Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಗ್ಯಾಸ್ ಬೆಲೆ ಏರಿಕೆ ನೆಪದಲ್ಲಿ ಆನ್‌ಲೈನ್...

ಗ್ಯಾಸ್ ಬೆಲೆ ಏರಿಕೆ ನೆಪದಲ್ಲಿ ಆನ್‌ಲೈನ್ ವಂಚನೆ ಹೆಚ್ಚಳ: ಉಡುಪಿ ಎಸ್ಪಿ ಹರಿರಾಂ ಶಂಕರ್

ವಾರ್ತಾಭಾರತಿವಾರ್ತಾಭಾರತಿ18 March 2026 8:17 PM IST
share
ಗ್ಯಾಸ್ ಬೆಲೆ ಏರಿಕೆ ನೆಪದಲ್ಲಿ ಆನ್‌ಲೈನ್ ವಂಚನೆ ಹೆಚ್ಚಳ: ಉಡುಪಿ ಎಸ್ಪಿ ಹರಿರಾಂ ಶಂಕರ್

ಉಡುಪಿ, ಮಾ.18: ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಎಲ್‌ಪಿಜಿ ಗ್ಯಾಸ್ ಬೆಲೆ ಏರಿಕೆಯಾಗುತ್ತಿರುವುದನ್ನೇ ನೆಪವಾಗಿಟ್ಟುಕೊಂಡು ಸೈಬರ್ ಅಪರಾಧಿಗಳು ಆನ್‌ಲೈನ್ ವಂಚನೆ ಎಸಗುತ್ತಿರುವುದು ವರದಿಯಾಗುತ್ತಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.

ಮಾ.11ರಂದು ಸಂತೆಕಟ್ಟೆ ಮೂಲದ ಹಿರಿಯ ನಾಗರಿಕರಾದ ಲೀಲಿ ಪ್ರೋರಿನ್ ಡಿಸಿಲ್ವಾ ಎಂಬವರಿಗೆ ಮುಂಬೈ ಯಿಂದ ಮಹಾನಗರ ಗ್ಯಾಸ್ ಹೇಳಿಕೊಂಡು ಕರೆ ಮಾಡಿ, ವಾಟ್ಸಾಪ್‌ನಲ್ಲಿ ಎಪಿಕೆ ಆ್ಯಪ್ ಕಳುಹಿಸಿ 1,45,022ರೂ. ಹಣ ಆನ್‌ಲೈನ್ ವಂಚನೆ ಎಸಗಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ವಂಚಿಸಲಾದ ಹಣದಲ್ಲಿ 50ಸಾವಿರ ರೂ. ಹಣವನ್ನು ಫ್ರೀಝ್ ಮಾಡಿ ಉಳಿಸಿಕೊಳ್ಳಲಾಗಿದೆಂದು ಅವರು ಮಾಹಿತಿ ನೀಡಿದರು.

ಇಂತಹ ಮತ್ತೊಂದು ಪ್ರಕರಣ ಉಡುಪಿಯಲ್ಲಿ ದಾಖಲಾಗಿದ್ದು, ಇದರಲ್ಲಿಯೂ ಎಪಿಕೆ ಆ್ಯಪ್ ಕಳುಹಿಸಿ 6.5ಲಕ್ಷ ರೂ. ಹಣವನ್ನು ಆನ್‌ಲೈನ್ ನಲ್ಲಿ ವಂಚಿಸಲಾಗಿದೆ. ಡಾಟ್ ಎಪಿಕೆ ಫೈಲ್ ವಾಟ್ಸಾಪ್‌ನಲ್ಲಿ ಕಳುಹಿಸಿ ಡೌನ್ ಲೋಡ್ ಮಾಡಲು ಹೇಳುವುದು ಸೈಬರ್ ಅಪರಾಧಕ್ಕಾಗಿ ಮಾತ್ರ. ಬೇರೆ ಯಾರು ಕೂಡ ಇಂತಹ ಫೈಲ್ ಕಳುಹಿಸಿ ಡೌನ್‌ಲೌಡ್ ಮಾಡಲು ಹೇಳುವುದಿಲ್ಲ. ಹಾಗಾಗಿ ಈ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಅವರು ತಿಳಿಸಿದರು.

ಕೆಲವು ಆನ್‌ಲೈನ್ ವಂಚಕರು ಕರೆ ಮಾಡಿ ನಮ್ಮ ಆ್ಯಪ್‌ನಲ್ಲಿ ಗ್ಯಾಸ್ ಬುಕ್ ಮಾಡಿದರೆ ಕೂಡಲೇ ಗ್ಯಾಸ್ ಡಿಲಿವರಿಯಾಗುತ್ತದೆ, ಹಳೆಯ ಸ್ಟಾಕ್ ಗ್ಯಾಸ್ ಸಿಲಿಂಡರ್‌ನ್ನು ಹಳೆಯ ದರದಲ್ಲಿಯೇ ನೀಡುತ್ತೇವೆ, ಈಗಾಲೇ ಬುಕ್ ಮಾಡಿ ಗ್ಯಾಸ್ ಪಡೆದುಕೊಳ್ಳಿ ಎಂದು ಹೇಳಿಕೊಂಡು ಲಿಂಕ್, ವೆಬ್‌ಸೈಟ್, ಆ್ಯಪ್‌ಗಳನ್ನು ಕಳುಹಿಸಿ ವಂಚನೆ ಮಾಡುತ್ತಿದ್ದಾರೆ. ಇದನ್ನು ನಂಬಿ ಯಾರು ಕೂಡ ಮೋಸ ಹೋಗಬಾರದು. ಈ ಹಿಂದೆ ಹೇಗೆ ಗ್ಯಾಸ್ ಬುಕ್ ಮಾಡಿ ಪಡೆಯುತ್ತಿದ್ದಿರೋ ಅದೇ ರೀತಿ ಗ್ಯಾಸ್ ಪಡೆದುಕೊಳ್ಳಿ ಎಂದರು.

ಗೃಹ ಬಳಕೆ ಅನಿಲದಲ್ಲಿ ಯಾವುದೇ ಕೊರತೆ ಇಲ್ಲ ಎಂದು ಈಗಾಗಲೇ ಜಿಲ್ಲಾಡಳಿತ ಸ್ಪಷ್ಟಪಡಿಸಿದೆ. ಆದುದರಿಂದ ಫಾಸ್ಟ್ ಗ್ಯಾಸ್ ಬುಕಿಂಗ್, ಕಡಿಮೆ ದರದಲ್ಲಿ ಗ್ಯಾಸ್, ಕೆವೈಎಸಿ ಅಪ್‌ಡೇಟ್ ಮಾಡಲು ಹೇಳಿ ಯಾರಾದರೂ ಕರೆ ಮಾಡಿದರೆ ಯಾವುದೇ ಕಾರಣಕ್ಕೂ ನಂಬಬಾರದು. ಅದರಲ್ಲಿ ಯಾವುದೇ ಸಂಶಯ ಇದ್ದರೆ ತಕ್ಷಣ ಸಮೀಪದ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ. ಒಂದು ವೇಳೆ ವಂಚನೆಗೆ ಒಳಗಾದರೆ ಕೂಡಲೇ ಠಾಣೆಗೆ ಬಂದು ದೂರು ಕೊಡಿ. ಇದರಿಂದ ಕಳೆದುಕೊಂಡ ಹಣದಲ್ಲಿ ಬಹುತೇಕ ಹಣ ವಾಪಾಸ್ಸು ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.

Tags

OnlinefraudpretextgaspriceUdupiSP Hariram Shankar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X