Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮೊಬೈಲ್ ಎಂಬ ವ್ಯಸನದಿಂದ ದೂರವಿರಿ:...

ಮೊಬೈಲ್ ಎಂಬ ವ್ಯಸನದಿಂದ ದೂರವಿರಿ: ಡಾ.ಪಿ.ವಿ.ಭಂಡಾರಿ

ವಾರ್ತಾಭಾರತಿವಾರ್ತಾಭಾರತಿ1 Aug 2025 8:51 PM IST
share
ಮೊಬೈಲ್ ಎಂಬ ವ್ಯಸನದಿಂದ ದೂರವಿರಿ: ಡಾ.ಪಿ.ವಿ.ಭಂಡಾರಿ

ಉಡುಪಿ, ಆ.1: ಜನತೆ, ಅದರಲ್ಲೂ ವಿಶೇಷವಾಗಿ ಯುವ ಜನತೆ ಮಾದಕ ಔಷಧ, ಅಮಲು ನೀಡುವ ಡ್ರಗ್ಸ್, ಮದ್ಯಪಾನ, ತಂಬಾಕು ಉತ್ಪನ್ನಗಳ ಸೇವನೆಯಂಥ ದುಶ್ಚಟಗಳಿಂದ ದೂರವಿರುವ ಜೊತೆಗೆ ಮೊಬೈಲ್ ಎಂಬ ವ್ಯಸನದಿಂದಲೂ ದೂರವಿರುವಂತೆ ಖ್ಯಾತ ಮನೋವೈದ್ಯ, ದೊಡ್ಡಣಗುಡ್ಡೆ ಡಾ.ಎ.ವಿ. ಬಾಳಿಗಾ ಆಸ್ಪತ್ರೆಯ ನಿರ್ದೇಶಕ ಡಾ. ಪಿ.ವಿ.ಭಂಡಾರಿ ಹೇಳಿದ್ದಾರೆ.

ನಗರದ ಅಜ್ಜರಕಾಡಿನಲ್ಲಿರುವ ಐ.ಎಂ.ಎ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಇಲಾಖೆ, ಭಾರತೀಯ ವೈದ್ಯಕೀಯ ಸಂಘ (ಐಎಂಎ) ಉಡುಪಿ ಕರಾವಳಿ, ವಿದ್ಯಾರತ್ನ ನರ್ಸಿಂಗ್ ಕಾಲೇಜು ಉಡುಪಿ ಹಾಗೂ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಡಾ.ಮಹಾಂತ ಶಿವಯೋಗಿ ಸ್ವಾಮೀಜಿ ಅವರ ಜನ್ಮದಿನದ ಅಂಗವಾಗಿ ನಡೆದ ವ್ಯಸನ ಮುಕ್ತ ದಿನಾಚರಣೆಯಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡುತಿದ್ದರು.

ಒಮ್ಮೆ ದುಶ್ಚಟದ ಚಕ್ರವ್ಯೆಹದಲ್ಲಿ ಸಿಲುಕಿದರೆ ಅದರಿಂದ ಹೊರಬರುವುದು ಕಷ್ಟ. ಅನೇಕ ಜನರು ದುಶ್ಚಟ ಗಳಿಂದಲೇ ತಮ್ಮ ಪ್ರಾಣಗಳನ್ನು ಕಳೆದು ಕೊಂಡರೆ, ಅನೇಕರು ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಾರೆ. ಪ್ರತಿಯೊಬ್ಬರೂ ಕೈಜೋಡಿಸಿದರೆ ಮಾತ್ರ ವ್ಯಸನಮುಕ್ತ ಸಮಾಜ ನಿರ್ಮಾಣ ಮಾಡಲು ಸಾಧ್ಯ. ಒಬ್ಬರಿಂದ ಸಮಾಜ ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಆಧುನಿಕ ಯುಗದಲ್ಲಿ ಮೊಬೈಲ್‌ನ ಸೋಷಿಯಲ್ ಮೀಡಿಯಾಗಳಲ್ಲಿ ರೀಲ್ಸ್‌ಗಳನ್ನು ನಿರಂತರವಾಗಿ ನೋಡುವುದು ಸಹ ಒಂದು ವ್ಯಸನವಾಗಿದೆ. ಇದರಿಂದ ದೂರವಿರಬೇಕು. ಅಗತ್ಯಕ್ಕೆ ಎಷ್ಟು ಬೇಕೊ ಅಷ್ಟೇ ಮೊಬೈಲ್ ಬಳಕೆ ಮಾಡಬೇಕು. ಅಲ್ಲದೇ ಅವುಗಳಲ್ಲಿ ಹಾಕುವ ಮಾಹಿತಿಗಳು ಸಹ ಬಹುತೇಕ ಸುಳ್ಳು ಗಳಿಂದ ಕೂಡಿರುತ್ತವೆ. ಆದ್ದರಿಂದ ಅವುಗಳಿಗೆ ಮಾರು ಹೋಗಬಾರದು ಎಂದು ಅವರು ಕಿವಿಮಾತು ಹೇಳಿದರು.

