Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾಂಗ್ರೆಸ್ ಸೇರ್ಪಡೆ ಸುದ್ದಿ ಸಂಪೂರ್ಣ...

ಕಾಂಗ್ರೆಸ್ ಸೇರ್ಪಡೆ ಸುದ್ದಿ ಸಂಪೂರ್ಣ ಆಧಾರರಹಿತ: ಪ್ರಮೋದ್ ಮಧ್ವರಾಜ್ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ13 Jun 2026 11:51 AM IST
share
ಕಾಂಗ್ರೆಸ್ ಸೇರ್ಪಡೆ ಸುದ್ದಿ ಸಂಪೂರ್ಣ ಆಧಾರರಹಿತ: ಪ್ರಮೋದ್ ಮಧ್ವರಾಜ್ ಸ್ಪಷ್ಟನೆ

ಉಡುಪಿ, ಜೂ.13: ‘ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದೇನೆ ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸಂಪೂರ್ಣವಾಗಿ ಆಧಾರರಹಿತವಾಗಿದ್ದು, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಬಿಜೆಪಿ ಮುಖಂಡ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸ್ಪಷ್ಟಪಡಿಸಿದ್ದಾರೆ.

ನಾನು ಬಿಜೆಪಿಯನ್ನು ಅಧಿಕಾರಕ್ಕಾಗಿ ಸೇರಿಲ್ಲ, ಜನಸೇವೆಯ ಉದ್ದೇಶದಿಂದ ಸೇರಿದ್ದೇನೆ. ಅಧಿಕಾರ ಅಥವಾ ಹುದ್ದೆಗಳು ಬಂದರೆ ಅದು ಹೆಚ್ಚುವರಿ ಜವಾಬ್ದಾರಿಯಷ್ಟೇ. ಆದರೆ ನನ್ನ ರಾಜಕೀಯ ಜೀವನದ ಮೂಲ ಉದ್ದೇಶ ಜನರ ಸೇವೆ ಮತ್ತು ಕರ್ನಾಟಕದ ಸಮಗ್ರ ಅಭಿವೃದ್ಧಿಯಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾನು ಯಾವುದೇ ಅಧಿಕಾರ ಅಥವಾ ಹುದ್ದೆಗಾಗಿ ಪರಿತಪಿಸುತ್ತಿಲ್ಲ. ಹುದ್ದೆಗಳು ವ್ಯಕ್ತಿಯನ್ನು ದೊಡ್ಡವನನ್ನಾಗಿಸುವುದಿಲ್ಲ; ಜನರ ವಿಶ್ವಾಸ ಮತ್ತು ಸೇವೆಯೇ ವ್ಯಕ್ತಿಯ ನಿಜವಾದ ಶಕ್ತಿಯಾಗಿದೆ ಎಂಬ ನಂಬಿಕೆ ನನ್ನದು. ನನಗೆ ಅಧಿಕಾರ ಸಿಕ್ಕರೆ ಅದು ಕೇವಲ ಜನರ ಸೇವೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಲು ಮಾತ್ರ. ಅಧಿಕಾರ ಎನ್ನುವುದು ನನ್ನ ಪಾಲಿಗೆ ಗೌರವ ಅಥವಾ ಸ್ಥಾನಮಾನವಲ್ಲ, ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದ್ದಾರೆ.

ಪಕ್ಷ ನನಗೆ ಯಾವುದೇ ಜವಾಬ್ದಾರಿ ನೀಡಿದರೆ ಅದನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ. ಜವಾಬ್ದಾರಿ ಸಿಗದಿದ್ದರೂ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಜನರ ಮಧ್ಯೆ ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ. ಮುಂದಿನ ದಿನಗಳಲ್ಲಿ ಪಕ್ಷದ ನಾಯಕರು ನನ್ನ ಕಾರ್ಯ, ಪಕ್ಷದ ಮೇಲಿನ ನಿಷ್ಠೆ ಹಾಗೂ ಜನಸೇವೆಯ ಬದ್ಧತೆಯನ್ನು ಖಂಡಿತವಾಗಿಯೂ ಗುರುತಿಸಿ ಸೂಕ್ತ ಹಾಗೂ ಉತ್ತಮ ನಿರ್ಧಾರವನ್ನು ಕೈಗೊಳ್ಳುತ್ತಾರೆ ಎಂಬ ಸಂಪೂರ್ಣ ವಿಶ್ವಾಸ ನನಗಿದೆ ಎಂದು ಅವರು ತಿಳಿಸಿದ್ದಾರೆ.

ನನ್ನ ರಾಜಕೀಯ ಪಯಣದಲ್ಲಿ ನನ್ನ ಮೇಲೆ ವಿಶ್ವಾಸವಿಟ್ಟು ಬೆಂಬಲ ನೀಡುತ್ತಿರುವ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಜನತೆಗೆ ನಾನು ಸದಾ ಚಿರಋಣಿಯಾಗಿದ್ದೇನೆ. ಅವರ ಪ್ರೀತಿ, ವಿಶ್ವಾಸ ಮತ್ತು ಆಶೀರ್ವಾದವೇ ನನಗೆ ಮತ್ತಷ್ಟು ಶಕ್ತಿಯನ್ನು ನೀಡುತ್ತಿದೆ. ಆದ್ದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ಸುದ್ದಿ ಮತ್ತು ವದಂತಿಗಳಿಗೆ ಕಿವಿಗೊಡದೆ, ಅಧಿಕೃತ ಮಾಹಿತಿಯನ್ನಷ್ಟೇ ನಂಬಬೇಕು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Tags

CongressBJPPramod MadhwarajUdupi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X