Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪಿಎಂ ವಿಶ್ವಕರ್ಮ ಯೋಜನೆ | ರಾಜ್ಯಕ್ಕೆ...

ಪಿಎಂ ವಿಶ್ವಕರ್ಮ ಯೋಜನೆ | ರಾಜ್ಯಕ್ಕೆ 961 ಕೋಟಿ ರೂ. ಸಾಲ ಸೌಲಭ್ಯ : ಸಂಸದ ಕೋಟ ಶ್ರೀನಿವಾಸ ಪೂಜಾರಿ

ವಾರ್ತಾಭಾರತಿವಾರ್ತಾಭಾರತಿ6 Dec 2025 9:40 PM IST
share
ಪಿಎಂ ವಿಶ್ವಕರ್ಮ ಯೋಜನೆ | ರಾಜ್ಯಕ್ಕೆ 961 ಕೋಟಿ ರೂ. ಸಾಲ ಸೌಲಭ್ಯ : ಸಂಸದ ಕೋಟ ಶ್ರೀನಿವಾಸ ಪೂಜಾರಿ

ಬ್ರಹ್ಮಾವರ, ಡಿ.6: ನಶಿಸುತ್ತಿರುವ ಸಾಂಪ್ರದಾಯಿಕ ಕುಲಕಸಬುಗಳಿಗೆ ಪ್ರಾಧಾನ್ಯತೆ ನೀಡುವ ನಿಟ್ಟಿನಲ್ಲಿ ಪಿಎಂ ವಿಶ್ವಕರ್ಮ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಬಹುತೇಕ ಹಿಂದುಳಿದ ವರ್ಗ ಮತ್ತು ಸಾಂಪ್ರದಾಯಿಕ ಕುಲಕಸುಬು ಎಂದು ಪರಿಗಣಿಸಲಾದ 18 ವೃತ್ತಿಗಳಿಗೆ ಪುನರ್ ಚೈತನ್ಯ ನೀಡಲು 12,000 ಕೋಟಿ ರೂ. ಬ್ಯಾಂಕ್ ಭದ್ರತೆ ನೀಡಿ ವಿಶ್ವಕರ್ಮ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಇಂದು ಬೆಳಗ್ಗೆ ನಡೆದ ಕಾರ್ಯಕ್ರಮದಲ್ಲಿ ಸುಮಾರು 15 ಮಂದಿ ವಿಶ್ವಕರ್ಮ ಯೋಜನೆಯ ಫಲಾನುಭವಿಗಳಿಗೆ ಕಿಟ್‌ಗಳನ್ನು ವಿತರಿಸಿ ಅವರು ಮಾತನಾಡುತ್ತಿದ್ದರು.

ಈಗಾಗಲೇ ಕರ್ನಾಟಕ ರಾಜ್ಯದಲ್ಲಿ ಕುಶಲಕರ್ಮಿಗಳಿಗಾಗಿ 4,70,000 ಕ್ಕೂ ಹೆಚ್ಚು ಮಂದಿ ತರಬೇತಿ ಪಡೆದಿದ್ದು 1,21,500 ಜನ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ಪಡೆದಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ವಿಶ್ವಕರ್ಮ ಯೋಜನೆಯಡಿಯಲ್ಲಿ ಪ್ರಥಮ ಹಂತದಲ್ಲಿ 9,61,21,000 ರೂ. ಕಡಿಮೆ ಬಡ್ಡಿಯ ಸಾಲ ಬಿಡುಗಡೆ ಮಾಡಲಾಗಿದೆ ಎಂದವರು ವಿವರಿಸಿದರು.

ಇದೇ ವೇಳೆ ಉಡುಪಿ ಜಿಲ್ಲೆಯಲ್ಲಿ 6,514 ಜನರಿಗೆ ತರಬೇತಿ ನೀಡಿ 3934 ಜನರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲಸೌಲಭ್ಯ ನೀಡಲಾಗಿದೆ. ಜಿಲ್ಲೆಯಲ್ಲಿ ಈವರೆಗೆ 38,79,58,000 ರೂ. ಸಾಲ ಸೌಲಭ್ಯ ವಿತರಿಸಲಾಗಿದೆ. 2086 ಜನರಿಗೆ ಟೂಲ್ ಕಿಟ್‌ಗಳನ್ನು ವಿತರಿಸಲಾಗಿದೆ ಎಂದ ಅವರು, ಕುಶಲಕರ್ಮಿಗಳ ಬದುಕಿಗೆ ನವಚೈತನ್ಯ ನೀಡಲು ಪ್ರದಾನಿ ನರೇಂದ್ರ ಮೋದಿ ಈ ಯೋಜನೆಯನ್ನು ಅನುಷ್ಠಾನಗೊಳಿಸಿದ್ದಾರೆ ಎಂದು ಸಂಸದ ಕೋಟ ನುಡಿದರು.

ಉಡುಪಿ ಶಾಸಕ ಯಶಪಾಲ್ ಸುವರ್ಣ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ವೇದಿಕೆಯಲ್ಲಿ ವಾರಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ನಿತ್ಯಾನಂದ, ಅಸಿಸ್ಟೆಂಟ್ ಪೋಸ್ಟಲ್ ಸೂಪರಿಡೆಂಟ್ ವಸಂತ್, ಪೋಸ್ಟ್ ಮಾಸ್ಟರ್ ವಿನಯ್, ಅಂಚೆ ಇನ್‌ಸ್ಪೆಕ್ಟರ್ ಎಂ. ಶಂಕರಪ್ಪ ಲಮಾಣಿ, ಕೌಶಲ್ಯ ಅಭಿವೃದ್ಧಿ ಅಧಿಕಾರಿ ಸೀತಾರಾಮ ಶೆಟ್ಟಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಭುಜಂಗ ಶೆಟ್ಟಿ, ಬಿರ್ತಿ ರಾಜೇಶ್ ಶೆಟ್ಟಿ, ನಾರಾಯಣ ಎಸ್, ಆರೂರು ರಾಜು ಕುಲಾಲ್ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X