Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಜ.22ರಂದು ಅಯೋಧ್ಯೆ ರಾಮಮಂದಿರ...

ಜ.22ರಂದು ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ: ಪೇಜಾವರ ಶ್ರೀ

48 ದಿನಗಳ ಮಂಡಲೋತ್ಸವ ಸಂಭ್ರಮ

ವಾರ್ತಾಭಾರತಿವಾರ್ತಾಭಾರತಿ16 Nov 2023 9:26 PM IST
share
ಜ.22ರಂದು ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ: ಪೇಜಾವರ ಶ್ರೀ

ಉಡುಪಿ, ನ.16: ಅಯೋಧ್ಯೆ ಶ್ರೀರಾಮಜನ್ಮಭೂಮಿಯಲ್ಲಿ ರಾಮ ಮಂದಿರ ನಿರ್ಮಾಣದ ಭಾರತೀಯರ ಕನಸು 2024 ಜ.22ರಂದು ಪ್ರಾಣಪ್ರತಿಷ್ಠೆ ಸಹಿತ ರಾಮಮಂದಿರ ಲೋಕಾರ್ಪಣೆಯೊಂದಿಗೆ ನನಸಾಗಲಿದೆ ಎಂದು ಪೇಜಾವರ ಮಠದ ಶ್ರೀವಿಶ್ವಪ್ರಸನ್ನತೀರ್ಥರು ತಿಳಿಸಿದ್ದಾರೆ.

ಗುರುವಾರ ರಥಬೀದಿಯಲ್ಲಿರುವ ಪೇಜಾವರ ಮಠದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಸಾರ್ವಜನಿಕರು, ರಾಮಭಕ್ತರು ತಮ್ಮ ಊರ ದೇವಳಗಳಲ್ಲಿ ಭಜನೆ, ಮಂಗಳಾರತಿ, ಉತ್ಸವ, ಸಂಜೆ ದೇವಸ್ಥಾನ ಹಾಗೂ ಮನೆಗಳಲ್ಲಿ ಐದು ದೀಪಗಳನ್ನು ಐದು ಶತಮಾನಗಳ ಹೋರಾಟದ ಸ್ಮರಣೆಗಾಗಿ ಬೆಳಗಬಹುದು ಎಂದು ಪೇಜಾವರಶ್ರೀ ತಿಳಿಸಿದರು.

48ದಿನಗಳ ಮಂಡಲೋತ್ಸವ: ಜ.23ರಿಂದ ಮಾ.10ರ ತನಕ ದಿನವೂ ರಾಮದೇವರಿಗೆ ಕಲಶಾಭಿಷೇಕ, ಯಜ್ಞ ಯಾಗ ಹಾಗೂ ಕೊನೆಯ ಐದು ದಿನಗಳ ಕಾಲ ಬ್ರಹ್ಮಕಲಶ ನಡೆಯಲಿದ್ದು ರಾಮದೇವರಿಗೆ ಸೇವೆ ಸಮರ್ಪಣೆಗೆ ಅವಕಾಶವನ್ನು ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟಿನ ಧಾರ್ಮಿಕ ಸಮಿತಿ ವತಿಯಿಂದ ಕಲ್ಪಿಸಲಾಗಿದೆ. ಸೇವಾ ಸಮರ್ಪಣೆಗೆ ಯಾವುದೇ ಸೇವಾ ಪಟ್ಟಿ ರಾಮಮಂದಿರದಲ್ಲಿ ಇರದು ಎಂದವರು ವಿವರಿಸಿದರು.

48 ದಿನಗಳ ಮಂಡಲೋತ್ಸವ ಸಂದರ್ಭ ಭಕ್ತರಿಗೆ ಸೇವೆ ಒದಗಿಸಲು ಅಯೋಧ್ಯಾ ಮಂಡಲೋತ್ಸವ.ಕಾಂ ಮೂಲಕ ನೋಂದಣಿ, ಕಲಶಾಭಿಷೇಕಕ್ಕೆ ಅವಕಾಶವಿದೆ. ಒಂದು ಕೆ.ಜಿ.ರಜತ ಕಲಶಕ್ಕೆ ಒಂದು ಲಕ್ಷ ರೂ. ಸೇವಾ ಶುಲ್ಕ ನಿಗದಿ ಪಡಿಸಿದ್ದು 2023-24ನೇ ಸಾಲಿನಲ್ಲಿ 10ಲಕ್ಷ ರೂ.ಮೌಲ್ಯದ ಸೇವೆ ಒದಗಿಸಿದವರು ಇದಕ್ಕೆ ಅರ್ಹರಾಗಿದ್ದಾರೆ. ಮನೆ ನಿರ್ಮಾಣಕ್ಕೆ ನೆರವು, ಗೋವು ದತ್ತು, ಶೈಕ್ಷಣಿಕ ನೆರವು, ವೈದ್ಯಕೀಯ ನೆರವು ನೀಡಿದ್ದನ್ನು ಗಜೆಟ್ ಅಧಿಕಾರಿಗಳಿಂದ ಪ್ರಮಾಣೀಕರಿಸಿ ಅಪ್ ಲೋಡ್ ಮಾಡಬೇಕು. ಪ್ರಸಾದ ಸಹಿತ ಕಲಶವನ್ನು ಸೇವಾದಾರರಿಗೆ ನೀಡಲಾಗುವುದು ಎಂದರು.

44 ದಿನಗಳಲ್ಲಿ ದಿನಕ್ಕೆ 1,2 ಕಲಶ ಅಭಿಷೇಕವಾದರೆ ಉಳಿದ ನಾಲ್ಕು ದಿನಗಳಲ್ಲಿ ಸಹಸ್ರ ಕಲಶಾಭಿಷೇಕ ನೆರವೇರಲಿದೆ. ರಾಮಭಕ್ತಿ, ದೇಶಭಕ್ತಿಯ ನೆಲೆಯಲ್ಲಿ ರಾಮಮಂದಿರದಿಂದ ರಾಮರಾಜ್ಯದೆಡೆಗೆ ನಾವು ಸಾಗಬೇಕು. ಡಿ.1ರಂದು ಅಯೋಧ್ಯಾ ಮಂಡಲೋತ್ಸವ.ಕಾಂ ಲೋಕಾರ್ಪಣೆಯಾಗಲಿದ್ದು ಇಂದಿನಿಂದ ಹೆಸರು ನೋಂದಾಯಿಸಬಹುದು. ರೋಬೋಸಾಫ್ಟ್ ಆ್ಯಪ್ ರೂಪಿಸಿದ್ದು ವ್ಯವಹಾರ ಪಾರದರ್ಶಕವಾಗಲಿದೆ ಎಂದರು.

ಸುದ್ದಿಗೋಷ್ಟಿಯಲ್ಲಿ ಮಾಜಿ ಶಾಸಕ ಕೆ. ರಘುಪತಿ ಭಟ್, ನಂದ ಕಿಶೋರ್, ಶ್ರೀನಿಧಿ, ಸುಬ್ರಹ್ಮಣ್ಯ ಭಟ್, ವಾಸುದೇವ ಭಟ್ ಪೆರಂಪಳ್ಳಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X