ಪ್ರಧಾನಿ ಮೋದಿ ಅವರ ಉಡುಪಿ ಭೇಟಿ ಇನ್ನೂ ದೃಢಪಟ್ಟಿಲ್ಲ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ.

ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ.
ಉಡುಪಿ: ಇದೇ ನ.28ರಂದು ಉಡುಪಿಗೆ ಪ್ರದಾನ ಮಂತ್ರಿ ನರೇಂದ್ರ ಮೋದಿ ಅವರ ಭೇಟಿ ಇನ್ನೂ ದೃಢಪಟ್ಟಿಲ್ಲ. ಜಿಲ್ಲಾಡಳಿತಕ್ಕೆ ಇನ್ನೂ ಅವರು ಬರುವ ಬಗ್ಗೆ ಸ್ಪಷ್ಟ ಮಾಹಿತಿ ಬಂದಿಲ್ಲ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದ್ದಾರೆ.
ಕರಾವಳಿ ಅಭಿವೃದ್ಧಿ ಮಂಡಳಿಯಿಂದ ಜಿ.ಪಂ. ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಸಂಬಂಧ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಕೇಂದ್ರ ಸರಕಾರ ಕೇಳಿದ ವರದಿಯನ್ನು ಜಿಲ್ಲಾಡಳಿತದಿಂದ ಕಳುಹಿಸಲಾಗಿದೆ. ಇದಕ್ಕೆ ಈವರೆಗೆ ಯಾವುದೇ ದೃಢೀಕರಣ ಬಂದಿಲ್ಲ ಎಂದು ಸ್ವರೂಪ ಟಿ.ಕೆ. ತಿಳಿಸಿದರು.
Next Story





