Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾರ್ಕಳ: ವಸಂತ್ ಕುಮಾರ್‌ರಿಗೆ ಡಿವಿಜಿ...

ಕಾರ್ಕಳ: ವಸಂತ್ ಕುಮಾರ್‌ರಿಗೆ ಡಿವಿಜಿ ರಾಜ್ಯ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ1 Aug 2025 7:22 PM IST
share
ಕಾರ್ಕಳ: ವಸಂತ್ ಕುಮಾರ್‌ರಿಗೆ ಡಿವಿಜಿ ರಾಜ್ಯ ಪ್ರಶಸ್ತಿ ಪ್ರದಾನ

ಕಾರ್ಕಳ: ಬಿಂಬ ಪ್ರಕಾಶನ ಸಮೂಹ ಮಾಧ್ಯಮ ಸಂಸ್ಥೆಗಳ ಮಾಲಕರಾದ ವಸಂತ್ ಕುಮಾರ್‌ರಿಗೆ ಬೆಂಗಳೂರುನಲ್ಲಿ ಲೇಖಕ ಹಾಗೂ ಸಾಹಿತಿ ಡಿವಿಜಿ ಅವರ ಹೆಸರಿನಲ್ಲಿ ನೀಡಲಾಗುತ್ತಿರುವ ರಾಜ್ಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ (ರಿ) ಬೆಂಗಳೂರು ಇದರ ವತಿಯಿಂದ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ತುಮಕೂರು ನೊಣವಿನ ಕೆರೆ ಶ್ರೀ ಕಾಡು ಸಿದ್ದೇಶ್ವರ ಸಂಸ್ಥಾನ ಮಠದ ಶ್ರೀ ಡಾ. ಕರಿ ವೃಷಭ ದೇಶಿ ಕೇಂದ್ರ ಶಿವ ಯೋಗೀಶ್ವರ ಮಹಾಸ್ವಾಮಿಗಳು, ಹೊರನಾಡು ಅನ್ನ ಪೂರ್ಣೇಶ್ವರಿ ದೇವಸ್ಥಾನದ ಧರ್ಮದರ್ಶಿ ಭೀಮೇಶ್ವರ ಜೋಷಿ, ಅವದೂತರಾದ ವಿನಯ್ ಗುರೂಜಿ, ಬೇರು ಗುಂಡಿ ಬ್ರಹನ್ಮಠದ ರೇಣುಕ ಮಹಾಂತ ಶಿವಾಚಾರ್ಯ ಸ್ವಾಮಿಗಳು , ಅರಣ್ಯ ಸಚಿವ ಈಶ್ವರ ಖಂಡ್ರೆ, ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ. ವಿ. ಪ್ರಭಾಕರ್, ರಾಜ್ಯ ಪರಿಸರ ಮೌಲ್ಯ ಮಾಪನ ಪ್ರಾಧಿಕಾರದ ಅಧ್ಯಕ್ಷ ಎ. ಎನ್. ಮಹೇಶ್, ಮಾದ್ಯಮ ಅಕಾಡೆಮಿ ಅಧ್ಯಕ್ಷರಾದ ಆಯೇಶಾ ಖಾನಂ, ಉಚ್ಚ ನ್ಯಾಯಾಲಯದ ನ್ಯಾಯವಾದಿ ಹಾಗೂ ಕಾನೂನು ಸಲಹೆಗಾರರಾದ ಅಮ್ರತೇಶ್, ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷರಾದ ಡಾ. ರವೀಂದ್ರ ಶೆಟ್ಟಿ, ಇನ್ನೋರ್ವ ಉಪಾಧ್ಯಕ್ಷರಾದ ಟಿ. ಪಿ ಕೃಷ್ಣನ್ ಮತ್ತಿತರರ ಉಪಸ್ಥಿತಿಯಲ್ಲಿ ಈ ಪ್ರಶಸ್ತಿ ನೀಡಲಾಯಿತು.

ಮೂಲತ; ಬೆಳ್ತಂಗಡಿಯವರಾದ ವಸಂತ್ ಕುಮಾರ್‌ರವರು ಪತ್ರಿಕಾ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದವರು. ಈಗಾಗಲೇ ಹಲವಾರು ಪತ್ರಿಕೆಗಳಲ್ಲಿ ಅವರು ಬರೆದ ಕಥೆಗಳು ಪ್ರಕಟವಾಗಿದೆ. ಮುದ್ರಣ ಮಾಧ್ಯಮ ಕ್ಷೇತ್ರದಲ್ಲಿ ಬಿಂಬ ಪ್ರಕಾಶನದ ಮೂಲಕ ಪತ್ರಿಕೆಗಳನ್ನು ವೆಬ್ ಸೈಟ್‌ಗಳನ್ನು, ಲೈವ್‌ಗಳನ್ನು ಅವರು ಆರಂಭಿಸಿ ಮುನ್ನಡೆಸುತ್ತಿದ್ದಾರೆ.

ಬೆಳ್ತಂಗಡಿ, ಸುಳ್ಯ, ಪುತ್ತೂರುಗಳಲ್ಲಿ ಪ್ರಭಾವೀ ಮಾಧ್ಯಮವಾಗಿರುವ ಸುದ್ದಿ ಬಿಡುಗಡೆ ಮೂಲಕ ಪತ್ರಿಕಾ ಕ್ಷೇತ್ರದ ಬದುಕು ಆರಂಭಿಸಿದ ಅವರು ಸತತವಾಗಿ ಪತ್ರಿಕೆ ಮುನ್ನಡೆಸಿದ್ದಾರೆ.

