Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಲ್ಪೆ ಮೀನುಗಾರಿಕಾ ಬಂದರಿನ ವಿಸ್ತರಣೆಗೆ...

ಮಲ್ಪೆ ಮೀನುಗಾರಿಕಾ ಬಂದರಿನ ವಿಸ್ತರಣೆಗೆ ಯೋಜನೆ ರೂಪಿಸಿ: ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ

ವಾರ್ತಾಭಾರತಿವಾರ್ತಾಭಾರತಿ1 Aug 2025 7:34 PM IST
share
ಮಲ್ಪೆ ಮೀನುಗಾರಿಕಾ ಬಂದರಿನ ವಿಸ್ತರಣೆಗೆ ಯೋಜನೆ ರೂಪಿಸಿ: ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ

ಉಡುಪಿ, ಆ.1: ಮಲ್ಪೆ ಸರ್ವಋತು ಮೀನುಗಾರಿಕಾ ಬಂದರಿನಲ್ಲಿ ಮೀನುಗಾರಿಕಾ ಚಟುವಟಿಕೆಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ಬಂದರಿನ ವಿಸ್ತರಣೆಗೆ ಯೋಜನೆಯನ್ನು ರೂಪಿಸುವಂತೆ ಹಾಗೂ ಕಾಪು ತಾಲೂಕಿನ ಹೆಜಮಾಡಿ ಬಂದರಿನಲ್ಲಿ ಮೀನುಗಾರಿಕಾ ಚಟುವಟಿಕೆಗಳನ್ನು ಕೈಗೊಳ್ಳಲು ಅನುಕೂಲ ವಾಗುವಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ರಾಜ್ಯ ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹಾಗೂ ಉಡುಪಿ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿಯಾಗಿರುವ ರೋಹಿಣಿ ಸಿಂಧೂರಿ ಹೇಳಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪದಿಂದಾದ ಹಾನಿ ಹಾಗೂ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಕರಾವಳಿ ಭಾಗಗಳಲ್ಲಿ ಕಡಲಕೊರೆತ ಪ್ರತಿ ವರ್ಷವೂ ಉಂಟಾಗುತ್ತಿದೆ. ಇವುಗಳ ತಡೆಗೆ ಶಾಶ್ವತ ವೈಜ್ಞಾನಿಕ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ಮುಂದಾಗಬೇಕು. ಮಳೆಯಿಂದ ಭತ್ತದ ಬೆಳೆ ಹಾಗೂ ತೋಟಗಾರಿಕಾ ಬೆಳೆಗಳಿಗೆ ಉಂಟಾಗಿರುವ ಹಾನಿಗಳನ್ನು ನಿಖರವಾಗಿ ಗುರುತಿಸಿ, ರೈತರಿಗೆ ಪರಿಹಾರವನ್ನು ಒದಗಿಸಬೇಕು ಎಂದು ಅವರು ಕೃಷಿ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ನೂತನ ಕಟ್ಟಡ ಕಾಮಗಾರಿಗಳನ್ನು ಕೈಗೊಳ್ಳಲು ಸಾರ್ವಜನಿಕರಿಗೆ ಅಗತ್ಯವಿರುವ 9/11 ಎ ದಾಖಲೆಗಳನ್ನು ಪಡೆಯಲು ಕೆಲವು ನಿಯಮಾವಳಿಗಳಿಂದ ತೊಂದರೆ ಉಂಟಾಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿದ್ದು, ನಿಯಮಾವಳಿಯಲ್ಲಿ ಕೆಲವೊಂದು ವಿನಾಯಿತಿಯನ್ನು ನೀಡಿದ್ದಲ್ಲಿ ಸಮಸ್ಯೆಗಳನ್ನು ಪರಿಹರಿಸಬಹುದಾಗಿದೆ. ಈ ಬಗ್ಗೆ ಸರಕಾರಕ್ಕೆ ಕೂಡಲೇ ಪ್ರಸ್ತಾವನೆಯನ್ನು ಕಳುಹಿಸಿ ಕೊಡುವಂತೆ ಅವರು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

ಜಿಲ್ಲೆಯಲ್ಲಿ ಬಿದ್ದ ಹೆಚ್ಚಿನ ಮಳೆಯಿಂದಾಗಿ ಹಾಳಾದ ರಸ್ತೆಯ ದುರಸ್ಥಿ ಕಾರ್ಯವನ್ನು ತ್ವರಿತವಾಗಿ ಮಾಡುವುದರೊಂದಿಗೆ ಸಾರ್ವಜನಿಕರ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡ ಬೇಕು ಎಂದು ಸೂಚನೆ ನೀಡಿದ ರೋಹಿಣಿ ಸಿಂಧೂರಿ, ಈಗಾಗಲೇ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಕೈಗೊಂಡಿರುವ ಕಾಲುಸಂಕ ನಿರ್ಮಾಣ ಕಾಮಗಾರಿಗಳನ್ನು ಮಳೆ ಕಡಿಮೆಯಾದ ಕೂಡಲೇ ಪುನರಾರಂಭಿಸಿ, ತ್ವರಿತವಾಗಿ ಆದ್ಯತೆಯ ಮೇಲೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಸೂಚನೆ ನೀಡಿದರು.

ಹವಾಮಾನ ಇಲಾಖೆಯಿಂದ ಪ್ರತಿದಿನ ನೀಡುವ ಹವಾಮಾನ ಮುನ್ಸೂಚನೆ ಮಾಹಿತಿಯನ್ನು ಸಾರ್ವಜನಿ ಕರಿಗೆ ಹಾಗೂ ವಿಶೇಷವಾಗಿ ಮೀನುಗಾರಿಕೆಗೆ ತೆರಳುವ ಮೀನುಗಾರರುಗಳಿಗೆ ಒದಗಿಸಬೇಕು. ಮೀನುಗಾರರು ಸಮುದ್ರದಲ್ಲಿ ಮೀನುಗಾರಿಕಾ ಚಟುವಟಿಕೆಗಳಿಗೆ ಹೋಗುವಾಗ ಕಡ್ಡಾಯವಾಗಿ ಲೈಫ್ ಜಾಕೆಟ್‌ಗಳನ್ನು ಬಳಸುವಂತೆ ಮನವೊಲಿಸಬೇಕು. ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣವಿದ್ದಾಗ ಮೀನುಗಾರಿಕೆಗೆ ತೆರಳದಂತೆ ಎಚ್ಚರವಹಿಸಬೇಕು ಎಂದರು.

ಜಲಜೀವನ್ ಮಿಷನ್ ಅಡಿಯಲ್ಲಿ ಗ್ರಾಮಪಂಚಾಯತಿ ವ್ಯಾಪ್ತಿಯ ಮನೆಮನೆಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ 525 ನಳ ಸಂಪರ್ಕ ಕಾಮಗಾರಿಗಳಲ್ಲಿ 487ನ್ನು ಪೂರ್ಣಗೊಳಿಸಲಾಗಿದೆ. ಪ್ರಗತಿಯಲ್ಲಿರುವ 38 ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಅವರು ಸಂಬಂಧಿತ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X