ಬಸ್ ಢಿಕ್ಕಿ: ಪಾದಚಾರಿ ಮೃತ್ಯು

ಪಡುಬಿದ್ರಿ: ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ರವಿವಾರ ಸಂಜೆ ಪಡುಬಿದ್ರಿ ಜಂಕ್ಷನ್‌ನಲ್ಲಿ ನಡೆದಿದೆ.
ಮೃತರನ್ನು ಪಡುಬಿದ್ರಿ ಕಂಚಿನಡ್ಕ ನಿವಾಸಿ ಶೇಖರ್ (48) ಎಂದು ಗುರುತಿಸಲಾಗಿದೆ. ಅತಿ ವೇಗ ಅಜಾಗರೂಕತೆ ಯಿಂದ ಚಲಾಯಿಸಿಕೊಂಡು ಬಂದ ಬಸ್, ರಸ್ತೆ ಬದಿ ನಿಂತಿದ್ದ ಶೇಖರ್ ಅವರಿಗೆ ಡಿಕ್ಕಿ ಹೊಡೆಯುತ್ತೆನ್ನಲಾಗಿದೆ. ಇದರಿಂದ ರತ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಅವರು ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮತ ಪಟ್ಟರು ಎಂದು ತಿಳಿದು ಬಂದಿದೆ ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣವು ದಾಖಲಾಗಿದೆ.
ಅವಿವಾಹಿತರಾಗಿರುವ ಶೇಖರ್ ಸೆಕ್ಯೂರಿಟಿ ಗಾಡ್೯ ಕೆಲಸ ನಿರ್ವಹಿಸುತ್ತಿದ್ದರು. ಮೃತರು ತಾಯಿ, ಸಹೋದರ ಹಾಗೂ ಮೂವರು ಸಹೋದರಿಯರನ್ನು ಅಗಲಿದ್ದಾರೆ.
Next Story




