Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬೀಡಿ ಕಾರ್ಮಿಕರ ಆರನೇ ಜಿಲ್ಲಾ ಸಮ್ಮೇಳನ...

ಬೀಡಿ ಕಾರ್ಮಿಕರ ಆರನೇ ಜಿಲ್ಲಾ ಸಮ್ಮೇಳನ ಪ್ರಯುಕ್ತ ಬಹಿರಂಗ ಸಭೆ

ವಾರ್ತಾಭಾರತಿವಾರ್ತಾಭಾರತಿ4 Nov 2025 2:32 PM IST
share
ಬೀಡಿ ಕಾರ್ಮಿಕರ ಆರನೇ ಜಿಲ್ಲಾ ಸಮ್ಮೇಳನ ಪ್ರಯುಕ್ತ ಬಹಿರಂಗ ಸಭೆ
►ಶಾಸಕರ ,ಸಂಸದರ ವೇತನ ಏರಿಕೆ ಮಾಡುವವರು ಕಾರ್ಮಿಕರ ವೇತನ ಯಾಕೆ ಏರಿಸಿಲ್ಲ ? ►1000 ಬೀಡಿಗೆ 370 ರೂ. ನೀಡಿ ಕಾರ್ಮಿಕರಿಗೆ ನ್ಯಾಯ ಕೊಡಿ :ಮೀನಾಕ್ಷಿ ಸುಂದರಂ ಆಗ್ರಹ

ಉಳ್ಳಾಲ : ಬೀಡಿ ಕಾರ್ಮಿಕರ ಹಕ್ಕುಗಳ ರಕ್ಷಣೆಗಾಗಿ, 2018 ರಿಂದ ಬಾಕಿ ಇರಿಸಿದ ತುಟ್ಟಿಭತ್ಯೆ ಪಾವತಿ ಹಾಗೂ 2024ರ ಕನಿಷ್ಠ ಕೂಲಿ ಜಾರಿಗೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ನಡೆದ ಬೀಡಿ ಕಾರ್ಮಿಕರ ಆರನೇ ದ.ಕ. ಜಿಲ್ಲಾ ಸಮ್ಮೇಳನ ಪ್ರಯುಕ್ತ ಆಕರ್ಷಕ ರ್ಯಾಲಿ ಹಾಗೂ ಬಹಿರಂಗ ಸಭೆ ಮಂಗಳವಾರ ತೊಕ್ಕೊಟ್ಟು ಒಳಪೇಟೆ ಅಂಬೇಡ್ಕರ್ ಮೈದಾನದಲ್ಲಿ ನಡೆಯಿತು.

ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ಕಾರ್ಮಿಕರ ನೋವುಗಳಿಗೆ ಪರಿಹಾರ ಹುಡುಕಬೇಕು,ದೇಶ ಅಭಿವೃದ್ಧಿ ಆಗಬೇಕು ಎಂಬುದು ನಮ್ಮ ಗುರಿ. ಜಿಎಸ್ ಟಿ ಕಡಿಮೆ ಮಾಡಲಾಗಿದೆ. ಎಲ್ಲರೂ ಹಣ ಉಳಿಸಬಹುದು ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಜಿಎಸ್ ಟಿ ಏರಿಸುವುದು , ಇಳಿಸುವುದು ಇವರೇ. ಇದಕ್ಕೇನರ್ಥ ಎಂದು ಪ್ರಶ್ನಿಸಿದರು.

ನಿರ್ಮಲ ಸೀತಾರಾಮರಿಗೆ ತೆರಿಗೆ, ಜಿಎಸ್ ಟಿ ಏರಿಸುವಾಗ ಬಡವರ ನೆನಪಾಗಲಿಲ್ಲ. ಪ್ರಧಾನಿ ಮೋದಿ ಹಾಗೂ ನಿರ್ಮಲ ಸೀತಾರಾಮ ಅವರು ಪಾರ್ಲಿಮೆಂಟ್ ನಲ್ಲಿ ಪ್ರೊಡಕ್ಟ್ ಯೋಜನೆ ಮಾಡಿದ್ದಾರೆ. ಬಂಡವಾಳ ಶಾಹಿ ಗಳಿಗೆ ಎರಡು ಲಕ್ಷ ಕೋಟಿ ನೀಡಲು ಕೇಂದ್ರ ದಲ್ಲಿ ಹಣ ಇದೆ.ಬಡವರಿಗೆ ನೀಡಲು ಕೇಂದ್ರ ದಲ್ಲಿ ಹಣ ಇಲ್ಲ ಎಂದು ಆರೋಪಿಸಿದರು.

