Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪೊಳಲಿ: 8-9ನೇ ಶತಮಾನದ ಅಪೂರ್ವ ನರಸಿಂಹ...

ಪೊಳಲಿ: 8-9ನೇ ಶತಮಾನದ ಅಪೂರ್ವ ನರಸಿಂಹ ವಿಗ್ರಹ ಪತ್ತೆ

ವಾರ್ತಾಭಾರತಿವಾರ್ತಾಭಾರತಿ28 Oct 2023 8:51 PM IST
share
ಪೊಳಲಿ: 8-9ನೇ ಶತಮಾನದ ಅಪೂರ್ವ ನರಸಿಂಹ ವಿಗ್ರಹ ಪತ್ತೆ

ಉಡುಪಿ: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಪೊಳಲಿ ಸಮೀಪದ ಕಲ್ಕುಟದ ಭರತ್ ದೋಟ ಇವರ ಜಾಗದಲ್ಲಿ ‘ಬಾಕುಲಜ್ಜ’ ಎಂದು ಸ್ಥಳೀಯರಿಂದ ಕರೆಯಲ್ಪಡುವ ನರಸಿಂಹ ವಿಗ್ರಹವಿದ್ದು, ಇದನ್ನು ಶಿರ್ವ ಎಂ.ಎಸ್.ಆರ್.ಎಸ್ ಕಾಲೇಜಿನ ಇತಿಹಾಸ ಮತ್ತು ಪುರಾತತ್ವ ಉಪನ್ಯಾಸಕ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಮತ್ತು ಅಂತಿಮ ಬಿ.ಎ. ವಿದ್ಯಾರ್ಥಿ ವಿಶಾಲ್ ರೈ ಕೆ ಅಧ್ಯಯನಕ್ಕೆ ಒಳಪಡಿಸಿದ್ದಾರೆ.

ಸ್ಥಳೀಯರು ತಮ್ಮ ದನ-ಕರುಗಳು ಅಸ್ವಸ್ಥ ಅಥವಾ ಕಾಣೆಯಾದ ಸಂದರ್ಭ ದಲ್ಲಿ ಈ ಬಾಕುಲಜ್ಜನಿಗೆ (ನರಸಿಂಹ) ಹರಕೆ ಯನ್ನು ಸಲ್ಲಿಸಿ, ಇಂದಿಗೂ ಪೂಜಿಸಿ ಮತ್ತು ರಕ್ಷಿಸಿಕೊಂಡು ಬಂದಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ವಿಗ್ರಹದ ಪೀಠಭಾಗವು ಭೂಮಿಯಲ್ಲಿ ಹುದುಗಿದ್ದು, ಭೂ ಮೇಲ್ಮೈಯಿಂದ ಸುಮಾರು 2.5 ಅಡಿ ಎತ್ತರವಿರುವ ಈ ವಿಗ್ರಹ ವನ್ನು ಕುಳಿತಿರುವಂತೆ ಕೆತ್ತನೆ ಮಾಡಲಾಗಿದೆ. ಸಿಂಹದ ಮುಖ ಮತ್ತು ಮನುಷ್ಯ ದೇಹ ರಚನೆಯನ್ನು ಹೊಂದಿರುವ ದ್ವಿಭುಜ ಧಾರಿಯಾಗಿರುವ ಈ ನರಸಿಂಹ ಶಿಲ್ಪವು ತನ್ನ ಎಡಗೈಯನ್ನು ಎಡತೊಡೆಯ ಮೇಲೆ ಹಾಗೂ ತನ್ನ ಬಲಗೈಯಲ್ಲಿ ಬಹು ಬೀಜಫಲವನ್ನು ಹಿಡಿದು ಬಲಗಾಲಿನ ಮೊಣಗಂಟಿನ ಮೇಲೆ ಇರಿಸಿ ಕುಳಿತ ಭಂಗಿಯಲ್ಲಿದೆ. ಶಿಲ್ಪದಲ್ಲಿ ಕಂಠಪಟ್ಟಿ, ತೋಳ್ಭಂದಿ, ಕೈಗಡಗದ ವಿನ್ಯಾಸವನ್ನು ಕಾಣಬಹುದಾಗಿದೆ.

ಇದೇ ಮಾದರಿಯ ಇನ್ನೊಂದು ಮೂರ್ತಿಯು ಪೊಳಲಿ ರಾಜರಾಜೇಶ್ವರಿ ದೇವಾಲಯದ ಹತ್ತಿರವಿರುವ ಕೊಟ್ಟಾರಿಪಾಲು ಪ್ರದೇಶದ ನಾರಾಯಣ ಭಟ್ ಇವರ ಜಾಗದಲ್ಲಿದ್ದು, ಇದರ ಕಾಲಮಾನವನ್ನು ಪಾದೂರು ಗುರುರಾಜ ಭಟ್ಟರು ತಮ್ಮ ಸಂಶೋಧನಾ ಗ್ರಂಥವಾದ ‘ಸ್ಟಡೀಸ್ ಇನ್ ತುಳುವ ಹಿಸ್ಟರಿ ಆಂಡ್ ಕಲ್ಚರ್’ನಲ್ಲಿ 8-9 ನೇ ಶತಮಾನದ್ದೆಂದು ಹೇಳಿರುತ್ತಾರೆ.

ಹೀಗಾಗಿ ಅದೇ ರೀತಿಯ ಹೋಲಿಕೆಯನ್ನು ಹೊಂದಿರುವ ಈ ಶಿಲ್ಪವು ಸಹ ಕಾಲಮಾನದ ದೃಷ್ಟಿಯಿಂದ ಸುಮಾರು 8-9ನೇ ಶತಮಾನಕ್ಕೆ ಸೇರಿರಬಹುದೆಂದು ಅಂದಾಜಿಸಿಲಾಗಿದೆ.

ಕ್ಷೇತ್ರಕಾರ್ಯ ಶೋಧನೆಯಲ್ಲಿ ವಿಜಿತಾ ಅಮೀನ್, ರೋಹಿತಾಕ್ಷ, ಸೂರಜ್ ಪೊಳಲಿ ಮತ್ತು ಕೃಷ್ಣ ಪೊಳಲಿಯವರು ಸಹಕಾರ ನೀಡಿದ್ದಾರೆ ಎಂದು ಸಂಶೋಧಕ ಶ್ರುತೇಶ್ ಆಚಾರ್ಯ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X