ಪ್ರತ್ಯೇಕ ಪ್ರಕರಣ: ಮೂವರ ಆತ್ಮಹತ್ಯೆ

ಹಿರಿಯಡ್ಕ, ಆ.3: ವೈಯಕ್ತಿಕ ಕಾರಣದಿಂದ ಮನನೊಂದ ಪೆರ್ಡೂರು ಗ್ರಾಮದ ಕಿಶೋರ್(37) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಆ.3ರಂದು ಮಧ್ಯಾಹ್ನ ಕುಕ್ಕುಂಜಾರು ಪಾಡಿಗಾರು ರಸ್ತೆಯ ಪಕ್ಕದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಣಿಪಾಲ: ಅನಾರೋಗ್ಯದಿಂದ ಬಳಲುತ್ತಿದ್ದ ಹೆರ್ಗಾ ಗ್ರಾಮದ ರಮೇಶ್ ನಾಯ್ಕ(48) ಎಂಬವರು ಆ.2ರಂದು ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ: ವೈಯಕ್ತಿಕ ಕಾರಣದಿಂದ ಮನನೊಂದು ಜು.28ರಂದು ಮನೆಯಲ್ಲಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಡೇರಹೋಬಳಿ ಗ್ರಾಮದ ಬಸವ ಮೊಗವೀರ ಎಂಬವರ ಮಗ ಸತೀಶ(36) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಆ.2ರಂದು ಮಧ್ಯಾಹ್ನ ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





