ಪಡುಬಿದ್ರೆ: ಮುದರಂಗಡಿ ಶೂಟೌಟ್ ಪ್ರಕರಣ; ಪರಾರಿಯಾಗಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡೇಟು

ಆರೋಪಿ ರಾಜು
ಪಡುಬಿದ್ರೆ: ಮುದರಂಗಡಿ ಪೇಟೆಯಲ್ಲಿ ಹಾಡಹಗಲೇ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಡೇವಿಡ್ ಡಿಸೋಜ ರನ್ನು ಗುಂಡಿಕ್ಕಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಆರೋಪಿಯನ್ನು ಕಾಪು ಎಸ್ಸೈ ತೇಜಸ್ವಿ, ಕಾರ್ಕಳ ಗ್ರಾಮಾಂತರ ಎಸ್ಐ ಪ್ರಸನ್ನ ತಂಡವು ಬಂಧಿಸಿ ಕರೆತರುತ್ತಿರುವಾಗ ಬೈಂದೂರು ಸಮೀಪ ಒತ್ತಿನೆಣೆ ಎಂಬಲ್ಲಿ ಪೋಲಿಸರಿಗೆ ಹಲ್ಲೆ ನಡೆಸಿ ಆರೋಪಿ ರಾಜು ಪರಾರಿಯಾಗಲು ಯತ್ನಿಸಿದ್ದ ಎನ್ನಲಾಗಿದೆ.
ಈ ವೇಳೆ ಕಾಪು ಎಸ್ಐ ತೇಜಸ್ವಿ ತಮ್ಮ ಸರ್ವೀಸ್ ಪಿಸ್ತೂಲಿನಿಂದ ರಾಜು ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ಈವೇಳೆ ಎಸ್ ಐ ತೇಜಸ್ವಿ ಅವರಿಗೆ ಗಾಯವಾಗಿದ್ದು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆ ಗೆ ಉಡುಪಿ ಎಸ್ಪಿ ಹರಿರಾಮ್ ಶಂಕರ್ ಭೇಟಿ ನೀಡಿದ್ದಾರೆ.
Next Story




