Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಸತ್ಯಾಜ್ಯ ಮರುಪೂರಣಗೊಳಿಸುವ ಕಾರ್ಖಾನೆ...

ಕಸತ್ಯಾಜ್ಯ ಮರುಪೂರಣಗೊಳಿಸುವ ಕಾರ್ಖಾನೆ ನಿರ್ಮಾಣಕ್ಕೆ ವಿರೋಧ

ವಾರ್ತಾಭಾರತಿವಾರ್ತಾಭಾರತಿ7 Feb 2026 7:01 PM IST
share
ಕಸತ್ಯಾಜ್ಯ ಮರುಪೂರಣಗೊಳಿಸುವ ಕಾರ್ಖಾನೆ ನಿರ್ಮಾಣಕ್ಕೆ ವಿರೋಧ

ಉಡುಪಿ: ನಗರದ ಬೀಡಿನಗುಡ್ಡೆ ವೃತ್ತದಿಂದ ಅಲೆವೂರು ಸಂಪರ್ಕಿಸುವ ಮುಖ್ಯ ರಸ್ತೆ ಸಮೀಪ ಕಸ ತ್ಯಾಜ್ಯಗಳನ್ನು ಮರುಪೂರಣ ಗೊಳಿಸುವ ಕಾರ್ಖಾನೆ ನಿರ್ಮಾಣದ ಹಂತದಲ್ಲಿದ್ದು, ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.

ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಬರುವ 35 ವಾರ್ಡುಗಳಲ್ಲಿ ಸಂಗ್ರಹಗೊಂಡ ಕಸಗಳನ್ನು ಇಲ್ಲಿ ದಾಸ್ತಾನು ಇಟ್ಟು, ಹಂತ ಹಂತವಾಗಿ ನಿರ್ಮಾಣವಾಗುವ ಕಾರ್ಖಾನೆಯಲ್ಲಿ ಮರುಬಳಕೆಗೆ ಯೋಗ್ಯವಾದ ಕಚ್ಚಾವಸ್ತು, ಗೊಬ್ಬರ ಸಿದ್ಧಗೊಳಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ. ಯೋಜನೆ ಸಮಾಜಕ್ಕೆ ಪೂರಕವಾಗಿದ್ದರೂ, ನಗರ ಭಾಗದಲ್ಲಿ ಕಾರ್ಖಾನೆ ರೂಪಿಸುತ್ತಿರುವ ಅವೈಜ್ಞಾನಿಕವಾಗಿದೆ. ನಗರದಿಂದ ಹೊರ ವಲಯದಲ್ಲಿರುವ ಜನವಸತಿ ರಹಿತ ಪ್ರದೇಶದಲ್ಲಿ ಈ ಕಾರ್ಖಾನೆ ಸ್ಥಾಪಿಸುವುದು ವೈಜ್ಞಾನಿಕ ಕ್ರಮವಾಗಿದೆ. ಈ ಕಾರ್ಖಾನೆಯಿಂದ ಪರಿಸರ ಮಾಲಿನ್ಯ ಉಂಟಾಗುವುದು ಖಂಡಿತ ಎಂದು ಸಮಾಜ ಸೇವಕ, ನಗರಸಭೆಯ ಮಾಜಿ ಸದಸ್ಯ ನಿತ್ಯಾನಂದ ಒಳಕಾಡು ತಿಳಿಸಿದ್ದಾರೆ.

ಯಂತ್ರೋಪಕರಣಗಳ ಕರ್ಕಶ ಸದ್ದಿನಿಂದ ಶಬ್ಧ ಮಾಲಿನ್ಯವಾಗುದಲ್ಲದೆ, ಸಂಗ್ರಹಿಸಿಡುವ ಕಸ ತಾಜ್ಯಗಳಿಂದ ಗಬ್ಬು ವಾಸನೆ ಪರಿಸರದಲ್ಲಿ ಪಸರಿಸಿ ವ್ಯಾಧಿಗಳ ಹುಟ್ಟಿಗೆ ಕಾರಣವಾಗಬಹುದು. ಇಂಧನದಿಂದ ಕರ್ತವ್ಯ ನಿರ್ವಹಿಸುವ ಘನ ಯಂತ್ರಗಳು, ಹೊರಸೂಸುವ ಧೂಮದಿಂದ ವಾಯು ಮಾಲಿನ್ಯ ಉಂಟಾಗಿ ನಗರದ ಜನತೆಯು ಉಸಿರಾಡಲು ವಿಷಗಾಳಿಯನ್ನು ಸೇವಿಸಬೇಕಾದ ಎದುರಾಗುತ್ತದೆ.

ಈ ಪ್ರದೇಶದಲ್ಲಿ ವಸತಿ ಸಮುಚ್ಚಯಗಳು, ವಸತಿಗಳು, ವಾಣಿಜ್ಯ ಕಟ್ಟಡಗಳು, ಶಿಕ್ಷಣ ಸಂಸ್ಥೆಗಳು, ಧಾರ್ಮಿಕ ಶೃದ್ಧಾ ಕೇಂದ್ರಗಳು, ವಲಸೆ ಕಾರ್ಮಿಕರ ಸಾವಿರಾರು ಜೋಪಡಿಗಳು ಇಲ್ಲಿವೆ. ನಗರ ಪ್ರದೇಶದಲ್ಲಿ ಮಾರಕ ಎನಿಸಿರುವ ಈ ಯೋಜನೆ ರದ್ದುಗೊಳಿಸಬೇಕು. ಆಯಾಕಟ್ಟಿನ ಸೂಕ್ತ ಸ್ಥಳಕ್ಕೆ ಸ್ಥಳಾಂತರಿಸಬೇಕು. ಇಲ್ಲದಿದ್ದರೆ ಪರಿಸರವಾಗಳು, ಸಂಘ ಸಂಸ್ಥೆಗಳ, ಹಾಗೂ ನಾಗರಿಕ ಸಮಾಜದ ಬೆಂಬಲ ಪಡೆದು ಪ್ರತಿಭಟಿನೆ ನಡೆಸಲಾಗು ವುದು ಎಂದು ನಿತ್ಯಾನಂದ ಒಳಕಾಡು ಎಚ್ಚರಿಕೆ ನೀಡಿದ್ದಾರೆ.

Tags

Oppositionconstructionwasterecyclingfactory
share
ವಾರ್ತಾಭಾರತಿ
ವಾರ್ತಾಭಾರತಿ
Next Story
X