ಪಂಚ ಗ್ಯಾರಂಟಿ ಜಾರಿ ಮಾಡಿದ ರಾಜ್ಯ ಸರ್ಕಾರ ಬಿಕ್ಕಟ್ಟಿನಲ್ಲಿ ಇದೆ ಎಂದು ಬಿಜೆಪಿ ಆರೋಪ ಮಾಡುತ್ತಿದೆ. ಪಾರ್ಲಿಮೆಂಟ್ ಸಂಸದರ, ಶಾಸಕರ ವೇತನ ಈಗಾಗಲೇ ಏರಿಕೆ ಮಾಡಿದೆ. ಆದರೆ ಬೀಡಿ ಕಾರ್ಮಿಕರ ವೇತನ ಯಾಕೆ ಏರಿಕೆ ಮಾಡುವುದಿಲ್ಲ ಎಂದು ಪ್ರಶ್ನಿಸಿದ ಅವರು ಸ್ಪೀಕರ್ ಯುಟಿ ಖಾದರ್ ಸಾಕಷ್ಟು ದುಡ್ಡು ಮಾಡಿದ್ದಾರೆ. ಆದರೆ ಇವರೆಲ್ಲ ಬೀಡಿ ಕಾರ್ಮಿಕರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. 1000 ಬೀಡಿಗೆ 370 ಆಗಬೇಕು ಎಂಬುದು ನಮ್ಮ ಬೇಡಿಕೆ. ಇದನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.

ಒಂದು ಕುಟುಂಬದ ಖರ್ಚಿಗೆ ತಿಂಗಳಿಗೆ 30 ಸಾವಿರ ಬೇಕು. ಈ ಲೆಕ್ಕಾಚಾರ ಹಾಕಿದರೆ ಒಂದು ಸಾವಿರ ಬೀಡಿಗೆ ಒಂದು ಸಾವಿರ ಸಿಗಬೇಕು. ಆದರೆ ನಾವು ಕೇವಲ 1000 ಬೀಡಿಗೆ 370 ರೂ.ಕೊಡಿ ಎಂದಷ್ಟೇ ಕೇಳುತ್ತಿದ್ದೇವೆ ಎಂದರು.

ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಮಾತನಾಡಿ, ಬೀಡಿ ಕಾರ್ಮಿಕರ ಚಳವಳಿ ಯನ್ನು ಉತ್ತುಂಗಕ್ಕೆ ಏರಿಸಬೇಕು.ಬೀಡಿ ಕಾರ್ಮಿಕರಿಗೆ ನ್ಯಾಯ ಸಿಗಬೇಕು. ದುಡಿಯುವ ವರ್ಗದ ಜನರ ಕಷ್ಟವನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು. ಆದರೆ ಇವರನ್ನು ಸರ್ಕಾರ ಕಡೆಗಣಿಸುತ್ತಿದೆ ಎಂದು ಆರೋಪಿಸಿದರು.

ನಾಲ್ಕು ಗೋಡೆಗಳ ಮಧ್ಯೆ ಕುಳಿತು ಬೀಡಿ ಕಟ್ಟುವ ಕಾರ್ಮಿಕರ ಹಕ್ಕುಗಳನ್ನು ಸರ್ಕಾರ ಕಸಿದು ಕೊಳ್ಳುತ್ತಿದೆ. ಯಾವುದೇ ಸವಲತ್ತು ನೀಡುವಲ್ಲಿ ಸರ್ಕಾರ ವಿಫಲವಾಗಿದ್ದು, ಈ ಬಗ್ಗೆ ಸಿದ್ದರಾಮಯ್ಯ ಸರ್ಕಾರ ಗಂಭೀರವಾಗಿ ಅರ್ಥ ಮಾಡಿಕೊಂಡು ನ್ಯಾಯ ಒದಗಿಸಲು ಯಾಕಾಗುವುದಿಲ್ಲ ಎಂದು ಪ್ರಶ್ನಿಸಿದ ಅವರು, ಸ್ಪೀಕರ್ ಯುಟಿ ಖಾದರ್ ಬೀಡಿ ಕಾರ್ಮಿಕರ ವಿಚಾರದಲ್ಲಿ ಮಾತನಾಡುವುದಿಲ್ಲ. ನ್ಯಾಯ ಒದಗಿಸಿ ಕೊಡುವುದಿಲ್ಲ. ಇವರ ಸ್ಪೀಕರ್ ಕಚೇರಿ ಒಳಗಡೆ ಭ್ರಷ್ಟಾಚಾರ ನಡೆಯುತ್ತಿದೆ. ಅವರು ಹಣ ಮಾಡುವ ಕಾಯಕದಲ್ಲಿ ನಿರತರಾಗಿದ್ದಾರೆ ಎಂದು ಆರೋಪಿಸಿದರು.

