Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಯುವ ಜನತೆ ಹೆಚ್ಚೆಚ್ಚು ರಕ್ತದಾನಕ್ಕೆ...

ಯುವ ಜನತೆ ಹೆಚ್ಚೆಚ್ಚು ರಕ್ತದಾನಕ್ಕೆ ಮುಂದಾಗಿ: ಡಾ.ವೀಣಾ ಕುಮಾರಿ

ಮಲಬಾರ್ ಗೋಲ್ಡ್‌ನಿಂದ ಬೃಹತ್ ರಕ್ತದಾನ ಶಿಬಿರ

ವಾರ್ತಾಭಾರತಿವಾರ್ತಾಭಾರತಿ31 July 2025 7:39 PM IST
share
ಯುವ ಜನತೆ ಹೆಚ್ಚೆಚ್ಚು ರಕ್ತದಾನಕ್ಕೆ ಮುಂದಾಗಿ: ಡಾ.ವೀಣಾ ಕುಮಾರಿ

ಉಡುಪಿ: 18 ವರ್ಷಕ್ಕೆ ಮತದಾನದ ಹಕ್ಕನ್ನು ಪಡೆಯುವ ನಮ್ಮ ಯುವಜನತೆ ಅದರೊಂದಿಗೆ ರಕ್ತದಾನದ ಹಕ್ಕನ್ನೂ ಪಡೆಯುತ್ತಾರೆ. ಇದನ್ನು ಸದುಪಯೋಗ ಪಡಿಸಿಕೊಂಡು ಯುವಜನತೆ ವರ್ಷಕ್ಕೆ ಕನಿಷ್ಠ ಎರಡು ಬಾರಿ ರಕ್ತದಾನಕ್ಕೆ ಮುಂದಾಗಬೇಕು. ಇದರಿಂದ ಅಮೂಲ್ಯ ಜೀವವನ್ನು ಉಳಿಸಲು ಸಾಧ್ಯವಾಗುತ್ತದೆ ಎಂದು ಉಡುಪಿ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಮುಖ್ಯಸ್ಥೆ ಡಾ.ವೀಣಾಕುಮಾರಿ ಹೇಳಿದ್ದಾರೆ.

ಉಡುಪಿ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನ 12ನೇ ವಾರ್ಷಿಕೋತ್ಸವದ ಪ್ರಯುಕ್ತ ಉಡುಪಿ ಜಿಲ್ಲಾಸ್ಪತ್ರೆಯ ಸಹಯೋಗದೊಂದಿಗೆ ಗುರುವಾರ ಸಂಸ್ಥೆಯಲ್ಲಿ ಆಯೋಜಿಸಿದ್ದ ಬೃಹತ್ ರಕ್ತದಾನ ಶಿಬಿರ ಹಾಗೂ ರಕ್ತದಾನಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡುತಿದ್ದರು.

ರಕ್ತಕ್ಕೆ ಜಾತಿ, ಮತ, ಧರ್ಮದ ಹಂಗು ಇರುವುದಿಲ್ಲ. ರಕ್ತನಿಧಿ ಕೇಂದ್ರದಲ್ಲಿ ಸಂಗ್ರಹವಾಗುವ ರಕ್ತ, ರಕ್ತದ ಅಗತ್ಯವುಳ್ಳ ಯಾವುದೇ ರೋಗಿಯ ಜೀವ ಉಳಿಸುತ್ತದೆ. ರಕ್ತವನ್ನು ವರ್ಗೀಕರಣದಿಂದ ಮಾತ್ರ ಗುರುತಿ ಸುತ್ತೇವೆ. ಅದು ಯಾರದು ಎಂಬುದು ಯಾರಿಗೂ ತಿಳಿಯುವುದಿಲ್ಲ ಎಂದು ಅವರು ಹೇಳಿದರು.

