Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಜೀವಸಂಕುಲಗಳ ಅವನತಿಗೆ ಮುಖ್ಯ ಕಾರಣ...

ಜೀವಸಂಕುಲಗಳ ಅವನತಿಗೆ ಮುಖ್ಯ ಕಾರಣ ಪ್ಲಾಸ್ಟಿಕ್: ಡಿಸಿ ವಿದ್ಯಾ ಕುಮಾರಿ

ವಾರ್ತಾಭಾರತಿವಾರ್ತಾಭಾರತಿ1 Oct 2023 8:42 PM IST
share
ಜೀವಸಂಕುಲಗಳ ಅವನತಿಗೆ ಮುಖ್ಯ ಕಾರಣ ಪ್ಲಾಸ್ಟಿಕ್: ಡಿಸಿ ವಿದ್ಯಾ ಕುಮಾರಿ

ಉಡುಪಿ, ಅ.1: ದೈನಂದಿನ ಜೀವನದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಬೇಕು. ಬಳಸಿದ ಪ್ಲಾಸ್ಟಿಕ್‌ನ್ನು ಅಲ್ಲಲ್ಲಿ ಎಸೆ ಯುವ ಬದಲು ವ್ಯವಸ್ಥಿತವಾಗಿ ನಿರ್ವಹಣೆ ಮಾಡಬೇಕು. ಇಲ್ಲವಾದಲ್ಲಿ ಅದು ಪರಿಸರದಲ್ಲಿ ಸೇರಿ ಮಾನವ ಸಹಿತ ಇಡೀ ಜೀವಸಂಕುಲಗಳ ಅವನತಿಗೆ ಕಾರಣವಾಗುತ್ತದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಹೇಳಿದ್ದಾರೆ.

ಬಡ ನಿಡಿಯೂರು ಹಾಗೂ ಕೆಮ್ಮಣ್ಣು ಗ್ರಾಮ ಪಂಚಾಯತ್ ವ್ಯಾಪ್ತಿಯ ಆಸರೆ ಬೀಚ್‌ನಲ್ಲಿ ಮಹಾತ್ಮ ಗಾಂಧೀಜಿಯವರ ಜನ್ಮದಿನ ಸ್ಮರಣಾರ್ಥವಾಗಿ ಮತ್ತು ಸ್ವಚ್ಛತಾ ಹೀ ಸೇವಾ ಆಂದೋಲನ ಅಂಗವಾಗಿ ರವಿವಾರ ಆಯೋಜಿಸ ಲಾದ ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮದಲ್ಲಿ ಗಾಂಧಿ ಭಾವಚಿತ್ರಕ್ಕೆ ಪುಷ್ಪ ನಮನ ಮಾಡಿ ಅವರು ಮಾತನಾಡುತಿದ್ದರು.

ನಮ್ಮ ಉತ್ತಮ ಆರೋಗ್ಯಕ್ಕೆ ವೈಯಕ್ತಿಕ ಸ್ವಚ್ಛತೆ, ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛತೆ ಸೇರಿದಂತೆ ಎಲ್ಲಾ ರೀತಿಯ ಸ್ವಚ್ಛತೆ ಬಹಳ ಅವಶ್ಯಕ. ನಮ್ಮ ದೈನಂದಿನ ಜೀವನದಲ್ಲಿ ಶುಚಿತ್ವಕ್ಕೆ ಒತ್ತು ನೀಡಬೇಕು. ಆಗ ಮಾತ್ರ ನಾವು ಉತ್ತಮ ಆರೋಗ್ಯ ಹೊಂದಲು ಸಾಧ್ಯ. ಸ್ವಚ್ಛತೆ ಸ್ವಸ್ಥ ಸಮಾಜದ ಮೂಲಾಧಾರವಾಗಿದೆ ಎಂದರು.

ಉಡುಪಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್. ಮಾತನಾಡಿ, ಇಂದು ಬೀಚ್ ಸ್ವಚ್ಛತೆಯಲ್ಲಿ ಅಪರ ಪ್ರಮಾಣದ ಪ್ಲಾಸ್ಟಿಕ್ ಮತ್ತಿತರ ತ್ಯಾಜ್ಯಗಳನ್ನು ಸಂಗ್ರಹಣೆ ಮಾಡಿದ್ದೇವೆ. ಇದಕ್ಕೆಲ್ಲ ಕಾರಣ ತ್ಯಾಜ್ಯವನ್ನು ಎಲ್ಲಂದರಲ್ಲಿ ಎಸೆದಿರುವುದು. ತ್ಯಾಜ್ಯವನ್ನು ಸೂಕ್ತ ಜಾಗದಲ್ಲಿ ಹಾಕಿದರೆ ಈ ಸಮಸ್ಯೆ ಉದ್ಭವಿಸಲ್ಲ. ಆದುದರಿಂದ ಮನೆಯ ಕಸವನ್ನು ವ್ಯವಸ್ಥಿತವಾಗಿ ನಿರ್ವಹಣೆ ಮಾಡಬೇಕು ಎಂದು ತಿಳಿಸಿದರು.

ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ ಸ್ವಚ್ಛತಾ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ., ಜಿಪಂ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ್ ರಾವ್, ಕೆಮ್ಮಣ್ಣು ಗ್ರಾಪಂ ಅಧ್ಯಕ್ಷೆ ಕುಸುಮ ರವೀಂದ್ರ, ಬಡಾನಿಡಿಯೂರು ಗ್ರಾಪಂ ಅಧ್ಯಕ್ಷೆ ಯಶೋಧ ಆಚಾರ್ಯ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ಮುನ್ನ ಬೀಚ್ ಸ್ವಚ್ಛತಾ ಶ್ರಮದಾನದಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು, ಸಾರ್ವಜನಿಕರು, ವಿದ್ಯಾರ್ಥಿ ಗಳು, ಸ್ವಸಹಾಯ ಸಂಘದ ಸದಸ್ಯರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X