Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಣ್ಣ ನೀರಾವರಿ ಇಲಾಖೆ ಕಾಮಗಾರಿಗಳಲ್ಲಿ...

ಸಣ್ಣ ನೀರಾವರಿ ಇಲಾಖೆ ಕಾಮಗಾರಿಗಳಲ್ಲಿ ಅವ್ಯವಹಾರ ಕಂಡುಬಂದಲ್ಲಿ ಅಧಿಕಾರಿ ವಜಾ, ಗುತ್ತಿಗೆದಾರರು ಕಪ್ಪುಪಟ್ಟಿಗೆ: ಬೋಸರಾಜು ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ8 Sept 2023 8:25 PM IST
share
ಸಣ್ಣ ನೀರಾವರಿ ಇಲಾಖೆ ಕಾಮಗಾರಿಗಳಲ್ಲಿ ಅವ್ಯವಹಾರ ಕಂಡುಬಂದಲ್ಲಿ ಅಧಿಕಾರಿ ವಜಾ, ಗುತ್ತಿಗೆದಾರರು ಕಪ್ಪುಪಟ್ಟಿಗೆ: ಬೋಸರಾಜು ಎಚ್ಚರಿಕೆ

ಚಾರ/ಶಿವಪುರ (ಹೆಬ್ರಿ), ಸೆ.8: ಸಣ್ಣ ನೀರಾವರಿ ಇಲಾಖೆಯ ಕಾಮಗಾರಿಗಳಲ್ಲಿ ಯಾವುದೇ ಅವ್ಯವಹಾರ ನಡೆದಿರುವುದು ಕಂಡು ಬಂದರೆ ಸಂಬಂಧಪಟ್ಟ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರ್ಪಡೆಗೊಳಿಸಿ, ಇಲಾಖಾ ಇಂಜಿನಿಯರ್‌ಗಳು ತಪ್ಪಿತಸ್ಥರಾದಲ್ಲಿ ಅವರನ್ನು ಸೇವೆಯಿಂದಲೇ ವಜಾ ಮಾಡಲಾಗುವುದು ಎಂದು ರಾಜ್ಯ ಸಣ್ಣ ನೀರಾವರಿ ಇಲಾಖಾ ಸಚಿವ ಎನ್.ಎಸ್.ಬೋಸರಾಜು ಎಚ್ಚರಿಕೆ ನೀಡಿದ್ದಾರೆ.

ಹೆಬ್ರಿ ತಾಲೂಕಿನ ಚಾರ ಗ್ರಾಪಂ ವ್ಯಾಪ್ತಿಯಲ್ಲಿ ಸೀತಾನದಿಗೆ ನಿರ್ಮಾಣಗೊಳ್ಳುತ್ತಿರುವ ಬ್ರಿಡ್ಜ್ ಕಮ್ ವೆಂಟೆಡ್‌ಡ್ಯಾಂ ಕಾಮಗಾರಿ ಪರಿಶೀಲಿಸಿ, ಶಿವಪುರ ಗ್ರಾಪಂ ವ್ಯಾಪ್ತಿಯ ದೇವಸ್ಥಾನಬೆಟ್ಟುನಲ್ಲಿ ನಿರ್ಮಾಣ ಗೊಂಡ ಕಿಂಡಿ ಅಣೆಕಟ್ಟು ವೀಕ್ಷಿಸಿದ ಬಳಿಕ ಅವರು ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸುತಿದ್ದರು.

ಜಿಲ್ಲೆಯಲ್ಲಿ ಕೆಲವು ಕಿಂಡಿ ಅಣೆಕಟ್ಟುಗಳ ನಿರ್ಮಾಣದಲ್ಲಿ ಅವ್ಯವಹಾರ ನಡೆದಿದೆ ಎಂಬ ದೂರಿನ ಕುರಿತಂತೆ ಪ್ರತಿಕ್ರಿಯಿಸಿದ ಸಚಿವರು, ಶಿವಪುರದ ದೇವಸ್ಥಾನಬೆಟ್ಟುವಿನ ತೊರೆಯೊಂದಕ್ಕೆ ಅಡ್ಡಲಾಗಿ 1.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಗೊಂಡ ಕಿಂಡಿ ಅಣೆಕಟ್ಟು ಕಾಮಗಾರಿಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಬಂದಿರುವ ದೂರಿನ ಬಗ್ಗೆ ಪರಿಶೀಲಿಸಿದ್ದು, ಸ್ಥಳೀಯ ಜನತೆ ಮತ್ತು ಜನಪ್ರತಿನಿಧಿಗಳ ಅಭಿಪ್ರಾಯ ಪಡೆಯಲಾಗಿದೆ. ಎಲ್ಲರೂ ಇದೊಂದು ಉತ್ತಮ ಯೋಜನೆಯಾಗಿದ್ದು, ಇದರಿಂದ ಸ್ಥಳೀಯ ಜನರಿಗೆ ಅನುಕೂಲವಾಗಿದೆ ಎಂದಿದ್ದಾರೆ ಎಂದರು.

