Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಹೃದಯಿ ಹಾಸ್ಯಗಾರ ಪೆರುವಡಿ ನಾರಾಯಣ ಭಟ್...

ಸಹೃದಯಿ ಹಾಸ್ಯಗಾರ ಪೆರುವಡಿ ನಾರಾಯಣ ಭಟ್ ನಿಧನ

ವಾರ್ತಾಭಾರತಿವಾರ್ತಾಭಾರತಿ31 Oct 2023 9:37 PM IST
share
ಸಹೃದಯಿ ಹಾಸ್ಯಗಾರ ಪೆರುವಡಿ ನಾರಾಯಣ ಭಟ್ ನಿಧನ

ಪುತ್ತೂರು/ಉಡುಪಿ, ಅ.31: ಒಂದು ಶತಮಾನದ ಯಕ್ಷಗಾನ ಚರಿತ್ರೆಗೆ ಸಾಕ್ಷಿಯಂತೆ ಬದುಕಿದ ಹಾಸ್ಯಗಾರ ಪೆರುವಡಿ ನಾರಾಯಣ ಭಟ್ (96) ಮಂಗಳವಾರ ಪುತ್ತೂರಿನಆಸ್ಪತ್ರೆಯಲ್ಲಿ ವಯೋಸಹಜವಾಗಿ ನಿಧನರಾಗಿದ್ದಾರೆ.

ಅವರು ಮೂವರು ಪುತ್ರಿಯರು, ಅಳಿಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

ಪುತ್ತೂರಿನ ಬಪ್ಪಳಿಗೆ ಸಮೀಪದ ತೆಂಕಿಲ ನೂಜಿ ಶ್ರೀದುರ್ಗಾ ನಿಲಯದ ನಿವಾಸಿ ಪೆರುವಡಿ ನಾರಾಯಣ ಭಟ್ ಆರನೇ ತರಗತಿಯವರೆಗೆ ವಿದ್ಯಾಬ್ಯಾಸ ಮಾಡಿದ ಬಳಿಕ ಎಂಟನೇ ವರ್ಷದಿಂದ ತಾಳಮದ್ದಳೆಗಳಲ್ಲಿ ಭಾಗವಹಿಸಲು ಪ್ರಾರಂಭಿಸಿ 14ನೇ ವಯಸ್ಸಿನಲ್ಲಿ ನಾಟ್ಯಾಬ್ಯಾಸ ಇಲ್ಲದೆ ಧರ್ಮಸ್ಥಳ ಮೇಳದಲ್ಲಿ ಮೊದಲ ತಿರುಗಾಟವನ್ನು ಮಾಡಿದ್ದರು.

ಶುದ್ಧ ಪರಂಪರೆಯ ಹಾಸ್ಯಗಾರರಾದ ಪೆರುವಡಿ, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ಪೆರುವಡಿಯಲ್ಲಿ ಪದ್ಯಾಣ ಭೀಮ ಭಟ್ ಮತ್ತು ಗುಣವತಿ ಅಮ್ಮ ದಂಪತಿಗಳ ಮಗನಾಗಿ ಮೇ 28, 1927ರಂದು ಜನಿಸಿದರು. ಮಿತ್ತನಡ್ಕ (ಕರೋಪಾಡಿ) ಮತ್ತು ಪೆರುವಡಿ ಕುದ್ರಡ್ಕ ಶಾಲೆಗಳಲ್ಲಿ 6ನೇ ತರಗತಿವರೆಗೆ ಓದಿದ್ದರು. ತನ್ನ 14ನೇ ವಯಸ್ಸಿನಲ್ಲಿ ಧರ್ಮಸ್ಥಳ ಮೇಳದಲ್ಲಿ ಮೊದಲ ತಿರುಗಾಟ ಮಾಡಿದ ನಂತರ ಕುರಿಯ ವಿಠಲ ಶಾಸ್ತ್ರಿಗಳು ನಾಟ್ಯ ಕಲಿಯಲು ಇವರನ್ನು ಪ್ರೇರೇಪಿಸಿದರು.