ಮುಂಡ್ಕೂರು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಮೊಕ್ತೇಸರರಾದ ಸುರೇಂದ್ರ ಶೆಟ್ಟಿ, ರಾಜ್ಯ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಹಾಗೂ ರಾಷ್ಟ್ರಪ್ರಶಸ್ತಿ ಪುರಸ್ಕೃತ ಚಲನಚಿತ್ರದ ನಿರ್ದೇಶಕ ಯಾಕೂಬ್ ಖಾದರ್ ಗುಲ್ವಾಡಿ ಹಾಗೂ ಉಡುಪಿ ತುಳುನಾಡ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಫ್ರಾಂಕಿ ಡಿಸೋಜ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಜಿಲ್ಲೆಯ ವಿವಿದೆಡೆಗಳ ರಕ್ತದಾನಿಗಳಾಗಿ ತುರ್ತು ಸಂದರ್ಭಗಳಲ್ಲಿ ರಕ್ತದಾನ ಮಾಡಿ ರುವ ದಿಶಾನ್ ಪೂಜಾರಿ, ಶ್ರೀನಿವಾಸ್ ಪ್ರಸಾದ್ ಮಯ್ಯ, ಶಾಂತರಾಮ್ ಮೊಗವೀರ, ಝಾಕೀರ್ ಹುಸೇನ್, ವಿನುತಾ ಕಿರಣ್, ಜಯರಾಜ್ ಸಾಲಿಯಾನ್, ನಿತ್ಯಾನಂದ್ ಅಮೀನ್, ಚೇತನ್ ಶಂಕರಪುರ ಹಾಗೂ ಅಬ್ದುಲ್ ಹಮೀದ್ ಉಚ್ಚಿಲ ಇವರನ್ನು ಮಲಬಾರ್ ಗೋಲ್ಡ್ ವತಿಯಿಂದ ಸ್ಮರಣಿಕೆಗಳೊಂದಿಗೆ ಸನ್ಮಾನಿಸಲಾಯಿತು.

ಸನ್ಮಾನಿತರ ಪರವಾಗಿ ವಿನುತಾ ಕಿರಣ್, ಶ್ರೀನಿವಾಸ್ ಪ್ರಸಾದ್ ಮಯ್ಯ ಹಾಗೂ ಚೇತನ್ ಶಂಕರಪುರ ಇವರು ರಕ್ತದಾನದ ಅಗತ್ಯತೆ ಕುರಿತು ಮಾತನಾಡಿ, ಉಳಿದವರೂ ರಕ್ತದಾನ ಮಾಡಿ ಅಮೂಲ್ಯ ಜೀವಗಳನ್ನು ಉಳಿಸಲು ಮುಂದಾಗುವಂತೆ ಕರೆ ನೀಡಿದರು.

118 ಯುನಿಟ್ ರಕ ಸಂಗ್ರಹ: ಇಂದು ಒಂದೇ ದಿನದಲ್ಲಿ 118 ರಕ್ತ ಸಂಗ್ರಹವಾಯಿತು. ರಕ್ತವನ್ನು ಜಿಲ್ಲಾಸ್ಪತ್ರೆಗೆ ನೀಡಲಾಯಿತು. ಕಳೆದ ಬಾರಿ ಸಂಸ್ಥೆಯ ವತಿಯಿಂದ ನಡೆದ ರಕ್ತದಾನ ಶಿಬಿರದಲ್ಲಿ 88 ಯುನಿಟ್ ರಕ್ತ ಸಂಗ್ರಹವಾಗಿತ್ತು.

ಕಾರ್ಯಕ್ರಮದಲ್ಲಿ ಅತಿಥಿಗಳನ್ನು ಸ್ವಾಗತಿಸಿ,ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯಸ್ಥ ಹಪೀಝ್ ರೆಹಮಾನ್, ಸಂಸ್ಥೆ ಮಲಬಾರ್ ಟಾರಿಟೇಬಲ್ ಟ್ರಸ್ಟ್ ಮೂಲಕ ಆದಾಯದ ಶೇ.5ರಷ್ಟನ್ನು ಸಮಾಜಮುಖಿ ಕಾರ್ಯಕ್ರಮಗಳಿಗೆ ವಿನಿಯೋಗಿಸುತ್ತಿದೆ. ಟ್ರಸ್ಟ್ ಆರಂಭವಾದಾಗಿನಿಂದ ದೇಶಾದ್ಯಂತ ಈವರೆಗೆ 282 ಕೋಟಿ ರೂ.ಗಳಿಗೂ ಅಧಿಕ ಮೊತ್ತವನ್ನು ಇಂಥ ಕಾರ್ಯಗಳಿಗೆ ವಿನಿಯೋಗಿಸಿದೆ. ಇವುಗಳಲ್ಲಿ ದೇಶದ 17 ರಾಜ್ಯಗಳ 95,000ಕ್ಕೂ ಅಧಿಕ ವಿದ್ಯಾರ್ಥಿನಿಯರಿಗೆ 60 ಕೋಟಿ ರೂ.ಗಳಿಗೂ ಅಧಿಕ ವಿದ್ಯಾರ್ಥಿ ವೇತನವನ್ನು ವಿತರಿಸಿದೆ ಎಂದರು.

ಮಲಬಾರ್ ಗೋಲ್ಡ್‌ನ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ, ಮುಸ್ತಫಾ, ಎ.ಕೆ.ಗುರುರಾಜ್, ಮಾರ್ಕೆಟಿಂಗ್ ವ್ಯವಸ್ಥಾಪಕ ತಂಝೀಮ್ ಶಿರ್ವ ಉಪಸ್ಥಿತರಿದ್ದರು.

ವಿಘ್ನೇಶ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X