ಮುಖ್ಯವಾಗಿ ಇದು ಅಂತರ್ಜಲ ಮಟ್ಟದ ವೃದ್ಧಿಗಾಗಿ ನಿರ್ಮಿಸಲಾದ ಕಿಂಡಿ ಅಣೆಕಟ್ಟು. ಇದರಿಂದ ಪರಿಸರದ ಆಸುಪಾಸಿನ ಬಾವಿ ಹಾಗೂ ಕೆರೆಗಳಲ್ಲಿ ನೀರಿನ ಮಟ್ಟ ಅಧಿಕಗೊಂಡಿದೆ, ಪರಿಸರದ ಸುಮರು 72 ಎಕರೆ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ದೊರೆಯುತ್ತಿದೆ. ಅಣೆಕಟ್ಟಿನ ಬಳಿಯಿಂದ ಕಾಲುವೆಗಳ ಮೂಲಕ ನೀರು ಹರಿಯುತ್ತಿದೆ ಎಂದು ಸಚಿವರು ನುಡಿದರು.

ಅಣೆಕಟ್ಟು ನಿರ್ಮಾಣಗೊಂಡ ಪ್ರದೇಶದ ಮೇಲೆ 1.3ಕಿ.ಮೀ. ಉದ್ದಕ್ಕೆ ನೀರು ಸಂಗ್ರಹವಾಗುತ್ತಿದ್ದು, ಇದರಿಂದ ಈ ಪ್ರದೇಶ ದಲ್ಲೆಲ್ಲಾ ಅಂತರ್ಜಲ ಮಟ್ಟ ಹೆಚ್ಚಳವಾಗಿದೆ ಎಂದು ಇಲಾಖೆಯ ಇಂಜಿನಿಯರ್‌ಗಳು ಸಚಿವರಿಗೆ ಮಾಹಿತಿ ನೀಡಿದರು.

ಸಚಿವರ ಮಾತಿಗೆ ಸಹಮತ ವ್ಯಕ್ತಪಡಿಸಿದ ಶಿವಪುರ ಗ್ರಾಪಂ ಅಧ್ಯಕ್ಷೆ ಶೋಭಾ ಬಿ.ಶೆಟ್ಟಿ, ಮಾಜಿ ಅಧ್ಯಕ್ಷರಾದ ಸುಗಂಧಿ ನಾಯ್ಕ್ ಹಾಗೂ ಶೇಖರ್ ಶೆಟ್ಟಿ ಅವರು, ಕಿಂಡಿ ಅಣೆಕಟ್ಟು ನಿರ್ಮಾಣದ ಬಳಿಕ ಪರಿಸರದ ಬಾವಿಗಳಲ್ಲಿ ನೀರಿನ ಮಟ್ಟದಲ್ಲಿ ಹೆಚ್ಚಳವಾಗಿದೆ. ಇದರಿಂದಾಗಿಯೇ ಒಣ ಪ್ರದೇಶ ಎಂದು ಘೋಷಣೆಯಾದ ಶಿವಪುರ ಗ್ರಾಮದಲ್ಲಿ ಈ ವರ್ಷದ ಬೇಸಿಗೆಯಲ್ಲಿ ಉಳಿದೆಡೆಗಳಲ್ಲಿ ಕಂಡುಬಂದ ನೀರಿನ ಕೊರತೆ ಕಾಣಿಸಿಕೊಂಡಿಲ್ಲ ಎಂದರು.

