Udupi | ಕೊರಗರಿಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿಗೆ ಆಗ್ರಹ: ಮುಂದುವರೆದ ಅಹೋರಾತ್ರಿ ಧರಣಿ

ಉಡುಪಿ: ಕೊರಗ ಸಮುದಾಯದ ಯುವಜನತೆಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ಕಲ್ಪಿಸುವಂತೆ ಆಗ್ರಹಿಸಿ ಕೊರಗಾಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ ಕೇರಳ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಹಮ್ಮಿಕೊಳ್ಳಲಾಗಿರುವ ಅನಿಧಿಷ್ಠಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ 13ನೇ ದಿನವಾದ ಶನಿವಾರವೂ ಮುಂದುವರೆದಿದೆ.
ಧರಣಿ ಸ್ಥಳಕ್ಕೆ ಮಾಜಿ ಶಾಸಕ ಕೆ.ರಘುಪತಿ ಭಟ್ ಭೇಟಿ ನೀಡಿ, ಧರಣಿನಿರತ ರಿಂದ ಮನವಿ ಸ್ವೀಕರಿಸಿದರು. ಈ ಕುರಿತು ಸರಕಾರದ ಜೊತೆ ಮಾತುಕತೆ ನಡೆಸುವುದಾಗಿ ಅವರು ಭರವಸೆ ನೀಡಿದರು. ಈ ಹಿಂದೆ ಕೂಡ ಕೊರಗ ಸಮುದಾಯದ ಪರವಾಗಿ ಸರಕಾರದ ಜೊತೆ ಮಾತುಕತೆ ನಡೆಸಿರುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ ಕೇರಳ ಅಧ್ಯಕ್ಷೆ ಸುಶೀಲ ನಾಡ, ಮುಖಂಡರಾದ ಶೇಖರ ಕೆಂಜೂರು, ಕುಮಾರ ಕೆಂಜೂರು, ಪುತ್ರನ್ ಹೆಬ್ರಿ ಮೊದಲಾದವರು ಉಪಸ್ಥಿತರಿದ್ದರು.
Next Story





