Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ತುಳುವಿನಕೊಪ್ಪದಲ್ಲಿ ಅಪರೂಪದ...

ತುಳುವಿನಕೊಪ್ಪದಲ್ಲಿ ಅಪರೂಪದ ಸ್ಮಾರಕಶಿಲ್ಪಗಳು ಪತ್ತೆ

ವಾರ್ತಾಭಾರತಿವಾರ್ತಾಭಾರತಿ21 July 2025 10:00 PM IST
share
ತುಳುವಿನಕೊಪ್ಪದಲ್ಲಿ ಅಪರೂಪದ ಸ್ಮಾರಕಶಿಲ್ಪಗಳು ಪತ್ತೆ

ಕೊಪ್ಪ, ಜು.21: ಇಲ್ಲಿನ ತುಳುವಿನಕೊಪ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಕೆರೆ ಪ್ರದೇಶದ ಕೆರೆಮನೆ ಯಲ್ಲಿ ಎರಡು ಅಪರೂಪದ ಸ್ಮಾರಕಶಿಲ್ಪಗಳು ಶಾಂತ ಶ್ರೀನಿವಾಸ ಗೌಡ ಮತ್ತು ಕೆರೆಮನೆ ಸುರೇಶ ಅವರ ಜಮೀನಿನಲ್ಲಿ ಕಂಡುಬಂದಿದೆ.

ಶಾಂತ ಶ್ರೀನಿವಾಸ ಗೌಡ ಅವರು ತಮ್ಮ ಜಮೀನಿನ ಕೆಲಸದ ಸಂದರ್ಭದಲ್ಲಿ ಒಂದು ಸ್ಮಾರಕಶಿಲ್ಪವನ್ನು ಹೊರತೆಗೆದು ಇದರ ಮಾಹಿತಿಯನ್ನು ಇತಿಹಾಸ ಮತ್ತು ಪುರಾತತ್ತ್ವ ಸಂಶೋಧನಾರ್ಥಿ ನ.ಸುರೇಶ ಕಲ್ಕೆರೆ ಅವರಿಗೆ ತಿಳಿಸಿದ್ದು, ಕ್ಷೇತ್ರಕಾರ್ಯ ಶೋಧನೆಗೆ ತೆರಳಿದ ಸಂಶೋಧನಾರ್ಥಿಗೆ ಕೆರೆಮನೆ ಸುರೇಶ ಅವರ ಜಮೀನಿನಲ್ಲಿಯೂ ಗಿಡ-ಗಂಟಿಗಳಿಂದ ಮುಚ್ಚಿ ಹೋಗಿದ್ದ ಇನ್ನೊಂದು ಸ್ಮಾರಕಶಿಲ್ಪವು ದೊರೆತಿದೆ. ಈ ಎರಡು ಕಲ್ಲುಗಳನ್ನು ಸ್ವಚ್ಛಗೊಳಿಸಿ, ಅಧ್ಯಯನಕ್ಕೆ ಒಳಪಡಿಸಿದಾಗ ಇವುಗಳು ಒಂದೇ ರೀತಿಯ ಸಾಮ್ಯತೆಯನ್ನು ಹೊಂದಿರುವುದು ಕಂಡುಬಂದಿದೆ.

ಈ ಸ್ಮಾರಕಶಿಲ್ಪಗಳು ಸುಮಾರು ಎರಡು ಅಡಿ ಎತ್ತರ ಹಾಗೂ ಒಂದು ಅಡಿ ಅಗಲವಾಗಿದ್ದು, ಇವುಗಳು ಒಂದಕ್ಕೊಂದು ಸುಮಾರು 300 ಮೀ. ಅಂತರದಲ್ಲಿವೆ. ಮುಖ್ಯವಾಗಿ ಈ ಸ್ಮಾರಕಶಿಲ್ಪದ ಮಧ್ಯಭಾಗದಲ್ಲಿ ತ್ರಿಶೂಲ ಹಾಗೂ ಇದರ ಇಕ್ಕೆಲಗಳಲ್ಲಿ ಸೂರ್ಯ ಮತ್ತು ಚಂದ್ರರ ಕೆತ್ತನೆಯಿದ್ದು, ಇಡೀ ಕೊಪ್ಪ ತಾಲೂಕಿ ನಲ್ಲಿಯೇ ಇವುಗಳು ಪ್ರಥಮವಾಗಿ ಕಂಡುಬಂದಿರುವ ಅಪರೂಪದ ಸ್ಮಾರಕಶಿಲ್ಪಗಳಾಗಿದೆ.

ಈ ಶಿಲ್ಪ ಲಕ್ಷಣದ ಹೋಲಿಕೆಯನ್ನು ಹೊಂದಿರುವ 15ನೇ ಶತಮಾನದ ದಾನ ಶಾಸನವೊಂದು ಕಡಬ ತಾಲೂಕಿನ ಬಳ್ಪ ಪ್ರದೇಶದಲ್ಲಿನ ಶ್ರೀದುರ್ಗಾ ದೇವಾಲಯದ ಒಳ ಪ್ರಾಕಾರದಲ್ಲಿ ಕಂಡುಬಂದಿದೆ. ಆದರೆ ಇದರಲ್ಲಿ ಸೂರ್ಯ-ಚಂದ್ರರ ಬದಲು ಶಂಖ-ಚಕ್ರದ ಕೆತ್ತನೆಯನ್ನು ಕಾಣಬಹುದು.

ಕಲ್ಕೆರೆ ಪ್ರದೇಶದ ಅರಣ್ಯದಲ್ಲಿ ಕಲ್ಲಿನ ಪ್ರಾಚೀನ ತಳಪಾಯ ಕಂಡು ಬಂದಿದ್ದು, ಇದು ದೇವಿ ಸಂಬಂಧಿಸಿದ ದೇವಾಲಯದ ನೆಲೆಗಟ್ಟು ಎಂಬುದು ಇಂದಿಗೂ ಸ್ಥಳೀಯರ ನಂಬಿಕೆಯಾಗಿದೆ. ಪ್ರಸ್ತುತ ಅಧ್ಯಯನಕ್ಕೆ ಒಳಪಡಿಸಲಾದ ಈ ಸ್ಮಾರಕಶಿಲ್ಪಗಳು 14-15ನೇ ಶತಮಾನದಲ್ಲಿ ಹಾಕಿರಬಹುದಾದ ಗಡಿಕಲ್ಲು ಆಗಿರಬಹುದೆಂದು ಇತಿಹಾಸ ಸಂಶೋಧನಾರ್ಥಿ ಅಭಿಪ್ರಾಯ ಪಟ್ಟಿದ್ದಾರೆ.

ಕ್ಷೇತ್ರಕಾರ್ಯದಲ್ಲಿ ತುಳುವಿನಕೊಪ್ಪದ ಗ್ರಾಪಂ ಉದ್ಯೋಗಿ ಮಹೇಶ್, ಕಲ್ಕೆರೆ ಸುಂದರರಾಜ್, ರಾಘವೇಂದ್ರ ಹಾಗೂ ಕಲ್ಕೆರೆ ಶಾಲೆಯ ವಿದ್ಯಾರ್ಥಿ ಗಳಾದ ಸನ್ನಿಧಿ ಮತ್ತು ವಿಕೃತ್ ಸಹಕಾರ ನೀಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X