Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಪ್ಪೂರು ಬೀದಿನಾಯಿ ಶೆಲ್ಟರ್...

ಉಪ್ಪೂರು ಬೀದಿನಾಯಿ ಶೆಲ್ಟರ್ ನಿರ್ಮಾಣಕ್ಕೆ ವಿರೋಧ: ಗ್ರಾಮಸ್ಥರಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ6 Feb 2026 8:14 PM IST
share
ಉಪ್ಪೂರು ಬೀದಿನಾಯಿ ಶೆಲ್ಟರ್ ನಿರ್ಮಾಣಕ್ಕೆ ವಿರೋಧ: ಗ್ರಾಮಸ್ಥರಿಂದ ಪ್ರತಿಭಟನೆ

ಉಡುಪಿ, ಫೆ.6: ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ಬೀದಿ ನಾಯಿ ಶೆಲ್ಟರ್‌ಗೆ ವಿರೋಧ ವ್ಯಕ್ತಪಡಿಸಿ ಉಪ್ಪೂರು, ಹಾವಂಜೆ ಹಾಗೂ ಆರೂರು ಗ್ರಾಪಂ ವ್ಯಾಪ್ತಿಯ ಗ್ರಾಮಸ್ಥರು ಶುಕ್ರವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಗರಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇದಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾಡಳಿತವು ಉಪ್ಪೂರು ಗ್ರಾಮದ 9.9 ಎಕರೆ ಪ್ರದೇಶದಲ್ಲಿ ಬೀದಿನಾಯಿಗಳ ಶೆಲ್ಟರ್ ನಿರ್ಮಾಣ ಮಾಡಲು ಮುಂದಾಗಿದ್ದು, ಇದಕ್ಕೆ ಮೂರು ಗ್ರಾಮಗಳ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿ, ಕೂಡಲೇ ಈ ಶೆಲ್ಟರ್‌ನ್ನು ಕೈಬಿಟ್ಟು ಬೇರೆ ನಿರ್ಜನ ಪ್ರದೇಶಕ್ಕೆ ವರ್ಗಾಯಿಸಬೇಕೆಂದು ಆಗ್ರಹಿಸಿದರು.

‘ಉಡುಪಿ ಜಿಲ್ಲೆಯ ಸುಮಾರು 18ಸಾವಿರ ಬೀದಿ ನಾಯಿಗಳನ್ನು ಉಪ್ಪೂರಿನ ಚುಕ್ಕುಲಿಕಟ್ಟೆ ಹತ್ತಿರ 9.9 ಎಕರೆ ಜಾಗದಲ್ಲಿ ಆಶ್ರಯ ತಾಣ ನಿರ್ಮಿಸಲು ಸರ್ವೆ ಕಾರ್ಯ ನಡೆದಿದ್ದು, ಮುಂದಿನ ದಿನಗಳಲ್ಲಿ ಈ ಬೀದಿ ನಾಯಿಗಳ ಶೆಲ್ಟರ್ ನಿರ್ಮಾಣವಾದರೆ ಸುತ್ತಮುತ್ತಲಿನ ಗ್ರಾಮದ ಜನರಿಗೆ ಸಾಕಷ್ಟು ಸಮಸ್ಯೆ ತಲೆದೋರಲಿದೆ ಎಂದು ಸ್ಥಳೀಯರಾದ ಅಜಿತ್ ಶೆಟ್ಟಿ ಆರೋಪಿಸಿದರು.