ಪೆರುವಡಿ ನಾರಾಯಣ ಭಟ್ಟರು ಧರ್ಮಸ್ಥಳ, ಸುರತ್ಕಲ್, ಕದ್ರಿ, ನಂದಾವರ, ಅರುವ, ಕುಂಬಳೆ, ಬಪ್ಪನಾಡು ಮೊದಲಾದ ಮೇಳಗಳಲ್ಲಿ ತಿರುಗಾಟ ನಡೆಸಿದರು. 1954ರಲ್ಲಿ ಮುಲ್ಕಿ ಮೇಳದ ಸಂಚಾಲಕರಾಗಿ ಪೆರುವಡಿ ನಾರಾಯಣ ಭಟ್ಟರು ಮೇಳವನ್ನು 11 ವರ್ಷಗಳ ಕಾಲ ಮುನ್ನಡೆಸಿದ್ದರು. 17 ವರ್ಷಗಳ ಕಾಲ ಧರ್ಮಸ್ಥಳ ಮೇಳದಲ್ಲಿ ತಿರುಗಾಟ ನಡೆಸಿದ್ದರು.

‘ಪಾಪಣ್ಣ ವಿಜಯ - ಗುಣಸುಂದರಿ’ ಪ್ರಸಂಗದ ‘ಪಾಪಣ್ಣ’ ಪಾತ್ರ ಇವರಿಗೆ ಅಪಾರ ಪ್ರಸಿದ್ಧಿಯನ್ನು ತಂದುಕೊಟ್ಟಿತು. ಪೆರುವಡಿ ನಾರಾಯಣ ಭಟ್ಟರು ‘ಪಾಪಣ್ಣ ಭಟ್ರು’ ಎಂದೇ ಪ್ರಸಿದ್ಧರಾದರು. ವೃತ್ತಿ ಸಂಕಷ್ಟವನ್ನು ಸಾರುವ ಮೂರ್ತೆಯ ವನಾಗಿ, ತಾಮಸಿ ಪ್ರವೃತ್ತಿಯ ರಾಕ್ಷಸ ದೂತನಾಗಿ, ಸಹಜ ಬದುಕಿಗೆ ಕನ್ನಡಿ ಹಿಡಿಯುವ ವಿಪ್ರನಾಗಿ, ದೇವತ್ವವನ್ನು ಎತ್ತಿ ಹಿಡಿವ ದೇವದೂತನಾಗಿ ಅಭಿನಯಿಸುತ್ತಾ ಇವರು ಎಲ್ಲಾ ಹಾಸ್ಯಗಾರರಿಗೂ ಆದರ್ಶರಾಗಿದ್ದರು. ಹಾಸ್ಯ ಪಾತ್ರದಲ್ಲಿ ಅವ ರಂತೆ ಭಾಷೆಯನ್ನು ಸೊಗಸಾಗಿ ದುಡಿಸಿಕೊಂಡವರು ವಿರಳ. ಮೂಲತ: ಹಾಸ್ಯಗಾರರಾದರೂ, ಗಂಭೀರ ಪೋಷಕ ಪಾತ್ರಗಳನ್ನೂ ಅವರು ಸಮರ್ಥವಾಗಿ ಪ್ರಸ್ತುತ ಡಿಸಿ ಜನಪ್ರಿಯ ರಾಗಿದ್ದರು.

ಎರಡು ವರ್ಷಗಳ ಹಿಂದೆ ಯಕ್ಷಗಾನ ಕಲಾರಂಗದ ನೇತೃತ್ವದಲ್ಲಿ ಆಯೋಜಿಸಲಾದ ಕೋಳ್ಯೂರು ವೈಭವದ ಸಮಾ ರೋಪ ಸಮಾರಂಭದಲ್ಲಿ ಭಾಗವಹಿಸಿದ್ದರು. ಅದಮಾರು ಮಠದ ವತಿಯಿಂದ ನೀಡಲಾಗುವ ‘ಶ್ರೀನರಹರಿ ತೀರ್ಥ ಯಕ್ಷ ಪ್ರಶಸ್ತಿ’ಯನ್ನು 2022ನೇ ಸಾಲಿನಲ್ಲಿ ಪೆರುವಡಿ ಅವರಿಗೆ ನೀಡಿ ಗೌರವಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X