ದೇಹಕ್ಕೆ ಹಾನಿಕರವಾಗುವ ಮದ್ಯಪಾನ, ತಂಬಾಕು ಉತ್ಪನ್ನಗಳು, ಅಮಲು ಬರುವಂತಹ ಡ್ರಗ್ಸ್ ಸೇರಿ ದಂತೆ ಯಾವುದೇ ದುಶ್ಚಟದಿಂದ ದೂರವಿರಬೇಕು. ಆರೋಗ್ಯವಂತರು ಎಂದರೆ ಮಾನಸಿಕವಾಗಿ ಹಾಗೂ ದೈಹಿಕವಾಗಿ ಉತ್ತಮ ಸ್ಥಿತಿಯಲ್ಲಿ ಇರುವುದು. ಇದನ್ನು ಹೊಂದಲು ಪ್ರತಿಯೊಬ್ಬರೂ ಒತ್ತು ನೀಡಬೇಕು ಎಂದು ಅವರು ಸಲಹೆ ನೀಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ, ಡಾ.ಮಹಾಂತ ಶಿವಯೋಗಿ ಸ್ವಾಮೀಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಖ್ಯಾತ ಮೂಳೆರೋಗ ತಜ್ಞ ಹಾಗೂ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಉಡುಪಿ ಕರಾವಳಿ ಅಧ್ಯಕ್ಷ ಡಾ.ಕೆ ಸುರೇಶ್ ಶೆಣೈ ಮಾತನಾಡಿ ಜನಸಾಮಾನ್ಯರು ದುಶ್ಚಟಗಳಿಂದ ದೂರವಿದ್ದಾಗ ಮಾತ್ರ ಉತ್ತಮ ಆರೋಗ್ಯ ಹೊಂದಿ, ಸ್ವಸ್ಥ್ಯ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದರು.

ಡಾ.ಮಹಾಂತ ಶಿವಯೋಗಿ ಸ್ವಾಮೀಜಿಗಳು ಕಳೆದ 70ನೇ ದಶಕದಲ್ಲಿ ಜೋಳಿಗೆ ಅಭಿಯಾನದ ಮೂಲಕ ಜನರಲ್ಲಿದ್ದ ದುಶ್ಚಟಗಳನ್ನು ಭಿಕ್ಷೆಯ ರೀತಿಯಲ್ಲಿ ಜೋಳಿಗೆಗೆ ಹಾಕಿಸಿಕೊಂಡು ಅವರ ಮನಃಪರಿರ್ತಿಸಿ, ಪ್ರತಿಜ್ಞೆ ಪಡೆದು ದುಶ್ಚಟಗಳಿಂದ ದೂರ ಉಳಿಯುವಂತೆ ಮಾಡಿ, ವ್ಯಸನಿಗಳು ತಮ್ಮ ಕುಟುಂಬ ಸದಸ್ಯರೊಂದಿಗೆ ನೆಮ್ಮದಿಯ ಜೀವನ ಮಾಡುವ ಸಮಾಜಮುಖಿ ಕಾರ್ಯವನ್ನು ಮಾಡಿದ್ದರು ಎಂಬುದನ್ನು ವಿವರಿಸಿದರು.

ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ಪ್ರಾಸ್ತಾವಿಕವಾಗಿ ಮಾತನಾಡಿ, ಡಾ.ಮಹಾಂತ ಶಿವಯೋಗಿ ಸ್ವಾಮೀಜಿಗಳು ಸಮಾಜದ ಜನರಲ್ಲಿದ್ದ ವ್ಯಸನ, ದುಶ್ಚಟಗಳನ್ನು ದೂರ ಮಾಡಿ, ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಮಾಡಿದ ಕೆಲಸವನ್ನು ತಿಳಿಸಿ, ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ಬಂದಂತಹ ಸಂದರ್ಭದಲ್ಲಿ ನೂರಾರು ಗಂಜಿಕೇಂದ್ರಗಳನ್ನು ತೆರೆದಿರುವುದನ್ನು, ಅವರ ವಿವಿಧ ಸಮಾಜಮುಖಿ ಕಾರ್ಯಗಳನ್ನು ವಿವರಿಸಿದರು.

ವಿದ್ಯಾರತ್ನ ಕಾಲೇಜಿನ ಪ್ರಾಂಶುಪಾಲೆ ಡಾ.ಅನಿತಾ ಸಿ.ರಾವ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಉಡುಪಿ ಸಿಟಿ ಎಜುಕೇಷನ್ ಟ್ರಸ್ಟ್‌ನ ಆಡಳಿತ ಅಧಿಕಾರಿ ರವಿಪಾಲನ್, ವಿದ್ಯಾರತ್ನ ಕಾಲೇಜಿನ ಉಪ ಪ್ರಾಂಶುಪಾಲ ಡಾ.ಎಂ.ಕೆ ರಮೇಶ್ ಹಾಗೂ ಇತರರು ಉಪಸ್ಥಿತರಿದ್ದರು.

ಕಾಲೇಜಿನ ಸಹಾಯಕ ಉಪನ್ಯಾಸಕಿ ಶ್ರೀಲತಾ ಕಾರ್ಯಕ್ರಮ ನಿರೂಪಿಸಿದರೆ, ರಂಜಿತಾ ವಂದಿಸಿದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X