ಬೀಡಿ ಕಾರ್ಮಿಕರಿಗೆ ಆಗಿರುವ ಅನ್ಯಾಯಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್ ನೇರ ಕಾರಣ. ಈ ಬಗ್ಗೆ ಪಾರ್ಲಿಮೆಂಟ್ ನಲ್ಲಿ ಚರ್ಚೆ ಆಗಬೇಕು ಎಂದು ಆಗ್ರಹಿಸಿದರು.

ಸೌತ್ ಕೆನರಾ ಬೀಡಿ ವರ್ಕರ್ಸ್ ಫೆಡರೇಶನ್ ಅಧ್ಯಕ್ಷ ವಸಂತ ಆಚಾರಿ, ಉಪಾಧ್ಯಕ್ಷ ಪದ್ಮಾವತಿ ಮಾತನಾಡಿದರು.

ಸೌತ್ ಕೆನರಾ ಬೀಡಿ ವರ್ಕರ್ಸ್ ಫೆಡರೇಶನ್ ಪ್ರಧಾನ ಕಾರ್ಯದರ್ಶಿ ಜೆ.ಬಾಲಕೃಷ್ಣ ಶೆಟ್ಟಿ ಸಮ್ಮೇಳನ ದಲ್ಲಿ ಕೈಗೊಂಡ ನಿರ್ಣಯಗಳನ್ನು ಮಂಡಿಸಿದರು. ಸ್ವಾಗತ ಸಮಿತಿ ಅಧ್ಯಕ್ಷ ಸುಕುಮಾರ್ ತೊಕ್ಕೊಟ್ಟು ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಬೀಡಿ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತೊಕ್ಕೊಟ್ಟುವಿನಿಂದ ಅಂಬೇಡ್ಕರ್ ಮೈದಾನ ವರೆಗೆ ಆಕರ್ಷಕ ರ್ಯಾಲಿ ನಡೆಯಿತು.

ಈ ಕಾರ್ಯಕ್ರಮ ದಲ್ಲಿ ಸೌತ್ ಕೆನರಾ ಬೀಡಿ ವರ್ಕರ್ಸ್ ಫೆಡರೇಶನ್ ಉಪಾಧ್ಯಕ್ಷ ಪದ್ಮಾವತಿ ಎಸ್ ಶೆಟ್ಟಿ, ಜಯಂತಿ ಶೆಟ್ಟಿ ,ರಮಣಿ ಮೂಡುಬಿದಿರೆ ,ಸಿಐಟಿಯು ಗೌರವ ಅಧ್ಯಕ್ಷ ಬಿ.ಲೋಕಯ್ಯ , ಕಾರ್ಯಾಧ್ಯಕ್ಷ ಕೃಷ್ಣಪ್ಪ ಸಾಲ್ಯಾನ್, ಪ್ರಧಾನ ಕಾರ್ಯದರ್ಶಿ ಜಯಂತ್ ನಾಯಕ್, ಕೋಶಾಧಿಕಾರಿ ಪದ್ಮಾವತಿ ಶೆಟ್ಟಿ, ಪ್ರೇಮ ಶೆಟ್ಟಿ ಮಂಜೇಶ್ವರ, ಬಿ.ಎಮ್ ಭಟ್ ಬೆಳ್ತಂಗಡಿ, ಬೇಬಿ ಶೆಟ್ಟಿ ಮಂಜೇಶ್ವರ ಮತ್ತಿತರರು ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ಜಯಂತ್ ನಾಯಕ್ ಸ್ವಾಗತಿಸಿ ,ಕಾರ್ಯಕ್ರಮ ನಿರೂಪಿಸಿದರು. ವಸಂತಿ ಕುಪ್ಪೆಪದವು ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X