ಇಲ್ಲೇ ಪಕ್ಕದಲ್ಲೀ ಹರಿಯುವ ಶಿವಪುರ ಹೊಳೆಗೆ ಸೇತುವೆ ನಿರ್ಮಾಣ ನಡೆದಿದೆ. ಅಲ್ಲೂ ಕಿಂಡಿ ಅಣೆಕಟ್ಟು ನಿರ್ಮಿಸಿದರೆ ಇಡೀ ಶಿವಪುರಕ್ಕೆ ಕುಡಿಯುವ ನೀರು ನೀಡಬಹುದು ಎಂದು ಸಚಿವರಿಗೆ ಮನವಿ ಮಾಡಿದರು. ಈ ಬಗ್ಗೆ ಪರಿಶೀಲಿಸಿ ಮುಂದಿನ ಕ್ರಮಕ್ಕೆ ವರದಿ ಮಂಡಿಸಿ ಎಂದು ಇಲಾಖೆಯ ಅಧಿಕಾರಿಗಳಿಗೆ ಸಚಿವ ಬೋಸರಾಜು ನಿರ್ದೇಶನ ನೀಡಿದರು.

ಚಾರದಿಂದ 2000 ಎಕರೆ ಪ್ರದೇಶಕ್ಕೆ ನೀರು: ಚಾರ ಗ್ರಾಮದ ನವೋದಯ ಶಾಲೆಯ ಬಳಿ ಪಶ್ಚಿಮವಾಹಿನಿ ಯೋಜನೆ ಯಡಿ ಸೀತಾನದಿಗೆ 70 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಬ್ರಿಡ್ಜ್ ಕಮ್ ವೆಂಟೆಡ್ ಡ್ಯಾಮ್‌ನಿಂದ ಹೆಬ್ರಿ, ಚಾರ ಹಾಗೂ ಕುಚ್ಚೂರು ಗ್ರಾಮಗಳ 763 ಹೆಕ್ಟೇರ್ (2000ಎಕರೆ) ಪ್ರದೇಶಗಳಿಗೆ ನೀರಾವರಿ ಸೌಲಭ್ಯ ದೊರೆಯಲಿದೆ ಎಂದು ಸಚಿವರು ತಿಳಿಸಿದರು.

ಇದೇ ವರ್ಷದ ಮಾರ್ಚ್ 18ರಿಂದ ಕಾಮಗಾರಿ ಪ್ರಾರಂಭಗೊಂಡಿದ್ದು, ಎರಡು ವರ್ಷದಲ್ಲಿ ಪೂರ್ಣಗೊಳ್ಳುವ ಗುರಿ ನೀಡಿ ದ್ದರೂ, ಗುತ್ತಿಗೆದಾರರಾದ ಬೆಳಗಾವಿ ಘಟಪ್ರಭದ ಜೆಎನ್‌ಎಸ್ ಕನ್‌ಸ್ಟ್ರಕ್ಷನ್ ಇದನ್ನು ಮುಂದಿನ ಮಾರ್ಚ್ ಒಳಗೆ ಪೂರ್ಣ ಗೊಳಿಸುವ ಭರವಸೆ ನೀಡಿದೆ ಎಂದು ನುಡಿದ ಸಚಿವರು ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಬೇಕೆಂದು ಅವರಿಗೆ ಸ್ಪಷ್ಟವಾಗಿ ಸೂಚಿಸಲಾಗಿದೆ ಎಂದರು.

ಸೇತುವೆ ಕಾಮಗಾರಿ ಮಾರ್ಚ್‌ಗೆ ಮುಗಿದರೆ, ಕಿಂಡಿಅಣೆಕಟ್ಟಿನ ಕಾಮಗಾರಿಯನ್ನು ಮೇ ಸುಮಾರಿಗೆ ಪೂರ್ಣಗೊಳಿಸುವು ದಾಗಿ ಗುತ್ತಿಗೆದಾರರು ತಿಳಿಸಿದರು.

