ಶಿರ್ವ ಮನೆ ಕಳವು ಪ್ರಕರಣ: ಆರೋಪಿ ಬಂಧನ

ಉಡುಪಿ, ಜು.27: ಶಿರ್ವ ಗ್ರಾಮದ ಮಟ್ಟಾರು ರಸ್ತೆಯ ಬಳಿ ಮನೆಯೊಂದಕ್ಕೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಸೊತ್ತು ಕಳವುಗೈದ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಅಬೂಬಕ್ಕರ್ ಯಾನೆ ಅಬ್ದುಲ್ ಖಾದರ್ ಯಾನೆ ಇತ್ತೆ ಬರ್ಪೆ ಅಬುಬಕ್ಕರ್ ಬಂಧಿತ ಆರೋಪಿ. ಜೂ.27ರಂದು ಪವಿತ್ರ ಪೂಜಾರ್ತಿ ಎಂಬವರ ಮನೆಗೆ ನುಗ್ಗಿದ ಕಳ್ಳರು, 12,75,000ರೂ. ಮೌಲ್ಯದ ಸುಮಾರು 137 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದು, ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ, ಆತನಿಂದ ಒಟ್ಟು 66.760 ಗ್ರಾಂ ತೂಕದ ಚಿನ್ನಾಭರಣಗಳನ್ನು ಮತ್ತು ಕೃತ್ಯಕ್ಕೆ ಬಳಸಿದ ಸ್ಕೂಟರನ್ನು ವಶಪಡಿಸಿಕೊಂಡಿದ್ದಾರೆ. ಇವುಗಳ ಒಟ್ಟು ಮೌಲ್ಯ 7,00,000ರೂ. ಎಂದು ಅಂದಾಜಿಸಲಾಗಿದೆ. ಈತನ ವಿರುದ್ಧ ಸುಮಾರು 30ಕ್ಕಿಂತ ಹೆಚ್ಚು ಕಳವು ಪ್ರಕರಣಗಳು ದಾಖಲಾಗಿವೆ.
Next Story





