Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಗ್ರಾ.ಪಂ. ಮೂಲಕ ಆನ್‌ಲೈನ್ ತರಬೇತಿ:...

ಗ್ರಾ.ಪಂ. ಮೂಲಕ ಆನ್‌ಲೈನ್ ತರಬೇತಿ: ಮೊಬೈಲ್ ಆ್ಯಪ್‌ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚಾಲನೆ

ವಾರ್ತಾಭಾರತಿವಾರ್ತಾಭಾರತಿ25 Sept 2023 5:08 PM IST
share
ಗ್ರಾ.ಪಂ. ಮೂಲಕ ಆನ್‌ಲೈನ್ ತರಬೇತಿ: ಮೊಬೈಲ್ ಆ್ಯಪ್‌ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚಾಲನೆ

ಉಡುಪಿ, ಸೆ.25: ಉಡುಪಿ ಜಿಲ್ಲೆಯ ಯುವಕ-ಯುವತಿಯರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಜಿಲ್ಲೆಯ ಗ್ರಾಮ ಪಂಚಾಯತಿಗಳ ಮೂಲಕ ಆನ್‌ಲೈನ್ ತರಬೇತಿ ನೀಡುವ ಮೊಬೈಲ್ ಆ್ಯಪ್‌ಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಇಂದು ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಕ್ರಿಯಾತ್ಮಕವಾದ ಈ ಕಾರ್ಯಕ್ರಮವು ಇಡೀ ರಾಜ್ಯದಲ್ಲೇ ಪ್ರಥಮ ಪ್ರಯತ್ನವಾಗಿದೆ. ಯುಪಿಎಸ್‌ಸಿ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಆಸಕ್ತಿ ಹೊಂದಿರುವ ಮಕ್ಕಳಿಗೆ ಗ್ರಾಮ ಮಟ್ಟದಲ್ಲಿಯೇ ಆನ್‌ಲೈನ್ ಮೂಲಕ ಪ್ರೊಬೆಷನರಿ ಐಎಎಸ್ ಹಾಗೂ ಐಪಿಎಸ್ ಅಧಿಕಾರಿ ಗಳು ಹಾಗೂ ತಜ್ಞರ ಮೂಲಕ ತರಬೇತಿ ನೀಡಲಾಗುತ್ತದೆ ಎಂದು ತಿಳಿಸಿದರು.

ಬುದ್ಧಿವಂತ ಜಿಲ್ಲೆ ಎನಿಸಿರುವ ಉಡುಪಿಯಲ್ಲಿ ಬಹುತೇಕ ಯುವ ಜನತೆ ವ್ಯವಹಾರದ ಕಡೆ ಗಮನ ತೋರಿಸುತ್ತಿದ್ದಾರೆ. ಮುಂದೆ ಈ ಕಾರ್ಯಕ್ರಮದ ಮೂಲಕ ಈ ಜಿಲ್ಲೆಯಿಂದ ಸಾಕಷ್ಟು ಮಂದಿ ಐಎಎಸ್, ಐಪಿಎಸ್ ಅಧಿಕಾರಿ ಗಳು ನೇಮಕ ಆಗಬೇಕು ಎಂಬುದು ನಮ್ಮ ಗುರಿಯಾಗಿದೆ ಎಂದ ಅವರು, ಜಿಲ್ಲಾ ಪಂಚಾಯತ್ ಸ್ಟುಡಿಯೋದಿಂದ ಪ್ರತಿದಿನ ಸಂಜೆ 5.30ರಿಂದ 7 ಗಂಟೆಯವರೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆನ್‌ಲೈನ್ ಮೂಲಕ ತರಬೇತಿ ನೀಡಲಾಗುತ್ತದೆ. ಜಿಲ್ಲೆಯ 155 ಗ್ರಾಮ ಪಂಚಾಯತಿಗಳಲ್ಲಿ ಏಕಕಾಲದಲ್ಲಿ ಈ ತರಬೇತಿ ನಡೆಯಲಿದೆ ಎಂದರು.

ಆಸಕ್ತ ವಿದ್ಯಾರ್ಥಿಗಳು ಮೊಬೈಲ್ ಆ್ಯಪ್ ಮೂಲಕ ನೊಂದಾವಣೆ ಮಾಡಿ ಕೊಳ್ಳಬೇಕು. ಗ್ರಾಮೀಣ ಪ್ರದೇಶದ ಬಡವರ ಮಕ್ಕಳಿಗೆ ದೂರದ ದೆಹಲಿ, ಹೈದರಾಬಾದ್‌ಗೆ ತೆರಳಿ ಇಂತಹ ತರಬೇತಿ ಪಡೆಯಲು ಸಾಧ್ಯವಾಗುವುದಿಲ್ಲ. ಅವರಿಗೆ ಅನುಕೂಲ ಆಗಬೇಕೆಂಬ ಉದ್ದೇಶದಿಂದ ಸರಕಾರ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇದಕ್ಕೆ ಪ್ರತಿ ಗ್ರಾಪಂ ಅಧಿಕಾರಿಗಳು, ಸಿಬ್ಬಂದಿ ಸಹಕಾರ ನೀಡಬೇಕು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ, ಯೋಜನಾಧಿಕಾರಿ ಶ್ರೀನಿವಾಸ ರಾವ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X