ಶಿವಪುರ ಕಿಂಡಿ ಅಣೆಕಟ್ಟು: ಅಕ್ರಮದ ದೂರು

ಶಿವಪುರ ಗ್ರಾಮದ ದೇವಸ್ಥಾನಬೆಟ್ಟುನಲ್ಲಿ ಸಣ್ಣ ನೀರಾವರಿ ಇಲಾಖೆ ವತಿಯಿಂದ ನಿರ್ಮಾಣಗೊಂಡ ಕಿಂಡಿ ಅಣೆಕಟ್ಟು ಕಾಮಗಾರಿಯಲ್ಲಿ ಅಕ್ರಮ ನಡೆದ ಬಗ್ಗೆ ಸ್ಥಳೀಯರು ವ್ಯಕ್ತಪಡಿಸಿ ಲೋಕಾಯುಕ್ತ ಹಾಗೂ ಸರಕಾರಕ್ಕೆ ದೂರು ನೀಡಿದ್ದರು. ಪಶ್ಚಿಮ ವಾಹಿನಿ ಯೋಜನೆಯಡಿ 1.50 ಕೋಟಿ ರೂ.ವೆಚ್ಚದಲ್ಲಿ ಈ ಕಿಂಡಿ ಅಣೆಕಟ್ಟು ನಿರ್ಮಿಸಲಾಗಿದೆ.

ಇಲಾಖೆ 72 ಎಕರೆ ಪ್ರದೇಶಕ್ಕೆ ಇದರಿಂದ ಲಾಭವಿದೆ ಎಂದು ಹೇಳಿದ್ದರೂ, ಅಣೆಕಟ್ಟಿನಿಂದ ಅನುಕೂಲವಾಗುವುದು ಏಳೆಂಟು ಎಕರೆ ಕೃಷಿ ಭೂಮಿಗೆ ಮಾತ್ರ ಎಂಬುದು ಸ್ಥಳೀಯರ ಅನಿಸಿಕೆಯಾಗಿತ್ತು. 2019-20ನೇ ಸಾಲಿನಲ್ಲಿ ಈ ಕಾಮಗಾರಿ ಮಂಜೂರಾಗಿದ್ದು, 2020-21ರಲ್ಲಿ ಕಾಮಗಾರಿ ಪೂರ್ಣಗೊಂಡಿತ್ತು. ಈ ಯೋಜನೆಯಿಂದ ಸ್ಥಳೀಯ ಕೃಷಿಕರಿಗೆ ಹೆಚ್ಚು ಅನುಕೂಲವೂ ಆಗಿಲ್ಲ ಎಂಬುದು ಸ್ಥಳೀಯರ ದೂರಾಗಿತ್ತು. ಕಾಮಗಾರಿಯಲ್ಲಿ ಅವ್ಯವಹಾರ ನಡೆದಿರುವ ಬಗ್ಗೆಯೂ ಅನುಮಾನ ವ್ಯಕ್ತಪಡಿಸಿದ್ದರು.

ಶಿವಪುರ ನದಿಗೆ ಸೇರುವ ಚಿಕ್ಕ ಉಪನದಿಗೆ ಈ ಕಿಂಡಿ ಅಣೆಕಟ್ಟು ನಿರ್ಮಿಸಲಾಗಿದೆ. ಈ ಹಿಂದೆ ನಾವು ಕಟ್ಟ ಕಟ್ಟಿ ಒಂದು ಬೆಳೆ ತೆಗೆಯುತ್ತಿದ್ದೆವು. ಡಿಸೆಂಬರ್ ಹೊತ್ತಿಗೆ ಇಲ್ಲಿ ನೀರು ಖಾಲಿ ಆಗುತ್ತಿತ್ತು ಎಂಬುದು ಸ್ಥಳೀಯರ ದೂರಾಗಿದೆ. ಅಣೆಕಟ್ಟು ನಿರ್ಮಾಣದ ಬಳಿಕವೂ ಒಂದೇ ಬೆಳೆ ತೆಗೆಯುತ್ತಿದ್ದೇವೆ. ಎರಡನೇ ಬೆಳೆ ಮಾಡಲು ನೀರು ಸಾಲುತ್ತಿಲ್ಲ. ಇಲ್ಲಿನ ನಾಲ್ವರು ರೈತರ ಏಳೆಂಟು ಎಕರೆ ಜಮೀನಿಗೆ ಮಾತ್ರ ಅನುಕೂಲವಾಗುತ್ತಿದೆ ಎಂಬುದು ಸ್ಥಳೀಯರ ದೂರಾಗಿತ್ತು.

ಇದೀಗ ಸ್ಥಳೀಯರು ನೀಡಿದ ದೂರಿನ ಆಧಾರದಲ್ಲಿ ಪರಿಶೀಲನೆಗಾಗಿ ಸಚಿವ ಬೋಸರಾಜು ಇಲ್ಲಿಗೆ ಇಂದು ಭೇಟಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X