Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪರಶುರಾಮ ಥೀಮ್ ಪಾರ್ಕ್ ಧಾರ್ಮಿಕ...

ಪರಶುರಾಮ ಥೀಮ್ ಪಾರ್ಕ್ ಧಾರ್ಮಿಕ ಕ್ಷೇತ್ರವೇ ಅಲ್ಲ: ಶಾಸಕ ಸುನೀಲ್ ಕುಮಾರ್

‘ಅನುಮಾನ ಇದ್ದರೆ ತನಿಖೆ ಮಾಡಲಿ’

ವಾರ್ತಾಭಾರತಿವಾರ್ತಾಭಾರತಿ21 Oct 2023 8:28 PM IST
share
ಪರಶುರಾಮ ಥೀಮ್ ಪಾರ್ಕ್ ಧಾರ್ಮಿಕ ಕ್ಷೇತ್ರವೇ ಅಲ್ಲ: ಶಾಸಕ ಸುನೀಲ್ ಕುಮಾರ್

ಉಡುಪಿ, ಅ.21: ಪರಶುರಾಮ ಥೀರ್ಮ್ ಪಾರ್ಕ್‌ನಲ್ಲಿ ಹಿಂದುತ್ವ ಮತ್ತು ಹಿಂದೂಗಳ ಭಾವನೆಗೆ ದಕ್ಕೆಯಾಗಿದೆ ಎಂದೆಲ್ಲ ಕೆಲವರು ಬೊಬ್ಬೆ ಹಾಕುತ್ತಿದ್ದಾರೆ. ಆದರೆ ಪರಶುರಾಮ ಥೀಮ್ ಪಾರ್ಕ್ ಧಾರ್ಮಿಕ ಕ್ಷೇತ್ರವೇ ಅಲ್ಲ. ಅದೊಂದು ಪ್ರವಾಸಿ ತಾಣ ಆಗಿದೆ. ಅಲ್ಲಿಗೆ ಯಾರು ಬೇಕಾದರೂ ಪಾದರಕ್ಷೆಯನ್ನು ಹಾಕಿಕೊಂಡು ಹೋಗಬಹುದು. ಅಲ್ಲಿ ತೆಂಗಿನಕಾಯಿ ಒಡೆ ಯಲು, ಊದುಬತ್ತಿ ಹಚ್ಚಲು, ಮಂಗಳಾರತಿ ಮಾಡಲು ಅವಕಾಶವೇ ಇಲ್ಲ ಎಂದು ಕಾರ್ಕಳ ಶಾಸಕ, ಮಾಜಿ ಸಚಿವ ಸುನೀಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಕಾರ್ಕಳ ಬಿಜೆಪಿ ಕಚೇರಿಯಲ್ಲಿಂದು ನಡೆದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರವಾಸೋದ್ಯಮ ಬೆಳೆಸುವ ನಿಟ್ಟಿನಲ್ಲಿ ಪರಶುರಾಮ ಥೀಮ್ ಪಾರ್ಕ್ ಸ್ಥಾಪಿಸಲಾಗಿದೆ. ಈ ಯೋಜನೆ ಪೂರ್ಣಗೊಂಡಿಲ್ಲ, ಇದರಲ್ಲಿ ಸಣ್ಣಪುಟ್ಟ ಬದಲಾವಣೆಗಳಿವೆ ಮತ್ತು ಅದಕ್ಕೆ ಎರಡು ತಿಂಗಳ ಕಾಲಾವಕಾಶಬೇಕೆಂದು ವಿಗ್ರಹ ನಿರ್ಮಿಸಿದ ಶಿಲ್ಪಿಗೆ ಸನ್ಮಾನ ಮಾಡುವ ಸಂದರ್ಭದಲ್ಲೇ ನಾನು ಹೇಳಿದ್ದೆ ಎಂದರು.

ಅದೊಂದು ಪ್ರವಾಸೋದ್ಯಮ ಸ್ಥಳವೆಂದು ಮೊದಲಿನಿಂದಲೂ ನಾನು ಹೇಳಿಕೊಂಡು ಬಂದಿದ್ದೇನೆ. ಆದರೆ ಕೆಲವರಿಗೆ ಈಗ ಹಿಂದುತ್ವ ಶುರುವಾಗಿ ಬಿಟ್ಟಿದೆ. ಭಾವನೆಗೆ ಧಕ್ಕೆಯಾಗಿದೆಂದು ಹೇಳುವವರು ಪಾರ್ಕ್‌ನ ಕೆಳಗೆ ನಿರ್ಮಿಸಿರುವ ಭಜನಾ ಮಂದಿರಕ್ಕೆ ಒಂದು ದಿನವೂ ಭೇಟಿ ಕೊಟ್ಟಿಲ್ಲ. ಒಂದು ರೂಪಾಯಿ ಹುಂಡಿಗೆ ದುಡ್ಡು ಹಾಕಿಲ್ಲ ಎಂದು ಅವರು ಟೀಕಿಸಿದರು.

