Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಿದ್ದಾಪುರ ಏತ ನೀರಾವರಿ ಯೋಜನೆಗೆ...

ಸಿದ್ದಾಪುರ ಏತ ನೀರಾವರಿ ಯೋಜನೆಗೆ ವಿರೋಧವಿಲ್ಲ: ಗೋಪಾಲ ಪೂಜಾರಿ

ವಾರ್ತಾಭಾರತಿವಾರ್ತಾಭಾರತಿ23 Jan 2026 9:30 PM IST
share
ಸಿದ್ದಾಪುರ ಏತ ನೀರಾವರಿ ಯೋಜನೆಗೆ ವಿರೋಧವಿಲ್ಲ: ಗೋಪಾಲ ಪೂಜಾರಿ

ಕುಂದಾಪುರ, ಜ.23: ಸಿದ್ದಾಪುರ ಏತ ನೀರಾವರಿ ಯೋಜನೆಗೆ ನನ್ನ ವಿರೋಧವಿಲ್ಲ ಎಂಬುದು ಈ ಹಿಂದೆ ಸ್ಪಷ್ಟಪಡಿ ಸಲಾಗಿದೆ. ವಾರಾಹಿ ಯೋಜನೆ ಮೂಲ ಆಶಯಕ್ಕೆ ಧಕ್ಕೆಯಾಗುವಂತೆ ಕಾಮಗಾರಿ ನಡೆದರೆ ವಾರಾಹಿ ನದಿಪಾತ್ರದ ಜನರಿಗೆ ನೀರಿಲ್ಲದಾಗುತ್ತದೆ. ತಜ್ಞರು ಸ್ಥಳ ಪರಿಶೀಲನೆ ಮಾಡಿ ಎಲ್ಲರಿಗೂ ನೀರು ಸಿಗಬೇಕೆನ್ನುವುದೇ ಕಳಕಳಿ. ಸ್ಥಳಿಯಾಡಳಿತ ಚುನಾವಣೆಯಲ್ಲಿ ಕಾಂಗ್ರೆಸನ್ನು ಮುಗಿಸಲು ಬಿಜೆಪಿ ಈ ಬಗ್ಗೆ ಅಪಪ್ರಚಾರ ಮಾಡುತ್ತಿದೆಂದು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಆರೋಪಿಸಿದ್ದಾರೆ.

ಶುಕ್ರವಾರ ಕರೆದ ಸುದ್ದಿಗೋಷ್ಟಿಯಲ್ಲಿ ಅವರು, ಸಿದ್ದಾಪುರದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಬೈಂದೂರು ಶಾಸಕರು ಮಾಡಿದ ಆರೋಪಗಳಿಗೆ ಉತ್ತರ ನೀಡಿದರು. ಹಲವಾರು ಅಣೆಕಟ್ಟು ತಂದು ಹಾಕಿದ್ದೇನೆ ಎಂದು ಶಾಸಕರು ಹೇಳಿದ್ದು, ಅದು ಯಾವುದು ಎಂದು ಅವರೇ ಪಟ್ಟಿಕೊಡಬೇಕು. ತಾನು ಶಾಸಕನಾಗಿದ್ದಾಗ ಸುಬ್ಬರಾಡಿ, ರಾಜಾಡಿ, ಆಜ್ರಿ, ಹೆಮ್ಮಾಡಿಕಟ್ಟು, ಶಾರದಾಪುರ, ಬಿಜೂರು ಅಣೆಕಟ್ಟಿಗೆ ಅನುದಾನ ಮಂಜೂರಾಗಿದ್ದು ಸೌಕೂರು ಏತನೀರಾವರಿ ಡಿಪಿಆರ್ ಆಗಿತ್ತು. ಈಗಿನ ಶಾಸಕರು ಮಾಡಿದ್ದು ಯಾವುದು ಎಂದು ಹೇಳಲಿ ಎಂದು ಸವಾಲು ಹಾಕಿದರು.

ಈಗ ಸಿದ್ದಾಪುರದ ಶೇ.70 ಭಾಗಕ್ಕೆ ವಾರಾಹಿ ನೀರಿಲ್ಲ. ಬಲದಂಡೆ ಯೋಜನೆ, ಶಂಕರನಾರಾಯಣ, ಅಂಪಾರು ಭಾಗದ ನೀರಿಗೂ ಸಮಸ್ಯೆ ಆಗುತ್ತದೆ. ಹೊಳೆಶಂಕರನಾರಾಯಣ ದೇವಸ್ಥಾನ ಸಹಿತ ಅಣೆಕಟ್ಟಿನ ಕೆಳಭಾಗದ ರೈತರಿಗೆ ಸಮಸ್ಯೆ ಆಗಬಾರದು ಎನ್ನುವುದು ನನ್ನ ಉದ್ದೇಶ. ಹಾಗಾಗಿ 2023ರಲ್ಲಿ ನೀಡಿದ್ದ ಪತ್ರವನ್ನು 2025ರಲ್ಲಿ ನೆನಪಿಸಿದ್ದೆ. ಅದಕ್ಕಾಗಿ ತಜ್ಞರ ಸಮಿತಿ ನೇಮಿಸಿದ್ದು ಅದರಲ್ಲಿ ಸುರತ್ಕಲ್ ಎನ್‌ಐಟಿಕೆಯವರನ್ನೂ ಸೇರಿಸಬೇಕು ಎನ್ನುವ ಒತ್ತಾಯವು ನನ್ನದಿದೆ ಎಂದರು.

