ಪೆರ್ಡೂರು | ಡಿ.7ರಂದು ರಾಜ್ಯಮಟ್ಟದ ಸಂಗೀತ ಸ್ಪರ್ಧೆಯ ಸೆಮಿಫೈನಲ್

ಸಾಂದರ್ಭಿಕ ಚಿತ್ರ
ಪೆರ್ಡೂರು, ಡಿ.5: ಕುಂಬಾರರ ಗುಡಿ ಕೈಗಾರಿಕಾ ಸಹಕಾರಿ ಸಂಘ ಪೆರ್ಡೂರು, ಉದಯ ಕೃಷ್ಣಯ್ಯ ಶೆಟ್ಟ ಚಾರಿಟೇಬಲ್ ಟ್ರಸ್ಟ್ ಇವರ ಸಹಯೋಗದೊಂದಿಗೆ ಹೆಬ್ರಿ ಚಾಣಕ್ಯ ಮ್ಯೂಸಿಕ್ ಅಕಾಡೆಮಿ ನೇತೃತ್ವದಲ್ಲಿ ವಾಯ್ಸ್ ಆಫ್ ಚಾಣಕ್ಯ -2025 ರಾಜ್ಯ ಮಟ್ಟದ ಟ್ರ್ಯಾಕ್ ಸಂಗೀತ ಸಮರದ ಸೆಮಿಫೈನಲ್ ಡಿ.7ರಂದು ಮಧ್ಯಾಹ್ನ 1.30ರಿಂದ ಪೆರ್ಡೂರು ಎಪಿಟಿ ಶಾಲೆ ಎದುರಿರುವ ಅನಂತ ಸೌರಭ ಸಭಾಂಗಣದಲ್ಲಿ ನಡೆಯಲಿದೆ.
ಸಮಾರಂಭವನ್ನು ಪೆರ್ಡೂರು ಬಂಟರ ಸಂಘ ಅಧ್ಯಕ್ಷ ಕೆ.ಶಾಂತರಾಮ ಸೂಡ ಉದ್ಘಾಟಿಸಲಿದ್ದು, ಪೆರ್ಡೂರು ಕುಂಬಾರರ ಗುಡಿ ಕೈಗಾರಿಕಾ ಸಂಘದ ಅಧ್ಯಕ್ಷ ಸಂತೋಷ ಕುಲಾಲ್ ಅಧ್ಯಕ್ಷತೆ ವಹಿಸಲಿದ್ದಾರೆ.
ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಸುಮಾರು 30ಗಾಯಕರು ಸ್ಪರ್ಧಿಸಲಿದ್ದು, ಭಾಗವಹಿಸಿದ ಎಲ್ಲರಿಗೂ ಪ್ರಮಾಣ ಪತ್ರ ವಿತರಣೆ ಹಾಗೂ ಕಾರ್ಯಕ್ರಮದ ನಡುವೆ ಚಾಣಕ್ಯ ಡ್ಯಾನ್ಸ್ ಅಕಾಡೆಮಿ ಪೆರ್ಡೂರು ತಂಡದ ವಿದ್ಯಾರ್ಥಿಗಳಿಂದ ಆಕರ್ಷಕ ನೃತ್ಯ ವೈವಿಧ್ಯ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
Next Story