1996ರಿಂದ ಕಾರ್ಕಳದಲ್ಲಿ ಬಿಂಬ ಪ್ರಕಾಶನದ ಮೂಲಕ ಸ್ವಾವಲಂಬಿ ಪತ್ರಿಕಾ ಬದುಕು ಆರಂಭಿಸಿರುವ ಅವರು ಕೊಲ್ಲೂರಿನ ಕೊಡಚಾದ್ರಿ ಉಳಿಸಿ ಆಂದೋಲನದಲ್ಲಿ ಸಮಿತಿ ವಕ್ತಾರರಾಗಿ ಪಾಲ್ಗೊಂಡವರು.

ಪಶ್ಚಿಮ ಘಟ್ಟದಲ್ಲಿ ಸಕ್ರಿಯವಾಗಿದ್ದ ನಕ್ಸಲ್ ಚಳುವಳಿಯ ಬಗ್ಗೆ 2002ರಿಂದಲೇ ನಿರಂತರ ವರದಿ ಪ್ರಕಟಿಸಿದ ಅವರು ನಕ್ಷಲ್ ಶರಣಾಗತಿ ಪ್ರಕ್ರಿಯೆಗೂ ಪ್ರಯತ್ನ ಪಟ್ಟವರು.

ಕುದುರೆ ಮುಖದಲ್ಲಿ ಹುಲಿ ಯೋಜನೆ ಬಗ್ಗೆ, ಕಸ್ತೂರಿ ರಂಗನ್ ವರದಿಗಳ ಬಗ್ಗೆ ಆ ಪ್ರದೇಶದ ಜನರಲ್ಲಿ ನಿಕಟ ಸಂಪರ್ಕ ಇರಿಸಿ ಕೊಂಡು ಅರಿವು ಮೂಡಿಸಿದವರು.

2003ನೇ ಸಾಲಿನಲ್ಲಿ ಕಾರ್ಕಳ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ, 2004 ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿ ಕೂಡಾ ಸೇವೆ ಸಲ್ಲಿಸಿದವರು. ಅವರ 31ವರ್ಷಗಳ ನಿರಂತರ ಪತ್ರಿಕಾ ಹಾದಿಯಲ್ಲಿ ಅವರಿಗೆ ಹಲವಾರು ಪ್ರಶಸ್ತಿಗಳು ಸಲ್ಲಿಕೆಯಾಗಿದೆ.

2012ನೇ ಸಾಲಿನಲ್ಲಿ ಕೇರಳದಲ್ಲಿ ಗಡಿನಾಡ ಸಾಂಸ್ಕೃತಿಕ ಪ್ರತಿಷ್ಠಾನ ರಾಜ್ಯ ಪ್ರಶಸ್ತಿ, ಕೊಪ್ಪಳದಲ್ಲಿ ಕವಿ ಸಿದ್ದಯ್ಯ ಪುರಾಣಿಕ ಸ್ಮಾರಕ ಪ್ರಶಸ್ತಿ, 2018ನೇ ಸಾಲಿನಲ್ಲಿ ಮಂಗಳೂರುನಲ್ಲಿ ಜಿಲ್ಲಾ ಸಾಧಕ ಪುರಸ್ಕಾರ, 2023 ನೇ ಸಾಲಿನಲ್ಲಿ ಸಕಲೇಶಪುರದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, 2024 ನೇ ಸಾಲಿನಲ್ಲಿ ತಮಿಳ್ನಾಡಿನಲ್ಲಿ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಸಂಘದ ಸಮ್ಮೇಳನದಲ್ಲಿ ಪುರಸ್ಕಾರ ಹೀಗೆ ಹಲವಾರು ಪ್ರಶಸ್ತಿಗಳು ಸನ್ಮಾನಗಳು ಸಲ್ಲಿಕೆಯಾಗಿವೆ.

ನೂರಾರು ಮಂದಿ ಅನಾರೋಗ್ಯ ಪೀಡಿತರಿಗೆ, ಅಶಕ್ತರಿಗೆ ತನ್ನ ಪತ್ರಿಕಾ ಹಾದಿಯಲ್ಲಿ ಅವರು ಸಹಕಾರ ನೀಡುತ್ತಾ ಬಂದಿದ್ದಾರೆ.

ಬಿಂಬ ಪ್ರಕಾಶನದ ಮೂಲಕ ಕಾರ್ಕಳ ಮೂಡಬಿದ್ರೆ ಹಾಗೂ ಹೆಬ್ರಿಯಲ್ಲಿ ಮಾಧ್ಯಮ ಬಿಂಬ ಪತ್ರಿಕೆ ಹಾಗೂ ವೆಬ್ ಸೈಟ್, ಸ್ವಯಂ ಟೈಮ್ಸ್ ನ್ಯೂಸ್, ಲೈವ್ ಹಾಗೂ ಸಕಲೇಶಪುರ ಹಾಗೂ ಆಲೂರುನಲ್ಲಿ ಮಲ್ನಾಡ್ ಶ್ಯಾಡೋ ಡಿಜಿಟಲ್ ಮಾಧ್ಯಮ ಮುನ್ನಡೆಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X