Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ನಿಟ್ಟೆ | ‘ಎಲಿಕ್ಸಿರ್’ ಪ್ರಾಜೆಕ್ಟ್...

ನಿಟ್ಟೆ | ‘ಎಲಿಕ್ಸಿರ್’ ಪ್ರಾಜೆಕ್ಟ್ ಪ್ರದರ್ಶನ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ10 Nov 2025 9:51 PM IST
share
ನಿಟ್ಟೆ | ‘ಎಲಿಕ್ಸಿರ್’ ಪ್ರಾಜೆಕ್ಟ್ ಪ್ರದರ್ಶನ ಉದ್ಘಾಟನೆ

ನಿಟ್ಟೆ, ನ.10: ಜ್ಞಾನ ಮತ್ತು ಕೌಶಲ್ಯವೆಂಬುದು ದ್ವಿಚಕ್ರ ವಾಹನದ ಎರಡು ಚಕ್ರಗಳಿದ್ದಂತೆ. ಕೇವಲ ಜ್ಞಾನದಿಂದ ನಾವು ಏನನ್ನೂ ಸಾಧಿಸಲು ಸಾಧ್ಯವಾಗದು. ಇಂದಿನ ದಿನಗಳಲ್ಲಿ ಪ್ರತಿಯೊಂದು ಉದ್ಯೋಗದಲ್ಲೂ ಕೌಶಲ್ಯವು ಪ್ರಮುಖ ಅಂಶವಾಗಿ ಪರಿಗಣಿಸಲ್ಪಡುತ್ತದೆ ಎಂದು ಮುಂಬೈ ಟ್ರಾಂಬೆಯ ಟಾಟಾ ಪವರ್ಸ್ಕಿಲ್ ಡೆವಲಪ್ಮೆಂಟ್ ಇನ್ಸ್ಟಿಟ್ಯೂಟ್ ನ ನಿವೃತ್ತ ಪ್ರಾಂಶುಪಾಲ ಬಾಲರಾಜ ಕಜಂಪಾಡಿ ಭಟ್ ಅಭಿಪ್ರಾಯಪಟ್ಟಿದ್ದಾರೆ.

ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಇಲೆಕ್ಟ್ರಿಕಲ್- ಇಲೆಕ್ಟ್ರಾನಿಕ್ಸ್ ವಿಭಾಗವು ಸಂಸ್ಥೆಯ ಹಳೆ ವಿದ್ಯಾರ್ಥಿಗಳ ಪ್ರಾಯೋಜಕತ್ವದಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಹಮ್ಮಿಕೊಂಡ ‘ಎಲಿಕ್ಸಿರ್ 2025’ ವಿದ್ಯಾರ್ಥಿಗಳ ಮಾದರಿ ವಸ್ತುಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ನವೀನತೆ ಮತ್ತು ಅನುಭವಾಧಾರಿತ ಅಧ್ಯಯನದತ್ತ ಗಮನ ಹರಿಸಬೇಕು ಎಂದು ಬಾಲರಾಜ್ ಭಟ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಗೌರವ ಅತಿಥಿಯಾಗಿ ಬಾಗವಹಿಸಿದ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ತಾಂತ್ರಿಕ ಶಿಕ್ಷಣದ ಉಪಾಧ್ಯಕ್ಷ ಡಾ.ಗೋಪಾಲ್ ಮುಗೇರಾಯ ಮಾತನಾಡಿ, ಸೃಜನಶೀಲತೆ ಮತ್ತು ತಾಂತ್ರಿಕ ಶ್ರೇಷ್ಠತೆಯನ್ನು ಉತ್ತೇಜಿಸುವ ಇಂತಹ ಕಾರ್ಯಕ್ರಮವನ್ನು ಆಯೋಜಿಸಿದ ವಿಭಾಗದ ಶ್ರಮವನ್ನು ಪ್ರಶಂಸಿಸಿದರು.

ಅಧ್ಯಕ್ಷತೆಯನ್ನು ನಿಟ್ಟೆ ತಾಂತ್ರಿಕ ಕಾಲೇಜಿನ ಉಪಪ್ರಾಂಶುಪಾಲ ಡಾ.ನಾಗೇಶ್ ಪ್ರಭು ವಹಿಸಿದ್ದರು. ಕಾಲೇಜಿನ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ಸೂರ್ಯನಾರಾಯಣ ಕೆ. ಅತಿಥಿಗಳನ್ನು ಸ್ವಾಗತಿಸಿದರು.

ಈ ವಸ್ತು ಪ್ರದರ್ಶನದಲ್ಲಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳ ವಿನೂತನ ಯೋಜನೆಗಳನ್ನು ಪ್ರದರ್ಶಿಸಲಾಯಿತು. ಇವುಗಳಲ್ಲಿ ವಿದ್ಯುತ್ ವ್ಯವಸ್ಥೆಗಳು, ರಿನೀವೇಬಲ್ ಎನರ್ಜಿ, ಸ್ವಯಂಚಾಲಿತ ತಂತ್ರಜ್ಞಾನಗಳು ಮತ್ತು ಎಂಬೆಡೆಡ್ ತಂತ್ರಜ್ಞಾನಗಳ ಕ್ಷೇತ್ರಗಳಲ್ಲಿ ಸೃಜನಶೀಲ ಪರಿಹಾರಗಳನ್ನು ಒಳಗೊಂಡಿದ್ದವು. ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಸೇರಿ ವಿನ್ಯಾಸಗೊಳಿಸಿದ ಸಂಸ್ಥೆಯ ಎರಡು ಆಂತರಿಕ ಉತ್ಪನ್ನಗಳು- ’ಟ್ರೈಸೈಕಲ್’ ಮತ್ತು ‘ಇ-ಸ್ಪಿನ್ ಬೈಕ್’-ನ್ನು ಸಂಸ್ಥೆಯ ಬಳಕೆಗೆ ಬಿಡುಗಡೆ ಮಾಡಲಾಯಿತು.

ಎರಡು ದಿನಗಳ ಪ್ರದರ್ಶನದಲ್ಲಿ 10 ಕೈಗಾರಿಕಾ ಪ್ರತಿನಿಧಿಗಳು ಹಾಗೂ 35 ಹಳೆಯ ವಿದ್ಯಾರ್ಥಿಗಳು ಭಾಗವಹಿಸಿ, ಅಕಾಡೆಮಿಕ್- ಕೈಗಾರಿಕಾ- ಹಳೆಯ ವಿದ್ಯಾರ್ಥಿ ಸಂವಾದವನ್ನು ನಡೆಸಿಕೊಟ್ಟರು. ಸಂಯೋಜಕ ರವಿಕಿರಣ ರಾವ್ ವಂದಿಸಿದರು. ಭೂಮಿಕಾ ಆಚಾರ್ಯ ಅತಿಥಿಗಳನ್ನು ಪರಿಚಯಿಸಿ ಅನ್ವಿತಾ ಭಟ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X