Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಛತ್ತೀಸ್‌ಗಢದಲ್ಲಿ ಕೇರಳ ಮೂಲದ ಕ್ರೈಸ್ತ...

ಛತ್ತೀಸ್‌ಗಢದಲ್ಲಿ ಕೇರಳ ಮೂಲದ ಕ್ರೈಸ್ತ ಸನ್ಯಾಸಿನಿಯರ ಬಂಧನ: ಕ್ರೈಸ್ತ ಒಕ್ಕೂಟ ಖಂಡನೆ

ವಾರ್ತಾಭಾರತಿವಾರ್ತಾಭಾರತಿ29 July 2025 6:31 PM IST
share
ಛತ್ತೀಸ್‌ಗಢದಲ್ಲಿ ಕೇರಳ ಮೂಲದ ಕ್ರೈಸ್ತ ಸನ್ಯಾಸಿನಿಯರ ಬಂಧನ: ಕ್ರೈಸ್ತ ಒಕ್ಕೂಟ ಖಂಡನೆ

ಉಡುಪಿ: ಛತ್ತೀಸ್‌ಗಢದಲ್ಲಿ ಇಬ್ಬರು ಕೇರಳ ಮೂಲದ ಕ್ರೈಸ್ತ ಸನ್ಯಾಸಿನಿಯರನ್ನು ಸುಳ್ಳು ಕಾರಣವನ್ನು ನೀಡಿ ಬಂಧಿಸಿರುವ ಅಲ್ಲಿನ ರಾಜ್ಯ ಸರಕಾರದ ಕ್ರಮವನ್ನು ಖಂಡಿಸಿರುವ ಭಾರತೀಯ ಕ್ರೈಸ್ತ ಒಕ್ಕೂಟದ ರಾಜ್ಯಾಧ್ಯಕ್ಷ ಪ್ರಶಾಂತ್ ಜತ್ತನ್ನ, ಪ್ರಧಾನಿ ಮೋದಿ ಈ ವಿಚಾರದಲ್ಲಿ ಕೂಡಲೇ ಮಧ್ಯಪ್ರವೇಶಿಸಿ ಕ್ರೈಸ್ತ ಸಮುದಾಯಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿದ್ದಾರೆ.

ಛತ್ತೀಸ್ ಗಢದಲ್ಲಿ ಸಿಸ್ಟರ್ಸ್‌ ಆಫ್ ಮೇರಿ ಇಮ್ಯಾಕ್ಯುಲೇಟ್ ಆಫ್ ಅಸ್ಸಿಸಿಯ ಸದಸ್ಯರಾದ ತಲಕ್ಕೇರಿಯ ಸಿಸ್ಟರ್ ವಂದನಾ ಫ್ರಾನ್ಸಿಸ್ ಮತ್ತು ಅಂಗಮಾಲಿಯ ಸಿಸ್ಟರ್ ಪ್ರೀತಿ ಮೇರಿ ಎಂಬ ಇಬ್ಬರು ಕೇರಳ ಮೂಲದ ಕ್ರೈಸ್ತ ಸನ್ಯಾಸಿನಿಯರನ್ನು ಕೆಲವೊಂದು ಸಂಘಟನೆಗಳು ಸುಳ್ಳು ಆರೋಪಗಳ ಮೇಲೆ ಮಾನವ ಕಳ್ಳಸಾಗಣೆ ಮತ್ತು ಧಾರ್ಮಿಕ ಮತಾಂತರದ ಸುಳ್ಳು ಆರೋಪ ಹೊರಿಸಿ ಬಂಧಿಸಲಾಗಿದೆ. ಬಂಧಿತ ಕ್ರೈಸ್ತ ಸನ್ಯಾಸಿನಿಯರು ಮಹಿಳೆಯರನ್ನು ಅವರ ಪೋಷಕರಿಂದ ಒಪ್ಪಿಗೆ ಪತ್ರಗಳನ್ನು ಪಡೆದು ಆಗ್ರಾದ ಕಾನ್ವೆಂಟ್‌ಗಳಲ್ಲಿ ಮನೆಕೆಲಸಕ್ಕಾಗಿ ಕರೆದೊಯ್ಯುತ್ತಿದ್ದರು.

