Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸೂಕ್ತ ಪ್ರಸ್ತಾವನೆ ಬಂದರೆ...

ಸೂಕ್ತ ಪ್ರಸ್ತಾವನೆ ಬಂದರೆ ನಂದಿಕೂರಿನಲ್ಲಿ ಗ್ರೀನ್‌ಫೀಲ್ಡ್ ಏರ್‌ಪೋರ್ಟ್‌ಗೆ ಅನುಮತಿ: ಸಚಿವ ರಾಮಮೋಹನ್ ನಾಯ್ಡು

ವಾರ್ತಾಭಾರತಿವಾರ್ತಾಭಾರತಿ10 Feb 2026 10:10 PM IST
share
ಸೂಕ್ತ ಪ್ರಸ್ತಾವನೆ ಬಂದರೆ ನಂದಿಕೂರಿನಲ್ಲಿ ಗ್ರೀನ್‌ಫೀಲ್ಡ್ ಏರ್‌ಪೋರ್ಟ್‌ಗೆ ಅನುಮತಿ: ಸಚಿವ ರಾಮಮೋಹನ್ ನಾಯ್ಡು

ಉಡುಪಿ, ಫೆ.10: ರಾಜ್ಯ ಸರಕಾರವೂ ಸೇರಿದಂತೆ ಯಾವುದೇ ಏರ್‌ಪೋರ್ಟ್ ಡೆವಲಪರ್‌ರಿಂದ ಸೂಕ್ತವಾದ ಪ್ರಸ್ತಾವನೆ ಸಲ್ಲಿಕೆಯಾದರೆ ಕಾಪು ತಾಲೂಕಿನ ನಂದಿಕೂರಿನಲ್ಲಿ ಉಡಾನ್ ಯೋಜನೆಯಡಿ ಅಂತಾರಾಷ್ಟ್ರೀಯ ಸಬ್ ಏರ್‌ಪೋರ್ಟ್‌ನ್ನು ನಿರ್ಮಿಸಲು ಇಲಾಖೆ ಅನುಮೋದನೆ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಕೇಂದ್ರ ವಿಮಾನಯಾನ ಸಚಿವ ರಾಮ್‌ಮೋಹನ್ ನಾಯ್ದು ಭರವಸೆ ನೀಡಿದ್ದಾರೆ.

ನಂದಿಕೂರಿನಲ್ಲಿ ವಿಮಾನನಿಲ್ದಾಣ ಸ್ಥಾಪನೆಯ ಕುರಿತಂತೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕೋರಿಕೆ ಮೇರೆಗೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರು ಕಳೆದ ಅ.14ರಂದು ಇಲಾಖೆಗೆ ಬರೆದ ಪತ್ರಕ್ಕೆ ಜ.31ರಂದು ನೀಡಿದ ಉತ್ತರದಲ್ಲಿ ರಾಮ್‌ಮೋಹನ್ ನಾಯ್ದು ಈ ವಿಷಯ ತಿಳಿಸಿದ್ದಾರೆ.

ಭಾರತ ಸರಕಾರ 2008ರಲ್ಲಿ ಗ್ರೀನ್‌ಫೀಲ್ಡ್ ಏರ್‌ಪೋರ್ಟ್(ಜಿಎಫ್‌ಎ) ಪಾಲಿಸಿಯನ್ನು ರೂಪಿಸಿದ್ದು, ಇದರ ಮಾರ್ಗ ಸೂಚಿಗಳು, ಕಾರ್ಯವಿಧಾನ ಹಾಗೂ ನಿಬಂಧನೆಗಳಂತೆ ದೇಶದಲ್ಲಿ ನೂತನ ಗ್ರೀನ್‌ಫೀಲ್ಡ್ ಏರ್‌ಪೋರ್ಟ್ ನಿರ್ಮಾಣಕ್ಕೆ ಕೇಂದ್ರ ಸರಕಾರ ಅನುಮತಿಯನ್ನು ನೀಡುತ್ತದೆ ಎಂದವರು ಹೇಳಿದ್ದಾರೆ.

