ಳಲಾ ಗಿದೆ ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಹೇಳಿದ್ದಾರೆ.
ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಗೃಹ ಆರೋಗ್ಯ ಯೋಜನೆಯ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.
ನಮ್ಮ ಆರೋಗ್ಯ ನಮ್ಮ ಆದ್ಯತೆಯಾಗಬೇಕು. ಹಿಂದಿನ ದಿನಗಳಿಗೆ ಹೋಲಿಸಿ ದಾಗ ಇತ್ತೀಚಿನ ಆಹಾರ ಪದ್ದತಿ, ಒತ್ತಡದ ಜೀವನಶೈಲಿಯಿಂದಾಗಿ ಅನೇಕ ಅರೋಗ್ಯ ಸಮಸ್ಯೆಗಳು ಕಂಡುಬರುತ್ತಿವೆ. ಗ್ರಾಮೀಣ ಭಾಗದವರಿಗೆ ತಮಗಿರುವ ಆರೋಗ್ಯಸಮಸ್ಯೆಗಳ ಅರಿವೇ ಇರುವುದಿಲ್ಲ. ಇಂತಹ ಆರೋಗ್ಯ ಸಮಸ್ಯೆ ಗಳನ್ನು ಹೊಂದಿರುವವರನ್ನು ಅವರಿರುವಲ್ಲೇ ಗುರುತಿಸಿ, ಸೂಕ್ತ ಚಿಕಿತ್ಸೆ ನೀಡಲು ಗೃಹ ಆರೋಗ್ಯ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ಎಡಿಸಿ ವಿವರಿಸಿದರು.
ಕಾರ್ಯಾಗಾರವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಆಶಾ ಕೈಪಿಡಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಉಡುಪಿ ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಸಾರ್ವಜನಿಕರ ಅರೋಗ್ಯಕ್ಕೆ ವಿಶೇಷವಾದ ಒತ್ತನ್ನು ನೀಡುವ ನಿಟ್ಟಿನಲ್ಲಿ ರಾಜ್ಯ ಸರಕಾರ ಹಲವು ಯೋಜನೆ ಗಳನ್ನು ಕಾರ್ಯರೂಪಕ್ಕೆ ತಂದಿದ್ದು, ಇದರಲ್ಲಿ ಗೃಹ ಆರೋಗ್ಯ ಯೋಜನೆ ಸಹ ಒಂದು. ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಬಹುಮುಖ್ಯ ಸೇವೆ ಒದಗಿಸುತ್ತಿರುವ ಆರೋಗ್ಯ ಇಲಾಖೆ ಮುತುವರ್ಜಿ ವಹಿಸಿ, ಕಾರ್ಯಕ್ರಮ ವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ತಿಳಿಸಿದರು.
ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಸ್ತುತ ಜೀವನ ಶೈಲಿ ಬದಲಾವಣೆಯಿಂದ ಅನೇಕ ರೋಗಗಳಿಗೆ ಇಂದಿನ ಜನ ತುತ್ತಾಗುತ್ತಿದ್ದಾರೆ. ಗ್ರಾಮೀಣ ಭಾಗದ ವರು, ಬಡಜನರು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿರುವುದು ಮನಗಂಡ ಸರಕಾರ ಅವರುಗಳ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಗೃಹ ಅರೋಗ್ಯ ಯೋಜನೆ ಜಾರಿಗೊಳಿಸಿ ಮನೆ ಮನೆಗೂ ಆರೋಗ್ಯ ಸೇವೆ ಒದಗಿಸುತ್ತಿದೆ. ಎಲ್ಲರೂ ಯೋಜನೆಯ ಸದುಪಯೋಗ ಪಡೆದು ಉತ್ತಮ ಆರೋಗ್ಯ ಹೊಂದಬೇಕು ಎಂದರು.
ಕಾರ್ಯಕ್ರಮದಲ್ಲಿ ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ, ಗೃಹ ಅರೋಗ್ಯ ಯೋಜನೆ ಕಾರ್ಯಕ್ರಮದಡಿ ವೈದ್ಯರು ಹಾಗೂ ಆಶಾ ಕಾರ್ಯಕರ್ತೆಯರು ಪ್ರತಿ ಮನೆಗೂ ಭೇಟಿ ನೀಡಿ 30 ವರ್ಷ ಮೇಲ್ಪಟ್ಟವರಲ್ಲಿ ಸಕ್ಕರೆ ಕಾಯಿಲೆ, ರಕ್ತದೊತ್ತಡ, ವಿವಿಧ ತರಹದ ಕ್ಯಾನ್ಸರ್, ಮಾನಸಿಕ ಆರೋಗ್ಯ ಸೇರಿದಂತೆ ವಿವಿಧ ರೋಗಲಕ್ಷಣವಿರುವವರನ್ನು ಸ್ಕೃಿನೀಂಗ್ ಮಾಡಿ, ಅರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಚಿಕಿತ್ಸೆಗೆ ಒಳಪಡಿಸುತ್ತಾರೆ. ಹೆಚ್ಚಿನ ಚಿಕಿತ್ಸೆಗೆ ರೆಫರಲ್ ಸಹ ನೀಡಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಸವರಾಜ ಜಿ ಹುಬ್ಬಳ್ಳಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮರಾವ್, ಕಾರ್ಯಕ್ರಮ ಅನುಷ್ಟಾನಾಧಿಕಾರಿಗಳು, ವೈದ್ಯಾಧಿಕಾರಿ ಗಳು ಉಪಸ್ಥಿತರಿದ್ದರು. ಹಿರಿಯ ಅರೋಗ್ಯ ನಿರೀಕ್ಷಣಾಧಿಕಾರಿ ಸತೀಶ್ ರಾವ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.