‘ಬೀದಿ ನಾಯಿ ಶೆಲ್ಟರ್ ನಿರ್ಮಿಸಲು ಗುರುತಿಸಿರುವ ಜಾಗದಲ್ಲಿ ಸಾಕಷ್ಟು ಅಭಿವೃದ್ಧಿ ಯೋಜನೆಯನ್ನು ತರಬಹು ದಾಗಿದೆ. ಈ ಜಾಗದ ಸುತ್ತಮುತ್ತ ಸುಮಾರು 200 ಮನೆಗಳಿವೆ. ನಾಯಿಗಳ ಮಲಮೂತ್ರ ವಿಸರ್ಜನೆಯ ನೀರು ಸಮೀಪದ ಬೆಳ್ಮಾರಿನ ತೋಡಿನಲ್ಲಿ ಹರಿದು ಹೊಳೆಗೆ ಸೇರುತ್ತದೆ. ಇದರಿಂದ ಬೆಳ್ಮಾರಿನ ಜನರಿಗೆ ಅನಾರೋಗ್ಯ ಕಾಡಲಿದೆ. ಅಲ್ಲದೆ ಬಾವಿಯ ನೀರು ಕೂಡ ಕಲುಷಿತವಾಗಲಿದೆ. ಚರ್ಮರೋಗದ ಭೀತಿ ಕೂಡ ಇಲ್ಲಿನ ಜನರಿಗೆ ಎದುರಾಗಲಿದೆ. ಅದೇ ರೀತಿ ಕಾಡು ಪ್ರಾಣಿಗಳ ಹಾವಳಿ ಕೂಡ ಹೆಚ್ಚಾಗಲಿದೆ’ ಎಂದು ಪ್ರತಿಭಟನಕಾರರು ದೂರಿದರು.

‘9.9. ಎಕರೆ ಜಾಗದಲ್ಲಿ ಬೀದಿ ನಾಯಿ ಶೆಲ್ಟರ್ ನಿರ್ಮಿಸಿದರೆ ಸುತ್ತಮುತ್ತಲಿನ ಉಳಿದ 90 ಎಕರೆ ಜಾಗದಲ್ಲಿ ಯಾವುದೇ ಉತ್ತಮ ಯೋಜನೆಗಳನ್ನು ಜಾರಿಗೆ ತರಲು ಸಾಧ್ಯವಿಲ್ಲ. ಈ ಜಾಗವು 2016ನೇ ಇಸವಿಯಿಂದ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧಿಸೂಚನೆಯಂತೆ ಪ್ರಾಧಿಕಾರದ ವ್ಯಾಪ್ತಿಗೆ ಬರುತ್ತದೆ. ಮುಂದಿನ ದಿನಗಳಲ್ಲಿ ನಗರಸಭೆ ವ್ಯಾಪ್ತಿಗೂ ಈ ಜಾಗ ಬರಲಿದೆ. ಆದುದರಿಂದ ಇಲ್ಲಿ ಬೀದಿನಾಯಿ ಶೆಲ್ಟರ್ ನಿರ್ಮಿಸುವುದು ಸಮಂಜಸವಲ್ಲ’ ಎಂದು ಹೋರಾಟಗಾರ ಅಶ್ವಿನ್‌ರೋಚ್ ತಿಳಿಸಿದರು.

ಬಳಿಕ ಸ್ಥಳಕ್ಕೆ ಆಗಮಿಸಿದ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಅವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಕಾಂಗ್ರೆಸ್ ಮುಖಂಡ ಪ್ರಸಾದ್‌ರಾಜ್ ಕಾಂಚನ್, ಉಪ್ಪೂರು ಗ್ರಾಪಂ ಅಧ್ಯಕ್ಷೆ ಗಾಯತ್ರಿ, ಆರೂರು ಗ್ರಾಪಂ ಅಧ್ಯಕ್ಷ ಗುರುರಾಜ್ ಭಟ್, ಹಾವಂಜೆ ಗ್ರಾಪಂ ಅಧ್ಯಕ್ಷೆ ಆಶಾ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ತಾಪಂ ಮಾಜಿ ಅಧ್ಯಕ್ಷರಾದ ನಳಿನಿ ಪ್ರದೀಪ್, ವರೋನಿಕಾ ಕರ್ನೆಲಿಯೋ, ಧರ್ಮಗುರು ಫಾ.ಲಾರೆನ್ಸ್ ಡಿಸೋಜ, ಪ್ರಮುಖರಾದ ಅಶ್ವಿನ್‌ರಾಜ್, ಭಾಸ್ಕರ ಶೆಟ್ಟಿ ಅಮ್ಮುಂಜೆ, ಸತೀಶ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