ಇದಕ್ಕೆ ಧಾರ್ಮಿಕ ಸ್ಪರ್ಶ ಕೊಡುವ ನಿಟ್ಟಿನಲ್ಲಿ ಕೆಳಗೊಂದು ಭಜನಾ ಮಂದಿರ ನಿರ್ಮಾಣ ಮಾಡಲಾಗಿದೆ. ಮೂರು ದಿನಗಳ ಕಾರ್ಯದಲ್ಲಿ ಮೊದಲ ದಿನ ಪರಶುರಾಮ ಮೂರ್ತಿಯ ಉದ್ಘಾಟನೆ, ಎರಡನೇ ದಿನ ಭಜನಾ ಮಂದಿರದ ಉದ್ಘಾಟನೆ ಮಾಡಲಾಗಿದೆ. ಧಾರ್ಮಿಕತೆ ಬೇರೆ, ಪ್ರವಾಸೋದ್ಯಮ ಬೇರೆ ಎಂಬ ಕಾರಣಕ್ಕೆ ಈ ಎರಡು ಕಾರ್ಯಕ್ರಮವನ್ನು ಬೆರೆಸಿಲ್ಲ. ಪರಶುರಾಮನ ಮೂರ್ತಿಯನ್ನು ಬೇರೆಯಾಗಿ ಉದ್ಘಾಟನೆ ಮಾಡಲಾಗಿತ್ತು. ಇದು ಅರ್ಥ ಮಾಡಿಕೊಳ್ಳದ ಕೆಲವರು ದಿನಕ್ಕೊಂದು ಕಟ್ಟು ಕತೆಗಳನ್ನು ಹೇಳಿ ಜನರನ್ನು ನಂಬಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.

ಸಭೆಯಲ್ಲಿ ಬಿಜೆಪಿ ಮುಖಂಡರಾದ ಮಣಿರಾಜ್ ಶೆಟ್ಟಿ, ಮಹಾವೀರ ಜೈನ್, ರೇಷ್ಮಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

‘ಅನುಮಾನ ಇದ್ದರೆ ತನಿಖೆ ಮಾಡಲಿ’

ಪರಶುರಾಮ ಮೂರ್ತಿಯ ಬಗ್ಗೆ ಅನುಮಾನ ಇದ್ದರೆ ತನಿಖೆ ಮಾಡಲಿ. ಯಾರು ಕೂಡ ತನಿಖೆ ಮಾಡಬೇಡಿ ಎಂದು ಹೇಳಿಲ್ಲ. ಇವರ ಸರಕಾರ ಬಂದು ಐದು ತಿಂಗಳಾದರೂ ಈ ಕುರಿತು ಯಾಕೆ ಇನ್ನೂ ತನಿಖೆ ಮಾಡುತ್ತಿಲ್ಲ. ಇವರು ತನಿಖೆ ಮಾಡದಿರುವುದರಿಂದ ಇದರಲ್ಲಿ ಅವರ ಸಮಸ್ಯೆ ಇದೆಯೇ ಹೊರತು ನಮ್ಮ ಸಮಸ್ಯೆ ಅಲ್ಲ ಎಂದು ಶಾಸಕ ಸುನೀಲ್ ಕುಮಾರ್ ಹೇಳಿದರು.

ಗುಣಮಟ್ಟದಲ್ಲಿ ವ್ಯತ್ಯಾಸ ಆಗಿದ್ದರೆ ಅವನನ್ನು ಗಲ್ಲಿಗೇರಿಸಿ, ಯಾರನ್ನೂ ಬೇಕಾದರೂ ಶಿಕ್ಷೆಗೆ ಒಳಪಡಿಸಿ ಎಂದು ನಾವು ಅವತ್ತೇ ಹೇಳಿದ್ದೆವು. ಈ ವಿಚಾರದಲ್ಲಿ ಕಾಂಗ್ರೆಸ್ ದ್ವಂದ್ವ ನಿಲುವು ಪ್ರದರ್ಶಿಸುತ್ತಿದೆ. ತನಿಖೆ ಮಾಡಲು ತಯಾರಿಲ್ಲ. ಪಾರ್ಕ್‌ಗೆ ನಾವು ಮಂಜೂರಾತಿ ಮಾಡಿದ ಹಣ ಬಿಡುಗಡೆ ಮಾಡಲು ತಯಾರಿಲ್ಲ. ಕೆಲಸ ಶುರು ಮಾಡಲು ತಯಾರಿಲ್ಲ, ಅಪಪ್ರಚಾರ ನಿಲ್ಲಿಸಲು ತಯಾರಿಲ್ಲ. ಯಾವುದನ್ನೂ ಮಾಡಲು ತಯಾರಿಲ್ಲ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X