Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪತ್ರಕರ್ತರು ಸೂಕ್ಷ್ಮ ವಿಚಾರಗಳಲ್ಲಿ...

ಪತ್ರಕರ್ತರು ಸೂಕ್ಷ್ಮ ವಿಚಾರಗಳಲ್ಲಿ ಸತ್ಯಾಸತ್ಯತೆ ಅರಿತು ವರದಿ ಮಾಡುವುದು ಅಗತ್ಯ: ಉಡುಪಿ ಎಸ್ಪಿ ಅಕ್ಷಯ್ ಹಾಕೇ

ಪ್ರತಿಕೋದ್ಯಮ ವಿದ್ಯಾರ್ಥಿಗಳಿಗೆ ಫೋಟೋಗ್ರಫಿ ಕಾರ್ಯಾಗಾರ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ19 Aug 2023 5:38 PM IST
share
ಪತ್ರಕರ್ತರು ಸೂಕ್ಷ್ಮ ವಿಚಾರಗಳಲ್ಲಿ ಸತ್ಯಾಸತ್ಯತೆ ಅರಿತು ವರದಿ ಮಾಡುವುದು ಅಗತ್ಯ: ಉಡುಪಿ ಎಸ್ಪಿ ಅಕ್ಷಯ್ ಹಾಕೇ

ಉಡುಪಿ: ಮಾಧ್ಯಮಗಳು ಕೆಲವೊಂದು ಸೂಕ್ಷ್ಮ ವಿಚಾರ, ವಿವಾದಗಳನ್ನು ವೀಕ್ಷಕರ ಹಾಗೂ ಓದುಗರ ಸಂಖ್ಯೆ ಹೆಚ್ಚು ಮಾಡುವ ಉದ್ದೇಶ ಇಟ್ಟುಕೊಂಡು ಸುದ್ದಿ ಮಾಡದೆ, ಅದರ ಸೂಕ್ಷ್ಮತೆಯನ್ನು ಕಾಪಾಡಿಕೊಂಡು ಸತ್ಯಾ ಸತ್ಯತೆಯನ್ನು ಅರಿತು ವರದಿ ಮಾಡಬೇಕು. ಸೂಕ್ಷ್ಮತೆಯಿಂದ ಕೂಡಿದ ಸುದ್ದಿಗಳ ನೈಜ್ಯತೆ, ಗಂಭೀರತೆ, ಪ್ರಾಮುಖ್ಯತೆ ಹಾಗೂ ಆಳವನ್ನು ತಿಳಿದು ಜನರ ಮುಂದೆ ಇಟ್ಟಾಗ ಮಾತ್ರ ಅದಕ್ಕೆ ನ್ಯಾಯ ಒದಗಿಸಲು ಸಾಧ್ಯ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಹಾಕೇ ಹೇಳಿದ್ದಾರೆ.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ರಜತ ಮಹೋತ್ಸವ ಸಮಿತಿ, ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯದ ಪ್ರಾಯೋಜಕತ್ವದಲ್ಲಿ ವಿಶ್ವ ಛಾಯಾಗ್ರಹಣ ದಿನಾಚರಣೆ ಪ್ರಯುಕ್ತ ಶನಿವಾರ ಉಡುಪಿ ಬ್ರಹ್ಮಗಿರಿಯ ಐಎಂಎ ಭವನದಲ್ಲಿ ಆಯೋಜಿಸಲಾದ ಪ್ರತಿಕೋದ್ಯಮ ವಿದ್ಯಾರ್ಥಿಗಳಿಗೆ ಫೋಟೋಗ್ರಫಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು. ಸಾಮಾಜಿಕ ಜಾಲತಾಣಗಳಿಗೆ ಗಡಿ ಎಂಬುದು ಇಲ್ಲ. ಅಲ್ಲಿ ಯಾರು ಕೂಡ ಏನು ಬೇಕಾದರೂ ಬರೆಯಬಹುದು. ಅದರಲ್ಲಿ ಸತ್ಯ, ಸುಳ್ಳು, ವದಂತಿ ಎಲ್ಲವೂ ಇರುತ್ತದೆ. ಕೆಲವು ಜನರಿಗೆ ಕೆಲವು ವಿಷಯಗಳ ಬಗ್ಗೆ ಏನು ತಿಳಿದಿಲ್ಲದಿದ್ದರೂ ಅದರ ಬಗ್ಗೆ ಹೆಚ್ಚು ಮಾತನಾಡುತ್ತಾರೆ. ಇದರಿಂದ ಸಮಾಜ ಮತ್ತು ಮಾನವೀಯತೆಗೆ ತುಂಬಾ ಹಾನಿಯಾಗುತ್ತದೆ. ಇದು ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಿಗೆ ಇರುವ ವ್ಯಾತ್ಯಾಸವಾಗಿದೆ. ಅದನ್ನು ಉಳಿಸಬೇಕಾದರೆ ಸತ್ಯವನ್ನು ಅರಿತು ಸುದ್ದಿ ಮಾಡಬೇಕು ಎಂದು ಅವರು ತಿಳಿಸಿದರು.