ರೈತ ಮುಖಂಡ ಬಲಾಡಿ ಸಂತೋಷ್ ಕುಮಾರ್ ಶೆಟ್ಟಿ ಮಾತನಾಡಿ, ವಾರಾಹಿ ಮೂಲಯೋಜನೆಯಂತೆ 38 ಸಾವಿರ ಎಕರೆಗೆ ನೀರು ಹೋಗ ಬೇಕು. ಈಗ ಶೇ.30 ಕಾಮಗಾರಿ ಮಾತ್ರ ನಡೆದಿದೆ. ಹೊಸ ಕಾಮಗಾರಿಗಳು ನಡೆದರೆ ಮೂಲಯೋಜನೆಯಂತೆ ನೀರು ಸಿಗುವುದಿಲ್ಲ. ಈಗ ಅಣೆಕಟ್ಟಿಗೆ ಅಪಾಯ ಆಗುವಂತೆ ಕಲ್ಲು ಸ್ಫೋಟ ನಡೆಯುತ್ತಿದೆ. ಸೌಕೂರು ಏತ ನೀರಾವರಿಯಿಂದ 8 ಗ್ರಾಮಗಳಿಗೆ ನೀರು ಹೋಗುತ್ತದೆ. ಈಗ ಆದ ವಾರಾಹಿ ಕಾಮಗಾರಿಯಿಂದ ಕೋಟೇಶ್ವರ ವರೆಗೆ ನೀರು ಹೋಗುತ್ತದೆ ಎಂದು ತಿಳಿಸಿದರು.

ವಾರಾಹಿ ಮೂಲಯೋಜನೆಯಂತೆ ಎಲ್ಲರಿಗೂ ನೀರು ಕೊಡಿ ಎನ್ನುವ ಸಲುವಾಗಿ ಜ.25ರಂದು ಕಂಡ್ಲೂರಿನಲ್ಲಿ ಬೆಳಗ್ಗೆ ವಾರಾಹಿ ನದಿ ನೀರು ಬಳಕೆದಾರರ ಜನಾಂದೋಲನ ಸಭೆ ಆಯೋಜಿಸಲಾಗಿದೆ. ಹೋರಿಯಬ್ಬೆ ಡ್ಯಾಂನ ಕೆಳ ಭಾಗದ ಮಚ್ಚಟ್ಟು, ಅಮಾಸೆಬೈಲು, ರಟ್ಟಾಡಿ, ಹಾಲಾಡಿ, 76 ಹಾಲಾಡಿ, ಹಾರ್ದಳ್ಳಿ ಮಂಡಳ್ಳಿ, ಮೊಳಹಳ್ಳಿ, ಜಪ್ತಿ, ಬಳ್ಕೂರು, ಬಸ್ರೂರು, ಹಟ್ಟಿಕುದ್ರು, ಆನಗಳ್ಳಿ, ಗುಲ್ವಾಡಿ, ಸಿದ್ದಾಪುರ, ಉಳ್ಳೂರು 74, ಶಂಕರನಾರಾಯಣ, ಕುಳ್ಳಂಜೆ, ಅಂಪಾರು, ಹಳ್ನಾಡು, ಕಾವ್ರಾಡಿಯ ರೈತರಿಗೆ ಸಮಸ್ಯೆ ಆಗಲಿದೆ. ಸಿದ್ದಾಪುರಕ್ಕೆ ಏತ ನೀರಾವರಿ ಬೇಕು ಎನ್ನುವುದು ನಮ್ಮ ಆಗ್ರಹ ಎಂದರು.

ಕಾಂಗ್ರೆಸ್ ಮುಖಂಡರಾದ ಅಶೋಕ್ ಪೂಜಾರಿ ಬೀಜಾಡಿ, ಅರವಿಂದ ಪೂಜಾರಿ ಬೈಂದೂರು, ವಿಜಯ ಪುತ್ರನ್, ಸುದೇಶ್ ಶೆಟ್ಟಿ ಗುಲ್ವಾಡಿ, ಶ್ರೀನಿವಾಸ ಸೌಡ, ಅಕ್ಷಯ್ ಶೆಟ್ಟಿ, ಯೋಗೇಶ್ ಪೂಜಾರಿ ಕೋಡಿ ಮೊದಲಾದವರು ಉಪಸ್ಥಿತರಿದ್ದರು.

Tags

oppositionSiddapurliftirrigationproject
share
ವಾರ್ತಾಭಾರತಿ
ವಾರ್ತಾಭಾರತಿ
Next Story
X