Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪಡುಬಿದ್ರೆ| ನಕಲಿ ಚಿನ್ನ ನೀಡಿ ವಂಚನೆ...

ಪಡುಬಿದ್ರೆ| ನಕಲಿ ಚಿನ್ನ ನೀಡಿ ವಂಚನೆ ಪ್ರಕರಣ: ಸೊತ್ತು ಸಹಿತ ಇಬ್ಬರ ಬಂಧನ

ವಾರ್ತಾಭಾರತಿವಾರ್ತಾಭಾರತಿ23 March 2026 8:56 PM IST
share
ಪಡುಬಿದ್ರೆ| ನಕಲಿ ಚಿನ್ನ ನೀಡಿ ವಂಚನೆ ಪ್ರಕರಣ: ಸೊತ್ತು ಸಹಿತ ಇಬ್ಬರ ಬಂಧನ

ಉಡುಪಿ, ಮಾ.23: ಪಡುಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಕಲಿ ಚಿನ್ನ ನೀಡಿ ಮಹಿಳೆಯನ್ನು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಮಾ.23ರಂದು ವಶಕ್ಕೆ ಪಡೆದುಕೊಂಡಿದ್ದಾರೆ.

ತುಮಕೂರು ಜಿಲ್ಲೆಯ ಬೆಳ್ಳಾವಿ ಹೋಬಳಿ ಬಲ್ಲಾಪುರ ಬುಡುಗನಹಳ್ಳಿ ನಿವಾಸಿ ಕಾವ್ಯ(32) ಹಾಗೂ ದಾವಣಗೆರೆ ಜಿಲ್ಲೆಯ ಸಂತೆಬೆನ್ನೂರು ತಾಲೂಕಿನ ವೆಂಕಟೇಶ್(42) ಎಂಬವರನ್ನು ವಶಕ್ಕೆ ಪಡೆದ ಆರೋಪಿಗಳು. ಇವರಿಂದ 7.610 ಗ್ರಾಂ ಚಿನ್ನಾಭರಣ ಮತ್ತು 6000ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ.

ಜ.13ರಂದು ಪಡುಬಿದ್ರಿ ಹಳೆ ಅಂಚೆ ಕಚೇರಿ ಬಳಿ ಬಸ್ಸಮ್ಮ ಎಂಬವರು ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ವ್ಯಕ್ತಿ ಮತ್ತು ಮಹಿಳೆ ಲಕ್ಷ್ಮೀ ಪೆಂಡೆಂಟ್ ಇರುವ ಚಿನ್ನದಂತೆ ತೋರುವ ನಕಲಿ ಸರವನ್ನು ತೋರಿಸಿದರು. ಈ ಚಿನ್ನದ ಸರದಲ್ಲಿ 6 ಪವನ್ ಇದ್ದು, ಹಣದ ತುರ್ತು ಅವಶ್ಯಕತೆ ಇದೆ ಎಂದು ನಂಬಿಸಿ ಬಸ್ಸಮ್ಮ ಅವರಿಗೆ ನೀಡಿದರು.

ಬಸ್ಸಮ್ಮ ಅವರಲ್ಲಿದ್ದ ಸುಮಾರು 2 ಪವನು ತೂಕದ 1.50ಲಕ್ಷ ರೂ. ಮೌಲ್ಯದ ಚಿನ್ನದ ಒಡವೆಗಳನ್ನು ಹಾಗೂ ನಗದು 6000ರೂ.ವನ್ನು ನೀಡಿದರು. ಬಳಿಕ ಬಸ್ಸಮ್ಮ ಆರೋಪಿಗಳಿಂದ ಪಡೆದ ಸರವನ್ನು ಪರಿಶೀಲಿಸಲು ಹತ್ತಿರದ ಚಿನ್ನದ ಅಂಗಡಿಗೆ ಹೋದಾಗ ಅದು ನಕಲಿ ಎಂದು ತಿಳಿಯಿತು. ನಂತರ ವಾಪಾಸ್ಸು ಬಂದು ನೋಡಿದಾಗ ಅವರಿಬ್ಬರು ಅಲ್ಲಿಂದ ಪರಾರಿಯಾಗಿದ್ದರು. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಉಡುಪಿ ಎಸ್ಪಿ ಹರಿರಾಮ್ ಶಂಕರ್ ಆದೇಶದಂತೆ ಹೆಚ್ಚುವರಿ ಎಸ್ಪಿ ಸುಧಾಕರ ಎಸ್.ನಾಯ್ಕ್, ಕಾರ್ಕಳ ಡಿವೈಎಸ್ಪಿ ವಿಜಯಪ್ರಸಾದ್, ಕಾಪು ವೃತ್ತ ನಿರೀಕ್ಷಕ ಅಜ್ಮತ್ ಆಲಿ ಮಾರ್ಗದರ್ಶನದಂತೆ ಪಡುಬಿದ್ರಿ ಪೊಲೀಸ್ ಠಾಣಾ ಎಸ್ಸೈಗಳಾದ ಸಕ್ತಿವೇಲು ಮತ್ತು ಅನಿಲ್ ಕುಮಾರ್ ನಾಯಕ್, ಎಎಸ್ಸೈಗಳಾದ ರಾಜೇಶ್ ಪಿ., ಗಿರೀಶ್ ಯು.ಆರ್. ಸಿಬಂದಿ ಕೃಷ್ಣಪ್ರಸಾದ್, ಸಂದೇಶ್ ಭಂಡಾರಿ, ರುಕ್ಮಿಣಿ ಮತ್ತು ಶಿರ್ವ ಮಹಿಳಾ ಸಿಬ್ಬಂದಿ ಜ್ಯೋತಿ ಕಾರ್ಯಾಚರಣೆ ನಡೆಸಿದ್ದಾರೆ.

Tags

PadubidriFakegoldfraudcasearrest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X