ಒಂದು ಫೋಟೋ ಸಾವಿರ ಶಬ್ದಗಳಿಗೆ ಸಮಾನವಾಗಿರುತ್ತದೆ. ಉತ್ತಮ ಫೋಟೋ ಅಂದರೆ ಕೇವಲ ತಂತ್ರಜ್ಞಾನ, ಕಲೆ ಮಾತ್ರ ಅಲ್ಲ. ಅದರಲ್ಲಿ ಛಾಯಾ ಚಿತ್ರಗ್ರಾಹಕನ ಫಿಲೋಸಫಿ ಕೂಡ ಮುಖ್ಯವಾಗಿರುತ್ತದೆ ಎಂದ ಅವರು, ಎಲ್ಲ ವಿಚಾರಗಳನ್ನು ತಿಳಿದಿರುವ, ಎಲ್ಲ ದೃಷ್ಠಿಕೋನದಲ್ಲಿ ಆಲೋಚನೆ ಮಾಡುವ, ಜನರಪ ಕಾಳಜಿ ಹೊಂದಿರುವ ಮತ್ತು ಸಕಾರಾತ್ಮವಾಗಿ ವಿಮರ್ಶೆ ಮಾಡುವಂತಹ ಶಕ್ತಿ ಇರುವ ವೃತ್ತಿ ಅಂದರೆ ಅದು ಪತ್ರಿಕೋದ್ಯಮ ಎಂದರು. ಛಾಯಾಚಿತ್ರ ಹಾಗೂ ಹಳೆ ಕ್ಯಾಮೆರಾಗಳ ಪ್ರದರ್ಶನವನ್ನು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡು²

ವಲಯ ಅಧ್ಯಕ್ಷ ಜನಾರ್ದನ ಕೊಡವೂರು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಿದ್ದರು ಫೋಟೋಗ್ರಫಿ ಕಾರ್ಯಾಗಾರವನ್ನು ಉದಯವಾಣಿಯ ಛಾಯಾಚಿತ್ರ ಪತ್ರಕರ್ತ ಅಸ್ಟ್ರೋ ಮೋಹನ್, ನುಡಿಚಿತ್ರ ಕಾರ್ಯಾಗಾರವನ್ನು ಮಂಗಳೂರು ವಿಜಯ ಕರ್ನಾಟಕ ಹಿರಿಯ ಉಪಸಂಪಾದಕ ಸುಶೀಲೇಂದ್ರ ಕುಡುಪಾಡಿ ನಡೆಸಿಕೊಟ್ಟರು. ಇಂಡಿಯನ್ ಫೆಡರೇಶನ್ ಆಫ್ ವರ್ಕಿಂಗ್ ಜರ್ನಲಿಸ್ಟ್ ಇದರ ರಾಷ್ಟ್ರೀಯ ಸಮಿತಿ ಸದಸ್ಯ ಅರುಣ್ ಕುಮಾರ್ ಶಿರೂರು, ರಜತ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯಕರ ಸುವರ್ಣ, ಉಡು² ಪತ್ರಿಕಾ ಭವನ ಸಮಿತಿ ಸಂಚಾಲಕ ಅಜಿತ್ ಆರಾಡಿ ಉಪಸ್ಥಿತರಿದ್ದರು.

ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ವಂದಿಸಿದರು. ಪತ್ರಕರ್ತ ಸುಭಾಷ್ ಚಂದ್ರ ವಾಗ್ಳೆ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಾಗಾರದಲ್ಲಿ ಉಡುಪಿ ಅಜ್ಜರಕಾಡು ಮಹಿಳಾ ಪ್ರಥಮ ದರ್ಜೆ ಕಾಲೇಜು, ಉಡುಪಿ ಎಂಜಿಎಂ ಕಾಲೇಜು, ಕಾರ್ಕಳ ಎಂಪಿಎಂ ಕಾಲೇಜು ಮತ್ತು ಕುಂದಾಪುರ ಭಂಡಾರ್ ಕಾರ್ಸ್ ಕಾಲೇಜುಗಳ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಗಮನ ಸೆಳೆದ ಹಳೆ ಕ್ಯಾಮೆರಾ- ಛಾಯಾಚಿತ್ರ ಪ್ರದರ್ಶನ

ಕಾರ್ಯಾಗಾರದಲ್ಲಿ ಏರ್ಪಡಿಸಲಾಗಿದ್ದ ಹಳೆಯ ಕ್ಯಾಮೆರಾಗಳು ಹಾಗೂ ಛಾಯಾಚಿತ್ರ ಪ್ರದರ್ಶನವು ಎಲ್ಲರ ಗಮನ ಸೆಳೆಯಿತು.

40 ವರ್ಷಗಳ ಹಿಂದಿನ ಫೀಲ್ಡ್ ಕ್ಯಾಮೆರಾ, ಅದೇ ರೀತಿ ಹಳೆಯ ಟ್ವಿನ್ ಲೆನ್ಸ್ ರಿಫ್ಲೆಕ್ಸ್ ಕ್ಯಾಮೆರಾ, ಡಿಜಿಟಲ್ ಕ್ಯಾಮೆರಾ, ವಿಎಚ್ಎಸ್ ಹಾಗೂ ಮಿನಿ ಡಿವಿ ವಿಡಿಯೋ ಕ್ಯಾಮೆರಾಗಳು, ಡಿಎಸ್ಎಲ್ಆರ್ ಕ್ಯಾಮೆರಾಗಳನ್ನು ಮತ್ತು ಸಂಘದ ಸದಸ್ಯರು ತೆಗೆದ ಸುದ್ದಿ, ಪರಿಸರ ಸೇರಿದಂತೆ ವಿವಿಧ ರೀತಿಯ ಛಾಯಾಚಿತ್ರಗಳನ್ನು ಪ್ರದರ್ಶಿಸಲಾಗಿತ್ತು.




















share
ವಾರ್ತಾಭಾರತಿ
ವಾರ್ತಾಭಾರತಿ
Next Story
X