‘ಜಿಲ್ಲಾಡಳಿತ ಗ್ರಾಮಸ್ಥರಿಗೆ ಯಾವುದೇ ಮಾಹಿತಿ ನೀಡದೆ ಏಕಾಏಕಿಯಾಗಿ ಈ ಶೆಲ್ಟರ್ ನಿರ್ಮಿಸಲು ಮುಂದಾಗಿದೆ. ಈ ಜಾಗದಲ್ಲಿ ವಿಶ್ವವಿದ್ಯಾನಿಲಯ, ವಿಮಾನ ನಿಲ್ದಾಣದಂತಹ ಬೃಹತ್ ಯೋಜನೆಗಳನ್ನು ಅನುಷ್ಠಾನಗೊಳಿಸಲು ಈ ಹಿಂದೆ ಚರ್ಚೆಗಳು ನಡೆದಿತ್ತು. ಮುಂದೆ ಈ ಶೆಲ್ಟರ್ ನಿರ್ಮಾಣವಾಗು ವುದರಿಂದ ಈ ಎಲ್ಲ ಅಭಿವೃದ್ಧಿ ಯೋಜನೆಗಳು ಕೈತಪ್ಪಿ ಹೋಗುವ ಸಾಧ್ಯತೆ ಇದೆ. ಆದುದರಿಂದ ಇಲ್ಲಿಂದ ಈ ಯೋಜನೆಯನ್ನು ಬೇರೆ ಕಡೆ ವರ್ಗಾಯಿಸ ಬೇಕು’

-ಸತೀಶ್ ಪೂಜಾರಿ, ಸಾಮಾಜಿಕ ಕಾರ್ಯಕರ್ತರು

‘ಜನವಸತಿ ಪ್ರದೇಶದಲ್ಲಿ ಬೀದಿನಾಯಿಗಳ ಶೆಲ್ಟರ್ ನಿರ್ಮಿಸುವುದು ಸರಿಯಲ್ಲ. ನೀರು ಇಂಗುವ ಈ ಜಾಗದಲ್ಲಿ ನಾಯಿಗಳನ್ನು ಸಾಕಿದರೆ ಮುಂದೆ ಸುತ್ತಮುತ್ತಲಿನ ಬಾವಿ ನೀರು ಕೂಡ ಮಲೀನವಾಗಬಹುದು. ಜಿಲ್ಲಾಡಳಿತ ಈ ವಿಚಾರದಲ್ಲಿ ದೊಡ್ಡ ತಪ್ಪು ಮಾಡಿದೆ. ಜನರಿಗೆ ಸಮಸ್ಯೆಯಾಗುವ ಯೋಜನೆಗಳ ವಿರುದ್ಧ ಜನಪ್ರತಿನಿಧಿಗಳು ಧೈರ್ಯ ಹಾಗೂ ಗಟ್ಟಿ ಧ್ವನಿಯಲ್ಲಿ ಮಾತನಾಡಬೇಕು. ಆಗ ಮಾತ್ರ ಇದಕ್ಕೆ ನ್ಯಾಯ ಸಿಗಲು ಸಾಧ್ಯ’

-ವರೋನಿಕಾ ಕರ್ನೆಲಿಯೋ, ಮಾಜಿ ತಾಪಂ ಅಧ್ಯಕ್ಷರು

Tags

OppositionconstructionUppurstraydog​​shelter
share
ವಾರ್ತಾಭಾರತಿ
ವಾರ್ತಾಭಾರತಿ
Next Story
X