ನಿಟ್ಟೆ | ಮಹಿಳಾ ಶಿಕ್ಷಕಿಯರಿಗೆ ನಾಯಕತ್ವ ತರಬೇತಿ ಶಿಬಿರ ಉದ್ಘಾಟನೆ

ನಿಟ್ಟೆ, ನ.11: ಮಹಿಳಾ ಅಧ್ಯಾಪಕಿಯರು ಹೊಸತನ, ಕಲಿಯುವ ಹುಮ್ಮಸ್ಸು ಹಾಗೂ ಮಾರ್ಗದರ್ಶನಗಳ ಮೂಲಕ ನಾಯಕತ್ವದ ಸಾಮರ್ಥ್ಯ ವನ್ನು ಪಡೆದುಕೊಳ್ಳಬೇಕು ಎಂದು ಪುಣೆಯ ಸಿಂಬಯೋಸಿಸ್ ತಾಂತ್ರಿಕ ಸಂಸ್ಥೆಯ ಸಹ ಪ್ರಾದ್ಯಾಪಕಿ ಡಾ.ರಾಹೀ ವಾಲಾಂಬೆ ಮಹಿಳಾ ಶಿಕ್ಷಕಿಯರಿಗೆ ಕಿವಿಮಾತು ಹೇಳಿದ್ದಾರೆ.
ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಸಿಬ್ಬಂದಿ ಅಭಿವೃದ್ಧಿ ಕೇಂದ್ರ (ಎಸ್ಡಿಸಿ), ಐಇಇಇ ಬೆಂಗಳೂರು ವಿಭಾಗ ಹಾಗೂ ವುಮನ್ ಇನ್ ಎಂಜಿನಿಯರಿಂಗ್(ಡಬ್ಲ್ಯುಐಇ) ಮಂಗಳೂರು ಉಪವಿಭಾಗದ ಸಹಯೋಗದಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಮಾಹಿತಿ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಭಾಗವು ಮಹಿಳಾ ಶಿಕ್ಷಕಿಯರಿಗಾಗಿ ಆಯೋಜಿಸಿದ್ದ ಮೂರು ದಿನಗಳ ಅಧ್ಯಾಪಕ ಅಭಿವೃದ್ಧಿ ಕಾರ್ಯಕ್ರಮ (ಎಫ್ಡಿಪಿ)ವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಗೌರವ ಅತಿಥಿಯಾಗಿ ಭಾಗವಹಿಸಿದ್ದ ಐಇಇಇ ಮಂಗಳೂರು ಉಪವಿಭಾಗದ ಅಧ್ಯಕ್ಷ ಡಾ.ವೇಣುಗೋಪಾಲ ಪಿ.ಎಸ್. ಮಾತನಾಡಿ ಶಿಬಿರಕ್ಕೆ ಶುಭ ಹಾರೈಸಿದರು.
ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ.ನಿರಂಜನ್ ಎನ್.ಚಿಪ್ಲುಣಕರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಸಿಬ್ಬಂದಿ ಅಭಿವೃದ್ಧಿ ಕೇಂದ್ರದ ನಿರ್ದೇಶಕಿ ಸಾಧನಾ ದೇಶ್ಮುಖ್ ಉಪಸ್ಥಿತರಿದ್ದರು. ಸುಮಾರು 60 ಮಂದಿ ಈ ಅಧ್ಯಾಪಕ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಮಾಹಿತಿ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥೆ ಡಾ.ಅಶ್ವಿನಿ ಬಿ ಸ್ವಾಗತಿಸಿದರು. ವಿಭಾಗದ ಪ್ರಾಧ್ಯಾಪಕಿ ಡಾ.ಮಂಜುಳಾ ಗುರುರಾಜ್ ರಾವ್, ಡಾ.ರಶ್ಮಿ ನವೀನ್ ಅತಿಥಿಗಳನ್ನು ಪರಿಚಯಿಸಿದರು. ಸಹಾಯಕ ಪ್ರಾಧ್ಯಾಪಕಿ ಡಾ.ಚಿನ್ಮಯಿ ಶೆಟ್ಟಿ ವಂದಿಸಿ, ಡಾ.ದೀಪಾ ಕಾರ್ಯಕ್ರಮ ನಿರೂಪಿಸಿದರು.