ಯೋಜನೆಯಂತೆ ರಾಜ್ಯ ಸರಕಾರವೂ ಸೇರಿದಂತೆ, ಯಾವುದೇ ಏರ್‌ಪೋರ್ಟ್ ಡೆವಲಪರ್‌ಗಳು ವಿಮಾನ ನಿಲ್ದಾಣವನ್ನು ನಿರ್ಮಿಸಲು ಬಯಸಿದರೆ, ಸೂಕ್ತವಾದ ಜಾಗವನ್ನು ಗುರುತಿಸಿ, ಆ ಜಾಗದಲ್ಲಿ ನಿಲ್ದಾಣ ಸ್ಥಾಪನೆಗೆ ಸಾಧ್ಯತಾ ಅಧ್ಯಯನ ನಡೆಸಿ ಪ್ರಸ್ತಾಪವನ್ನು ಕೇಂದ್ರ ಸರಕಾರಕ್ಕೆ ‘ಜಾಗದ ಕ್ಲಿಯರೆನ್ಸ್’ಗೆ ಕೇಂದ್ರ ಸರಕಾರಕ್ಕೆ ಸಲ್ಲಿಸಬೇಕು. ಆಗ ಸರಕಾರ ಅದನ್ನು ಪರಿಶೀಲಿಸಿ ಇನ್‌ಪ್ರಿನ್ಸಿಪಲ್ ಅನುಮೋದನೆ ನೀಡುತ್ತದೆ ಎಂದು ಸಚಿವರು ವಿವರಿಸಿದ್ದಾರೆ.

ಕರ್ನಾಟಕದ ನಂದಿಕೂರಿಗೆ ಸಂಬಂಧಿಸಿದಂತೆ ಸದ್ಯಕ್ಕೆ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಯಾವುದೇ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ. ಮುಂದೆ ರಾಜ್ಯ ಸರಕಾರ ಅಥವಾ ಏರ್‌ಪೋರ್ಟ್ ಡೆವಲಪರ್‌ರಿಂದ ಇದಕ್ಕೆ ಪ್ರಸ್ತಾಪ ಸಲ್ಲಿಕೆಯಾದರೆ ಗ್ರೀನ್‌ಫೀಲ್ಡ್ ಏರ್‌ಪೋರ್ಟ್ ಪಾಲಿಸಿ 2008ರ ನಿಬಂಧನೆಗಳಂತೆ ಅನುಮೋದನೆಗೆ ಪರಿಶೀಲನೆ ನಡೆಸಲಾಗುವುದು ಎಂದವರು ಹೇಳಿದ್ದಾರೆ.

ಸದ್ಯ ದೇಶದಲ್ಲಿ 21 ಗ್ರೀನ್‌ಫೀಲ್ಡ್ ಏರ್‌ಪೋರ್ಟ್‌ಗಳಿದ್ದು, ಇವುಗಳಲ್ಲಿ ಕರ್ನಾಟಕದ ಕಲಬುರ್ಗಿ, ವಿಜಯಪುರ, ಹಾಸನ ಹಾಗೂ ಶಿವಮೊಗ್ಗ ವಿಮಾನ ನಿಲ್ದಾಣಗಳೂ ಸೇರಿವೆ. ಅಭಿವೃದ್ಧಿಯಾಗದ ಜಾಗದಲ್ಲಿ ಸಂಪೂರ್ಣ ಹೊಸದಾಗಿ ವಿಮಾನನಿಲ್ದಾಣವನ್ನು ನಿರ್ಮಿಸಿದರೆ ಅದನ್ನು ಗ್ರೀನ್‌ಫೀಲ್ಡ್ ಏರ್‌ಪೋರ್ಟ್ ಎಂದು ಕರೆಯಲಾಗುತ್ತದೆ. ನವಿಮುಂಬಯಿ ಇಂಟರ್‌ನೇಷನಲ್ ಏರ್‌ಪೋರ್ಟ್ ದೇಶದ ಅತ್ಯಂತ ವಿಶಾಲವಾದ ಗ್ರೀನ್‌ಫೀಲ್ಡ್ ಏರ್‌ಪೋರ್ಟ್ ಎನಿಸಿಕೊಂಡಿದೆ.



Tags

PermissiongreenfieldairportNandikursuitable
share
ವಾರ್ತಾಭಾರತಿ
ವಾರ್ತಾಭಾರತಿ
Next Story
X