ಲಭ್ಯ ಮಾಹಿತಿಗಳ ಪ್ರಕಾರ ಬಂಧಿತ ಸನ್ಯಾಸಿನಿಯರನ್ನು ಭೇಟಿ ಮಾಡಲು ಯಾವುದೇ ಚರ್ಚ್ ಪ್ರತಿನಿಧಿ ಗಳಿಗೆ ಅವಕಾಶ ನೀಡಲಾಗಿಲ್ಲ. ಅಲ್ಲದೆ ಯುವತಿಯರನ್ನು ಅವರ ಹೇಳಿಕೆಗಳನ್ನು ಬದಲಾಯಿಸುವಂತೆ ಒತ್ತಾಯಿಸ ಲಾಗಿದೆ. ಅವರನ್ನು ಅವರ ಇಚ್ಛೆಗೆ ವಿರುದ್ಧವಾಗಿ ಕರೆದೊಯ್ಯಲಾಗುತ್ತಿದೆ ಎಂದು ಹೇಳುವಂತೆ ಅವರನ್ನು ಒತ್ತಾಯಿಸಲಾಗಿದೆ. ಆದರೆ ಇಲ್ಲಿ ಯಾವುದೇ ಬಲವಂತ ಅಥವಾ ಮತಾಂತರ ನಡೆದಿಲ್ಲ.

ಉತ್ತರ ಭಾರತ ಸೇರಿದಂತೆ ದೇಶದಲ್ಲಿ ಕ್ರೈಸ್ತ ಸಮುದಾಯದ ಮೇಲೆ ಬಲಪಂಥೀಯ ಗುಂಪುಗಳಿಂದ ಕಿರುಕುಳ ಹೆಚ್ಚಾಗುತ್ತಿದ್ದು ಗುಂಪು ಹಿಂಸಾಚಾರ, ಪೊಲೀಸ್ ಪ್ರಕರಣಗಳು ಮತ್ತು ಚರ್ಚ್ ನಡೆಸುವ ಸಂಸ್ಥೆಗಳ ಮೇಲಿನ ದಾಳಿಗಳು ಆಗಾಗ ನಡೆಯುತ್ತಿವೆ. ಬಿಜೆಪಿ ನೇತೃತ್ವದ ರಾಜ್ಯ ಸರಕಾರಗಳು ಮೌನವಾಗಿರುವುದರಿಂದ ಆ ರೀತಿಯ ಘಟನೆಗಳು ಇನ್ನೂ ಹೆಚ್ಚಲು ಕಾರಣವಾಗಿದೆ.

ಈ ಘಟನೆ ಬಿಜೆಪಿ ಆಡಳಿತದಲ್ಲಿ ಅಲ್ಪಸಂಖ್ಯಾತರ ಮೇಲೆ ವ್ಯವಸ್ಥಿತ ಕಿರುಕುಳದ ಅಪಾಯಕಾರಿಯಾಗಿದೆ. ಯುನೈಟೆಡ್ ಕ್ರಿಶ್ಚಿಯನ್ ಫೋರಮ್ ಮಾಹಿತಿ ಪ್ರಕಾರ, ಕ್ರಿಶ್ಚಿಯನ್ನರನ್ನು ಗುರಿಯಾಗಿಸಿ ನಡೆಯುವ ಘಟನೆಗಳು ಹೆಚ್ಚುತ್ತಲೇ ಇವೆ. 2014ರಲ್ಲಿ 127 ಪ್ರಕರಣಗಳು ವರದಿಯಾಗಿದ್ದವು. 2024ರಲ್ಲಿ 834ಕ್ಕೆ ಏರಿದೆ. ಇದು ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ವ್ಯವಸ್ಥಿತ ಮತ್ತು ಹೆಚ್ಚುತ್ತಿರುವ ಅಪಾಯವಾಗಿದೆ.

ಸಬ್ಕಾ ಸಾಥ್ ಸಬ್ಬಾ ವಿಕಾಸ್ ಎನ್ನುವ ಧೈಯದೊಂದಿಗೆ ಅಧಿಕಾರ ನಡೆಸುತ್ತಿರುವ ದೇಶದ ಪ್ರಧಾನಿ ಯವರು ಇಬ್ಬರು, ಸನ್ಯಾಸಿನಿಯರ ಬಿಡುಗಡೆಗೆ ತಕ್ಷಣ ಮಧ್ಯಪ್ರವೇಶಿಸಬೇಕು. ಅವರ ಬಿಡುಗಡೆಗೆ ಕಾನೂನು ಬೆಂಬಲ ನೀಡಬೇಕೆಂದು ಹಾಗೂ ಕ್ರೈಸ್ತ ಸಮುದಾಯದ ಸಂಸ್ಥೆಗಳಿಗೆ ಬಲಪಂಥಿಯ ಸಂಘಟನೆಗಳಿಂದ ನಡೆಯುತ್ತಿರುವ ದೌರ್ಜನ್ಯಗಳನ್ನು ನಿಲ್ಲಿಸಬೇಕು ಎಂದು ಪ್ರಶಾಂತ್ ಜತ್ತನ್ನ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X